ಶುಕ್ರವಾರ, ಆಗಸ್ಟ್ 30, 2024

ಬಳ್ಳಾರಿ ಮಹಾನಗರ ಪಾಲಿಕೆ; ಆಸ್ತಿ ತೆರಿಗೆ ಪಾವತಿ ಅವಧಿ ವಿಸ್ತರಣೆ

ಬಳ್ಳಾರಿ,ಆ.30(ಕರ್ನಾಟಕ ವಾರ್ತೆ): ಬಳ್ಳಾರಿ ಮಹಾನಗರಪಾಲಿಕೆ ವ್ಯಾಪ್ತಿಯಲ್ಲಿ ಬರುವ ಆಸ್ತಿ ತೆರಿಗೆದಾರರು ತಮ್ಮ ಆಸ್ತಿಯ ತೆರಿಗೆ ಪಾವತಿ ಮಾಡಲು ಶೇ.5 ರಷ್ಟು ರಿಯಾಯಿತಿ ನೀಡಲು ಕಲ್ಪಿಸಿರುವ ಅವಕಾಶದ ಅವಧಿಯನ್ನು ಸೆ.14 ರವರೆಗೆ ವಿಸ್ತರಿಸಲಾಗಿದೆ. ಆಸ್ತಿ ತೆರಿಗೆ ಪಾವತಿಯನ್ನು ಪರಿಣಾಮಕಾರಿಯಾಗಿ ಹೆಚ್ಚಿಸಲು ಹಾಗೂ ಸ್ವಯಂ ತೆರಿಗೆ ಪಾವತಿಯನ್ನು ಉತ್ತೇಜಿಸಲು ಬಳ್ಳಾರಿ ಮಹಾನಗರ ಪಾಲಿಕೆಯಲ್ಲಿ ಆರ್ಥಿಕ ವರ್ಷದ ಪ್ರಾರಂಭದ 30 ದಿನಗಳಲ್ಲಿ ಪೂರ್ಣ ಪ್ರಮಾಣದ ಆಸ್ತಿ ತೆರಿಗೆ ಪಾವತಿ ಮಾಡಿದಲ್ಲಿ ಶೇ.5 ರಷ್ಟು ರಿಯಾಯಿತಿ ನೀಡಲಾಗುವುದು. ಆಸ್ತಿ ತೆರಿಗೆದಾರರು ಈ ಅವಕಾಶವನ್ನು ಸದುಪಯೋಗ ಪಡಿಸಿಕೊಳ್ಳಬೇಕು ಎಂದು ಬಳ್ಳಾರಿ ಮಹಾನಗರ ಪಾಲಿಕೆ ಪ್ರಕಟಣೆ ತಿಳಿಸಿದೆ. ---------

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ