ಶನಿವಾರ, ಆಗಸ್ಟ್ 3, 2024

‘ಜನರಲ್ ಕೆಎಸ್ ತಿಮ್ಮಯ್ಯ’ ನಗದು ಪ್ರಶಸ್ತಿಗಾಗಿ ಅರ್ಜಿ ಆಹ್ವಾನ

ಬಳ್ಳಾರಿ,ಆ.03(ಕರ್ನಾಟಕ ವಾರ್ತೆ): ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ ವತಿಯಿಂದ ಪ್ರಸಕ್ತ ಸಾಲಿನ ಎಸ್‌ಎಸ್‌ಎಲ್‌ಸಿ ಮತ್ತು ದ್ವಿತೀಯ ಪಿಯುಸಿ ಪರೀಕ್ಷೆಗಳಲ್ಲಿ ಗರಿಷ್ಟ ಅಂಕ ಪಡೆದ ಕರ್ನಾಟಕದ ಮೂಲ ನಿವಾಸಿ ಮಾಜಿ ಸೈನಿಕರ ಮಕ್ಕಳಿಗೆ ‘ಜನರಲ್ ಕೆಎಸ್ ತಿಮ್ಮಯ್ಯ’ ನಗದು ಪ್ರಶಸ್ತಿ ನೀಡಲು ಅರ್ಹ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಮಾಜಿ ಸೈನಿಕರ ಮಕ್ಕಳು ಅಕ್ಟೋಬರ್ 30ರ ಒಳಗಾಗಿ ಆಫ್‌ಲೈನ್ ಮೂಲಕ ಧಾರವಾಡ ಜಿಲ್ಲಾಧಿಕಾರಿ ಕಚೇರಿ ಆವರಣದ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ ಜಂಟಿ ನಿರ್ದೇಶಕರ ಕಚೇರಿಗೆ ಅರ್ಜಿ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗಾಗಿ ಧಾರವಾಡ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ ಜಂಟಿ ನಿರ್ದೇಶಕರ ಕಚೇರಿ ಅಥವಾ ದೂ.0836-2440176 ಗೆ ಸಂಪರ್ಕಿಸಬಹುದು ಎಂದು ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ ಜಂಟಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ---------

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ