ಶುಕ್ರವಾರ, ಆಗಸ್ಟ್ 9, 2024

ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ; ವಸತಿನಿಲಯ ಪ್ರವೇಶಾತಿಗೆ ಅರ್ಜಿ ಆಹ್ವಾನ

ಬಳ್ಳಾರಿ,ಆ09(ಕರ್ನಾಟಕ ವಾರ್ತೆ): ಜಿಲ್ಲೆಯಲ್ಲಿ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಮೆಟ್ರಿಕ್ ನಂತರದ ಬಾಲಕ ಮತ್ತು ಬಾಲಕಿಯರ ವಿದ್ಯಾರ್ಥಿನಿಲಯಗಳಲ್ಲಿ ಪ್ರಸಕ್ತ ಸಾಲಿಗೆ ಸಾಮಾನ್ಯ ಪದವಿ ಕೋರ್ಸಿನ ವಿದ್ಯಾರ್ಥಿಗಳ ಪ್ರವೇಶಾತಿಗೆ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ ಎಂದು ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ಜಲಾಲಪ್ಪ ಎ.ಕೆ ಅವರು ತಿಳಿಸಿದ್ದಾರೆ. ಪ್ರವರ್ಗ-1, 2ಎ, 2ಬಿ, 3ಎ, 3ಬಿ, ಪ.ಜಾತಿ, ಪ.ವರ್ಗ ಮತ್ತು ಇತರೆ ಜನಾಂಗಗಳಿಗೆ ಸೇರಿದ ವಿದ್ಯಾರ್ಥಿಗಳು ಸೆ.04 ರ ಒಳಗಾಗಿ ಆನ್‌ಲೈನ್ ಮೂಲಕ ಇಲಾಖೆಯ ವೆಬ್‌ಸೈಟ್ hಣಣಠಿs://shಠಿ.ಞಚಿಡಿಟಿಚಿಣಚಿಞಚಿ.gov.iಟಿ ಗೆ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದು. ವಿದ್ಯಾರ್ಥಿಯ ಪೋಷಕರ ವಾರ್ಷಿಕ ಆದಾಯ ಮಿತಿಯು ಪ್ರವರ್ಗ-1, ಎಸ್‌ಸಿ ಮತ್ತು ಎಸ್‌ಟಿ ರೂ.2.50 ಲಕ್ಷ ಹಾಗೂ ಪ್ರವರ್ಗ-2ಎ, 2ಬಿ, 3ಎ, 3ಬಿ, ಇತರೆ ಹಿಂದುಳಿದ ವರ್ಗ ಹಾಗೂ ಇತರೆ ವರ್ಗದ ವಿದ್ಯಾರ್ಥಿಗಳ ವಾರ್ಷಿಕ ವರಮಾನ ರೂ.1 ಲಕ್ಷ ಇರಬೇಕು. ತಾಲ್ಲೂಕುವಾರು ವಿದ್ಯಾರ್ಥಿನಿಲಯಗಳ ವಿವರ ಹಾಗೂ ವಿದ್ಯಾರ್ಥಿನಿಲಯದ ಪ್ರವೇಶಕ್ಕೆ ಇರಬೇಕಾದ ಅರ್ಹತೆ, ಸಲ್ಲಿಸಬೇಕಾದ ದಾಖಲೆಗಳ ವಿವರ ಮತ್ತು ಸರ್ಕಾರದ ಆದೇಶಕ್ಕಾಗಿ ಇಲಾಖೆಯ ವೆಬ್‌ಸೈಟ್ hಣಣಠಿs://bಛಿತಿಜ.ಞಚಿಡಿಟಿಚಿಣಚಿಞಚಿ.gov.iಟಿ/ ನ್ನು ನೋಡಬಹುದು. ಹೆಚ್ಚಿನ ಮಾಹಿತಿಗಾಗಿ ಸಹಾಯವಾಣಿ ಸಂ.8050770005 ಗೆ ಸಂಪರ್ಕಿಸಬಹುದು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. --------

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ