ಶುಕ್ರವಾರ, ಆಗಸ್ಟ್ 2, 2024
ಕರಾಮುವಿ: ಪ್ರವೇಶಾತಿಗೆ ಅರ್ಜಿ ಆಹ್ವಾನ
ಬಳ್ಳಾರಿ,ಆ.02(ಕರ್ನಾಟಕ ವಾರ್ತೆ):
ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯವು ಪ್ರಸ್ತಕ ಸಾಲಿಗೆ ಜುಲೈ ಆವೃತ್ತಿಗೆ ಯುಜಿಸಿ ಅನುಮೋದಿತ ಶಿಕ್ಷಣಕ್ರಮಗಳ ಪ್ರವೇಶಾತಿಗಾಗಿ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಿದೆ.
ಬಿ.ಎ, ಬಿ.ಕಾಂ, ಬಿ.ಎಸ್ಸಿ, ಬಿ.ಬಿ.ಎ, ಬಿ.ಸಿ.ಎ, ಬಿ.ಲಿಬ್.ಐ.ಎಸ್ಸಿ, ಬಿ.ಎಸ್.ಡಬ್ಲ್ಯೂ., ಎಂ.ಎ, ಎಂ.ಕಾA, ಎಂ.ಎಸ್ಸಿ, ಎಂ.ಬಿ.ಎ, ಎಂ.ಸಿ.ಎ., ಎಂ.ಎಸ್.ಡಬ್ಲ್ಯೂ., ಎಂ.ಲಿಬ್.ಐ.ಎಸ್ಸಿ., ಪಿಜಿ ಸರ್ಟಿಫಿಕೇಟ್, ಡಿಪ್ಲೋಮಾ ಮತ್ತು ಸರ್ಟಿಫಿಕೇಟ್ ಶಿಕ್ಷಣ ಕ್ರಮಗಳಿಗೆ ಬಳ್ಳಾರಿ ಪ್ರಾದೇಶಿಕ ಕೇಂದ್ರದಲ್ಲಿ ಆನ್‌ಲೈನ್ ಮೂಲಕ ಪ್ರವೇಶಾತಿ ನೀಡಲಾಗುತ್ತಿದೆ.
ವಿಶ್ವವಿದ್ಯಾನಿಲಯದ ಅಂತರ್ಜಾಲ www.ksoumysuru.ac.in ನಲ್ಲಿ ಲಭ್ಯವಿರುವ ಆನ್‌ಲೈನ್ ಆಡ್ಮಿಷನ್ ಪೋರ್ಟಲ್‌ನಲ್ಲಿ ಪ್ರವೇಶಾತಿ ಮಾಡಿಕೊಳ್ಳಬಹುದು.
ಬಿಪಿಎಲ್ ಕಾರ್ಡ್ ಹೊಂದಿರುವ ಮಹಿಳಾ ವಿದ್ಯಾರ್ಥಿಗಳಿಗೆ, ಡಿಫೆನ್ಸ್, ಎಕ್ಸ್ಸರ್ವೀಸ್‌ಮನ್ ವಿದ್ಯಾರ್ಥಿಗಳು, ಆಟೋ, ಕ್ಯಾಬ್ ಡ್ರೆöÊವರ್ ಮತ್ತು ಕೆಎಸ್‌ಆರ್‌ಟಿಸಿ ನೌಕರರಿಗೆ ಮತ್ತು ಅವರ ಮಕ್ಕಳಿಗೆ ಬೋಧನಾ ಶುಲ್ಕದಲ್ಲಿ ಶೇ.10 ರಷ್ಟು ವಿಶೇಷ ರಿಯಾಯಿತಿ ಇರುತ್ತದೆ.
ಕೋವಿಡ್‌ನಿಂದಾಗಿ ಮೃತರಾದ ಪೋಷಕರ ಮಕ್ಕಳಿಗೆ, ದೃಷ್ಟಿಹೀನ ವಿದ್ಯಾರ್ಥಿಗಳಿಗೆ ಹಾಗೂ ತೃತಿಯ ಲಿಂಗಗಳಿಗೆ ಪೂರ್ಣಶುಲ್ಕ ವಿನಾಯಿತಿ ಇದೆ.
ಅರ್ಜಿ ಸಲ್ಲಿಸುವಾಗ ತೊಂದರೆಗಳಾದಲ್ಲಿ ಆನ್‌ಲೈನ್ ಸಹಾಯವಾಣಿ 8800335638, 8690544544 ಗೆ ಸಂಪರ್ಕಿಸಬಹುದು.
ಹೆಚ್ಚಿನ ಮಾಹಿತಿಗಾಗಿ ನಗರದ ನಲ್ಲಚೆರವು ಪ್ರದೇಶದ ಜಿಲ್ಲಾ ಕ್ರೀಡಾಂಗಣದ ಹತ್ತಿರವಿರುವ ಪ್ರಾದೇಶಿಕ ವಿಜ್ಞಾನ ಕೇಂದ್ರದ ಹಿಂಭಾಗ ಕರಾಮುವಿ ಪ್ರಾದೇಶಿಕ ಕೇಂದ್ರ ಅಥವಾ ಮೊ.7892597159 ಗೆ ಸಂಪರ್ಕಿಸಬಹುದು ಎಂದು ಕರಾಮುವಿ ಯ ಬಳ್ಳಾರಿ ಪ್ರಾದೇಶಿಕ ಕೇಂದ್ರದ ಪ್ರಾದೇಶಿಕ ನಿರ್ದೇಶಕ ಡಾ.ಹೆಚ್.ಮಲ್ಲಿಕಾರ್ಜುನ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
---------
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)
ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ