ಶನಿವಾರ, ಆಗಸ್ಟ್ 17, 2024
ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ; ಶಿಷ್ಯವೇತನಕ್ಕಾಗಿ ಅರ್ಜಿ ಆಹ್ವಾನ
ಬಳ್ಳಾರಿ,ಆ.17(ಕರ್ನಾಟಕ ವಾರ್ತೆ):
ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ ಪ್ರಸಕ್ತ ಸಾಲಿನ ಸರ್ಕಾರಿ, ಖಾಸಗಿ, ಅನುದಾನಿತ ಕಾಲೇಜುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಪರಿಶಿಷ್ಟ ಪಂಗಡದ ಮೆಟ್ರಿಕ್ ನಂತರದ ವಿದ್ಯಾರ್ಥಿಗಳಿಗೆÀ ಶಿಷ್ಯವೇತನ ಪಡೆಯಲು ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಆಸಕ್ತ ಅರ್ಹ ವಿದ್ಯಾರ್ಥಿಗಳು ರಾಜ್ಯ ಸ್ಕಾಲರ್‌ಶಿಪ್ ಪೋರ್ಟಲ್‌ನ ವೆಬ್‌ಸೈಟ್ hಣಣಠಿs://ssಠಿ.ಠಿosಣmಚಿಣಡಿiಛಿ.ಞಚಿಡಿಟಿಚಿಣಚಿಞಚಿ.gov.iಟಿ ಮೂಲಕ ಅರ್ಜಿ ಸಲ್ಲಿಸಬಹುದು.
ಅರ್ಜಿ ಸಲ್ಲಿಸಿದ ನಂತರ ಅರ್ಜಿಯ ಸ್ವೀಕೃತಿ ಪ್ರತಿಯೊಂದಿಗೆ ಜಾತಿ ಮತ್ತು ಆದಾಯ ಪ್ರಮಾಣ ಪತ್ರ, ಆಧಾರ್‌ಕಾರ್ಡ್, ಬ್ಯಾಂಕ್ ಪಾಸ್‌ಬುಕ್ ಹಾಗೂ ಇತರೆ ದಾಖಲಾತಿಗಳೊಂದಿಗೆ ಸಂಬAಧಿಸಿದ ಕಾಲೇಜು ಪ್ರಾಚಾರ್ಯರಿಗೆ ಸಲ್ಲಿಸಬೇಕು.
ಹೆಚ್ಚಿನ ಮಾಹಿತಿಗಾಗಿ ನಗರದ ವಾಲ್ಮೀಕಿ ಭವನದ ತಾಲ್ಲೂಕು ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿಗಳ ಕಚೇರಿ ಅಥವಾ ಮೊ.9110224569 ಗೆ ಸಂಪರ್ಕಿಸಬಹುದು ಎಂದು ತಾಲ್ಲೂಕು ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿಯವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
--------
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)
ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ