ಶುಕ್ರವಾರ, ಆಗಸ್ಟ್ 23, 2024

ವ್ಯಕ್ತಿ ಕಾಣೆ: ಪತ್ತೆಗೆ ಮನವಿ

ಬಳ್ಳಾರಿ,ಆ.23(ಕರ್ನಾಟಕ ವಾರ್ತೆ): ತಾಲ್ಲೂಕಿನ ಮೋಕ ಪೊಲೀಸ್ ಠಾಣೆ ವ್ಯಾಪ್ತಿಯ ಜಾಲಿಹಾಳ್ ಗ್ರಾಮದ ಕೇಶವರೆಡ್ಡಿ ಎನ್ನುವ 70 ವರ್ಷದ ವ್ಯಕ್ತಿಯು ಆ.19 ಕಾಣೆಯಾಗಿದ್ದು, ಪತ್ತೆಗೆ ಸಹಕರಿಸಬೇಕು ಎಂದು ಠಾಣಾಧಿಕಾರಿ ತಿಳಿಸಿದ್ದಾರೆ. ವ್ಯಕ್ತಿಯ ಚಹರೆ ಗುರುತು: ಎತ್ತರ 5 ಅಡಿ 7 ಇಂಚು, ಕೆಂಪು ಬಣ್ಣ, ತಲೆಯಲ್ಲಿ ಬಿಳಿ ಕೂದಲು, ವ್ಯಕ್ತಿ ಮೈಮೇಲೆ ಬಿಳಿ ಬಣ್ಣದ ಬನಿಯನ್, ಬಿಳಿ ಬಣ್ಣದ ಲುಂಗಿ ಧರಿಸಿರುತ್ತಾನೆ. ಕನ್ನಡ, ತೆಲುಗು ಭಾಷೆ ಮಾತನಾಡುತ್ತಾನೆ. ವ್ಯಕ್ತಿಯ ಬಗ್ಗೆ ಮಾಹಿತಿ ಸಿಕ್ಕಲ್ಲಿ ಬಳ್ಳಾರಿ ಪೊಲೀಸ್ ಕಂಟ್ರೋಲ್ ರೂಂ ದೂ.08392-258100, ಮೋಕ ಪೊಲೀಸ್ ಠಾಣೆಯ ಪಿಎಸ್‌ಐ ಮೊ.9480803050, ದೂ.08392-293228, ಸಿರುಗುಪ್ಪ ಉಪವಿಭಾಗ ಡಿಎಸ್‌ಪಿ ಮೊ.9480803021, ಪಿಡಿ ಹಳ್ಳಿ ಸಿಪಿಐ ಮೊ.9480803021 ಗೆ ಸಂಪರ್ಕಿಸಬಹುದು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ------------

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ