ಬುಧವಾರ, ಆಗಸ್ಟ್ 21, 2024

ಯುವಕ ಕಾಣೆ: ಪತ್ತೆಗೆ ಮನವಿ

ಬಳ್ಳಾರಿ,ಆ.21(ಕರ್ನಾಟಕ ವಾರ್ತೆ): ನಗರದ ಕೋಟೆ ಪ್ರದೇಶದ ಸೆಂಟ್ ಜಾನ್ಸ್ ಕಾಲೇಜಿನ ಪ್ರಥಮ ವರ್ಷದ ಪಿಯುಸಿ ಕಲಾ ವಿಭಾಗದ ವಿದ್ಯಾರ್ಥಿ ವಿರೇಶ್ ಎನ್ನುವ 17 ವರ್ಷದ ಆ.08 ರಂದು ಕಾಣೆಯಾಗಿರುವ ಕುರಿತು ಕೌಲ್‌ಬಜಾರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪತ್ತೆಗೆ ಸಹಕರಿಸಬೇಕು ಎಂದು ಪೊಲೀಸ್ ಸಬ್‌ಇನ್ಸ್ಪೆಕ್ಟರ್ ಅವರು ತಿಳಿಸಿದ್ದಾರೆ. ಚಹರೆ ಗುರುತು: ಎತ್ತರ 5.2 ಅಡಿ, ಕೋಲು ಮುಖ, ಕಪ್ಪು ಮೈಬಣ್ಣ, ತೆಳುವಾದ ಮೈಕಟ್ಟು ಹೊಂದಿದ್ದು, ಕಿವಿಯಲ್ಲಿ ಬಿಳಿ ಹರಳಿನ ಕಡ್ಡಿ ಇರುತ್ತದೆ. ಕಾಣೆಯಾದ ಸಂದರ್ಭದಲ್ಲಿ ಕಪ್ಪು ಬಣ್ಣದ ಪ್ಯಾಂಟ್, ಬಿಳಿ ಮತ್ತು ನೀಲಿ ಚೌಕಳಿಯ ಅಂಗಿ ಧರಿಸಿರುತ್ತಾನೆ. ಯುವಕನ ಬಗ್ಗೆ ಮಾಹಿತಿ ಸಿಕ್ಕಲ್ಲಿ ಕೌಲ್‌ಬಜಾರ್ ಪೊಲೀಸ್ ಠಾಣೆಯ ದೂ.08392-2407731,244145, ಪಿ.ಐ ಮೊ.94808030474, ಪಿಎಸ್‌ಐ ಮೊ.94808203085 ಅಥವಾ ಬಳ್ಳಾರಿ ಕಂಟ್ರೋಲ್ ರೂಂ ದೂ.08392-258100 ಗೆ ಸಂಪರ್ಕಿಸಬಹುದು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ---------

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ