ಶನಿವಾರ, ಆಗಸ್ಟ್ 31, 2024

ಕೃಷಿ ಇಲಾಖೆ; ಮೊಬೈಲ್ ಆಪ್ ಮೂಲಕ ಬೆಳೆ ಸಮೀಕ್ಷೆಯಲ್ಲಿ ಬೆಳೆಯ ವಿವರ ದಾಖಲಿಸಲು ಅವಕಾಶ

ಬಳ್ಳಾರಿ,ಆ.31(ಕರ್ನಾಟಕ ವಾರ್ತೆ): ಪ್ರಸಕ್ತ ಸಾಲಿನ ಮುಂಗಾರು ಹಂಗಾಮಿನಲ್ಲಿ ಖಾಸಗಿ ನಿವಾಸಿಗಳಿಂದ ರೈತರು ಬೆಳೆದ ಬೆಳೆಗಳ ಮಾಹಿತಿಯನ್ನು ಮೊಬೈಲ್ ಆಪ್ ಮೂಲಕ ಬೆಳೆ ಸಮೀಕ್ಷೆ ಅಪ್ಲೋಡ್ ಮಾಡಲು ಅವಕಾಶವಿದ್ದು, ರೈತರು ಸೆ.30 ರೊಳಗಾಗಿ ಬೆಳೆ ಸಮೀಕ್ಷೆ ಅಪ್ಲೋಡ್ ಮಾಡಬಹುದು ಎಂದು ಜಂಟಿ ಕೃಷಿ ನಿರ್ದೇಶಕ ಮಲ್ಲಿಕಾರ್ಜುನ ಅವರು ತಿಳಿಸಿದ್ದಾರೆ. ರೈತರು ಬೆಳೆದ ಬೆಳೆಗಳ ಬಗ್ಗೆ ನಿಖರವಾಗಿ ಮಾಹಿತಿ ಪಡೆದುಕೊಳ್ಳಲು ಇ-ಆಡಳಿತ ವತಿಯಿಂದ ಅಭಿವೃದ್ಧಿಪಡಿಸಿರುವ ಮೊಬೈಲ್ ಆಪ್ ಮೂಲಕ ಬೆಳೆ ಸಮೀಕ್ಷೆ ನಡೆಸಲಾಗುತ್ತಿದೆ. *ಮೊಬೈಲ್ ಅಪ್ಲಿಕೇಷನ್ ಪಡೆಯಲು ಅನುಸರಿಸಬೇಕಾದ ಅಂಶಗಳು:* ರೈತರು ತಮ್ಮ ಮೊಬೈಲ್‌ನಲ್ಲಿ ಗೂಗಲ್ ಪ್ಲೇಸ್ಟೋರ್‌ನಿಂದ ಬೆಳೆ ಸಮೀಕ್ಷೆ ಮುಂಗಾರು ಹಂಗಾಮಿನ “ಕ್ರಾಪ್ ಸರ್ವೇ ಖಾರಿಫ್ 2024” (Crop Survey Kharif 2024) ಆಪ್‌ನ್ನು ಡೌನ್‌ಲೋಡ್ ಮಾಡಿಕೊಳ್ಳಬೇಕು. ಜಿಲ್ಲೆಯಲ್ಲಿ 350280 ಬೆಳೆ ತಾಕುಗಳಿದ್ದು, ಆ ತಾಕುಗಳಿಗೆ ರೈತರು ತಮ್ಮ ಬೆಳೆಗಳ ಮಾಹಿತಿಯನ್ನು ಸ್ವಯಂ ದಾಖಲಿಸಬೇಕು. ಮೊಬೈಲ್ ಆಪ್‌ನಲ್ಲಿ ಜಿಯೋ ರೆಫ್ರೆನ್ಸ್ಡ್ ಅಂಡ್ ಡಿಜಿಟೈಜ್‌ಡ್ (Geo Referenced and Digitized) ಬೆಳೆ ಗ್ರಾಮ ನಕಾಶೆ ಅಳವಡಿಸಲಾಗಿರುವುದರಿಂದ ಆಯಾ ತಾಕಿನ ಗಡಿ ರೇಖೆಯೊಳಗೆ ಹೋಗಿ ಜಿಪಿಎಸ್ ನಿಖರತೆ ಪಡೆದು ಛಾಯಾಚಿತ್ರದೊಂದಿಗೆ ರೈತರು ಬೆಳೆಯ ವಿವರಗಳನ್ನು ಎಲ್ಲಾ ಬೆಳೆಗಳ ವಿವರಗಳನ್ನು ಕಡ್ಡಾಯವಾಗಿ ದಾಖಲಿಸಬೇಕು. ಬೆಳೆ ಸಮೀಕ್ಷೆ ದತ್ತಾಂಶ ಮಾಹಿತಿಯನ್ನು ಬೆಳೆ ವಿಸ್ತರಣೆ ಎಣಿಕೆ ಕಾರ್ಯದಲ್ಲಿ, ಬೆಳೆ ಕಟಾವು ಪ್ರಯೋಗದಲ್ಲಿ, ಪ್ರಕೃತಿ ವಿಕೋಪ ಸಂದರ್ಭದಲ್ಲಿ, ಬೆಳೆಹಾನಿ ವರದಿ ಸಿದ್ಧಪಡಿಸಲು, ಬೆಳೆ ವಿಮಾ ಯೋಜನೆ, ಬೆಂಬಲ ಬೆಲೆ ಯೋಜನೆ, ಆರ್.ಟಿ.ಸಿ.ಯಲ್ಲಿ ಬೆಳೆ ವಿವರ ದಾಖಲಿಸಲು, ರಾಷ್ಟಿçÃಯ ಹಾಗೂ ಗ್ರಾಮೀಣ ಬ್ಯಾಂಕ್‌ಗಳಲ್ಲಿ ಬೆಳೆ ಸಾಲ ಮಂಜೂರು ಮಾಡಲು ಬೆಳೆ ಸಮೀಕ್ಷೆ ಮಾಹಿತಿಯನ್ನು ಉಪಯೋಗಿಸಲಾಗುತ್ತದೆ. ಹೆಚ್ಚಿನ ಮಾಹಿತಿಗಾಗಿ ಕೃಷಿ, ತೋಟಗಾರಿಕೆ, ಪಿ.ಆರ್ ಅಥವಾ ಕಂದಾಯ ಇಲಾಖೆಯ ಸಿಬ್ಬಂದಿಗಳನ್ನು ಸಂಪರ್ಕಿಸಬಹುದು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ---------

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ