ಮಂಗಳವಾರ, ಆಗಸ್ಟ್ 20, 2024

ಸಮಾಜ ಕಲ್ಯಾಣ ಇಲಾಖೆ; ದೀಕ್ಷಾಭೂಮಿ ಯಾತ್ರೆಗೆ ತೆರಳಲು ಅರ್ಜಿ ಆಹ್ವಾನ

ಬಳ್ಳಾರಿ,ಆ.20(ಕರ್ನಾಟಕ ವಾರ್ತೆ): ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಮತ್ತು ಇತರೆ ಸಮುದಾಯದ ಡಾ.ಬಿ.ಆರ್.ಅಂಬೇಡ್ಕರ್ ಅನುಯಾಯಿಗಳನ್ನು ಮಹಾರಾಷ್ಟçದ ನಾಗಪುರದ ದೀಕ್ಷಾಭೂಮಿ ಯಾತ್ರೆಗೆ ನಿಯೋಜಿಸಲು ಅರ್ಹ ಯಾತ್ರಾರ್ಥಿಗಳಿಂದ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ದೀಕ್ಷಾಭೂಮಿ ನಾಗಪುರಕ್ಕೆ ಹೋಗಬಯಸುವ ಯಾತ್ರಾರ್ಥಿಗಳು ಆ.31 ರವರೆಗೆ ಆನ್‌ಲೈನ್ ಮೂಲಕ ಇಲಾಖೆಯ ವೆಬ್‌ಸೈಟ್ https://swdservices.karnataka.gov.in/ ನಲ್ಲಿ ಅರ್ಜಿ ಸಲ್ಲಿಸಬೇಕು ಎಂದು ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕ ಮಲ್ಲಿಕಾರ್ಜುನ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. --------

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ