ಬುಧವಾರ, ಆಗಸ್ಟ್ 7, 2024
ಬೆಳೆ ವಿಮೆ ನೋಂದಣಿಗೆ ಆಹ್ವಾನ
ಬಳ್ಳಾರಿ,ಆ.07(ಕರ್ನಾಟಕ ವಾರ್ತೆ):
ಪ್ರಸ್ತಕ ಸಾಲಿನ ಮುಂಗಾರು ಹಂಗಾಮಿಗೆ ಕರ್ನಾಟಕ ರೈತ ಸುರಕ್ಷಾ ಪ್ರಧಾನಮಂತ್ರಿ ಫಸಲ್ ಬಿಮಾ (ವಿಮಾ) ಯೋಜನೆಯಡಿ ಕೃಷಿ ಬೆಳೆಗಳಿಗೆ ವಿಮೆ ನೋಂದಣಿಯನ್ನು ಪ್ರಾರಂಭಿಸಿದ್ದು, ರೈತರು ವಿವಿಧ ಕೃಷಿ ಬೆಳೆಗಳಿಗೆ ಬೆಳೆ ವಿಮೆ ಮಾಡಿಸಿಕೊಳ್ಳಬೇಕು ಎಂದು ಸಹಾಯಕ ಕೃಷಿ ನಿದೇರ್ಶಕರು ತಿಳಿಸಿದ್ದಾರೆ.
ರಾಗಿ (ಮ), ನವಣೆ (ಮ), ಹುರುಳಿ (ಮ), ನೆಲಗಡಲೆ (ನೀ/ಮ), ಸಜ್ಜೆ (ನೀ,ಮ), ತೊಗರಿ (ಮ), ಭತ್ತ (ನೀ,ಮ) ಬೆಳೆಗಳಿಗೆ ವಿಮೆ ಮಾಡಿಸಲು ಆ.16 ಕೊನೆಯ ದಿನವಾಗಿದೆ.
ರೈತರಿಗೆ ನೈಸರ್ಗಿಕ ಪ್ರಕೃತಿ ವಿಕೋಪಗಳಿಂದಾಗಿ ಬೆಳೆ ಹಾನಿಯಾದರೆ, ವಿಮಾ ಯೋಜನೆಯಿಂದ ರೈತರಿಗೆ ಬಹಳಷ್ಟು ಅನುಕೂಲವಾಗುತ್ತದೆ.
ಬೆಳೆ ವಿಮೆ ನೋಂದಣಿಗಾಗಿ ಹತ್ತಿರದ ಸಾಮಾನ್ಯ ಸೇವಾ ಕೇಂದ್ರ ಹಾಗೂ ರೈತರು ತಮ್ಮ ವ್ಯವಹಾರದ ಬ್ಯಾಂಕ್‌ಗಳಿಗೆ ಭೇಟಿ ನೀಡಿ ಮಾಹಿತಿ ಪಡೆಯಬಹುದು.
ಹೆಚ್ಚಿನ ಮಾಹಿತಿಗಾಗಿ ರೈತ ಸಂಪರ್ಕಕೇAದ್ರ, ಸಹಾಯಕ ಕೃಷಿ ನಿರ್ದೇಶಕರ ಕಚೇರಿ ಅಥವಾ ವಿಮಾ ಸಂಸ್ಥೆಯ ತಾಲೂಕು ಪ್ರತಿನಿಧಿಯ ಮೊ.8277472721 ಗೆ ಸಂಪರ್ಕಿಸಬಹುದು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
--------
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)
ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ