ಶನಿವಾರ, ಆಗಸ್ಟ್ 3, 2024
ಕುಡತಿನಿ: ಸಹಾಯಧನಕ್ಕಾಗಿ ಅರ್ಜಿ ಆಹ್ವಾನ
ಬಳ್ಳಾರಿ,ಆ.03(ಕರ್ನಾಟಕ ವಾರ್ತೆ):
ಕುಡತಿನಿ ಪಟ್ಟಣ ಪಂಚಾಯತ್ ವತಿಯಿಂದ ಪಟ್ಟಣದ ವೈಯಕ್ತಿಕ ನಿರ್ಮಾನಕ್ಕಾಗಿ ಸಹಾಯಧನ ಪಡೆಯಲು ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ ಎಂದು ಕುಡತಿನಿ ಪಟ್ಟಣ ಪಂಚಾಯತ್‌ನ ಮುಖ್ಯಾಧಿಕಾರಿಯವರು ತಿಳಿಸಿದ್ದಾರೆ.
ಆಸಕ್ತರು ಆ.09 ರೊಳಗಾಗಿ ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ಆಧಾರ್ ಕಾರ್ಡ್, ಬ್ಯಾಂಕ್ ಖಾತೆ ಪುಸ್ತಕ, ಜಾತಿ ಮತ್ತು ಆದಾಯ ಪ್ರಮಾಣ ಪತ್ರ, ಭಾವಚಿತ್ರ ಸೇರಿದಂತೆ ಇತರೆ ದಾಖಲಾತಿಗಳನ್ನು ಒದಗಿಸಬೇಕು.
ಹೆಚ್ಚಿನ ಮಾಹಿತಿಗಾಗಿ ಕುಡತಿನಿಯ ಪಟ್ಟಣ ಪಂಚಾಯತ್ ಕಚೇರಿಗೆ ಸಂಪರ್ಕಿಸಬಹುದು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
-------
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)
ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ