ಬುಧವಾರ, ಆಗಸ್ಟ್ 7, 2024
ವ್ಯಕ್ತಿ ಕಾಣೆ; ಪತ್ತೆಗೆ ಮನವಿ
ಬಳ್ಳಾರಿ,ಆ.07(ಕರ್ನಾಟಕ ವಾರ್ತೆ):
ತಾಲ್ಲೂಕಿನ ಕಪ್ಪಗಲ್ಲು ಗ್ರಾಮದ ಅಂಗಡಿ ಗಾದಿಲಿಂಗಪ್ಪ ಎನ್ನುವ 62 ವರ್ಷದ ವ್ಯಕ್ತಿ 2023ರ ಡಿ.25 ರಂದು ಕಾಣೆಯಾಗಿದ್ದು, ಬಳ್ಳಾರಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪತ್ತೆಗೆ ಸಹಕರಿಸಬೇಕು ಎಂದು ಪೊಲೀಸ್ ಸಬ್‌ಇನ್ಸ್ಪೆಕ್ಟರ್ ಅವರು ಮನವಿ ಮಾಡಿದ್ದಾರೆ.
ವ್ಯಕ್ತಿಯ ಚಹರೆ:
ಎತ್ತರ 5.6 ಅಡಿ, ಕೋಲು ಮುಖ, ಕಪ್ಪು ಮೈಬಣ್ಣ, ತೆಳ್ಳನೆಯ ಮೈಕಟ್ಟು ಹೊಂದಿದ್ದು, ಕಪ್ಪು ಮಿಶ್ರಿತ ಬಿಳಿ ಕೂದಲು, ಮೇಲೆಗಣ್ಣು ನೋಟ ಹಾಗೂ ಹೊಟ್ಟೆಯ ಭಾಗದಲ್ಲಿ ಆಪರೇಷನ್ ಮಾಡಿಸಿದ ಹಳೆ ಗಾಯದ ಗುರುತು ಇರುತ್ತದೆ.
ವ್ಯಕ್ತಿ ಕಾಣೆಯಾದ ಸಂದರ್ಭದಲ್ಲಿ ತುಂಬು ತೋಳಿನ ಬಿಳಿ ಅಂಗಿ, ಬಿಳಿ ಪಂಚೆ ಧರಿಸಿದ್ದು, ಕನ್ನಡ ಮತ್ತು ತೆಲುಗು ಭಾಷೆ ಮಾತನಾಡುತ್ತಾನೆ.
ಮೇಲ್ಕಂಡ ಚಹರೆ ಗುರುತುಗಳುಳ್ಳ ವ್ಯಕ್ತಿಯ ಬಗ್ಗೆ ಮಾಹಿತಿ ಸಿಕ್ಕಲ್ಲಿ ಬಳ್ಳಾರಿ ಗ್ರಾಮೀಣ ಪೊಲೀಸ್ ಠಾಣೆಯ ದೂ.08392-27461, ಮೊ.9480803049 ಅಥವಾ ಬಳ್ಳಾರಿ ಪೊಲೀಸ್ ಕಂಟ್ರೋಲ್ ರೂಂ ಸಂ.08392-258100 ಗೆ ಸಂಪರ್ಕಿಸಬಹುದು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
--------
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)

ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ