ಗುರುವಾರ, ಆಗಸ್ಟ್ 8, 2024

ಅನಾಮಧೇಯ ಮೃತ ವ್ಯಕ್ತಿ ವಾರಸುದಾರರ ಪತ್ತೆಗೆ ಮನವಿ

ಬಳ್ಳಾರಿ,ಆ.08(ಕರ್ನಾಟಕ ವಾರ್ತೆ): ಗಾಂಧಿನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ 45-50 ವರ್ಷದ ಅನಾಮಧೇಯ ವ್ಯಕ್ತಿಯು ಯಾವುದೇ ದೀರ್ಘಾವಧಿ ಖಾಯಿಲೆಯಿಂದ ಬಳಲಿ ಮೇ 08 ರಂದು ಮೃತಪಟ್ಟಿದ್ದು, ಮೃತನ ವಾರಸುದಾರರ ಪತ್ತೆಗೆ ಸಹಕರಿಸಬೇಕು ಎಂದು ಸಹಾಯಕ ಆರಕ್ಷಕರು ಉಪ ನಿರೀಕ್ಷಕರು ತಿಳಿಸಿದ್ದಾರೆ. ಚಹರೆ ಗುರುತು: ಎತ್ತರ 5.2 ಅಡಿ, ಕೋಲು ಮುಖ, ಗೋಧಿ ಮೈಬಣ್ಣ, ತೆಳ್ಳನೆಯ ಮೈಕಟ್ಟು ಹೊಂದಿದ್ದು, ಕಪ್ಪು ಕೂದಲು, ಕಪ್ಪು ಗಡ್ಡ ಮೀಸೆ ಹೊಂದಿರುತ್ತಾನೆ. ಮೃತನ ಮೈಮೇಲೆ ಗ್ರೇ ಮತ್ತು ಬಿಳಿ ಮಿಶ್ರಿತ ಬಣ್ಣದ ಗೆರೆಯುಳ್ಳ ಅರ್ಧ ತೋಳಿನ ಟೀ ಶರ್ಟ್ ಮತ್ತು ಕಪ್ಪು ಬಣ್ಣದ ಪ್ಯಾಂಟ್ ಇರುತ್ತದೆ. ಮೇಲ್ಕಂಡ ಚಹರೆ ಗುರುತುಗಳುಳ್ಳ ಮೃತನ ವಾರಸುದಾರರ ಬಗ್ಗೆ ಮಾಹಿತಿ ಸಿಕ್ಕಲ್ಲಿ ಬಳ್ಳಾರಿ ಪೊಲೀಸ್ ಕಂಟ್ರೋಲ್ ರೂಂ ದೂ.08392-258100, ಗಾಂಧಿನಗರ ಪೊಲೀಸ್ ಠಾಣೆ ದೂ.08392-272192, ಪಿ.ಐ ಮೊ.9480803046 ಗೆ ಸಂಪರ್ಕಿಸಬಹುದು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ----------

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ