ಸೋಮವಾರ, ಆಗಸ್ಟ್ 12, 2024

ಬಳ್ಳಾರಿ ಗ್ರಾಮಾಂತರ; ಅಂಗನವಾಡಿ ಕಾರ್ಯಕರ್ತೆ, ಸಹಾಯಕಿಯರ ಹುದ್ದೆಗಳಿಗೆ ಅರ್ಜಿ ಆಹ್ವಾನ

ಬಳ್ಳಾರಿ,ಆ.12(ಕರ್ನಾಟಕ ವಾರ್ತೆ): ಗ್ರಾಮಾಂತರ ಶಿಶು ಅಭಿವೃದ್ದಿ ಯೋಜನೆಯಡಿ ಬಳ್ಳಾರಿ ತಾಲ್ಲೂಕಿನ ವಿವಿಧ ಗ್ರಾಪಂ ವ್ಯಾಪ್ತಿಯಲ್ಲಿ ಖಾಲಿ ಇರುವ ಅಂಗನವಾಡಿ ಕಾರ್ಯಕರ್ತೆ ಹಾಗೂ ಅಂಗನವಾಡಿ ಸಹಾಯಕಿಯರ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ ಎಂದು ಬಳ್ಳಾರಿ ಗ್ರಾಮಾಂತರ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಮೋಹನಕುಮಾರಿ ತಿಳಿಸಿದ್ದಾರೆ. ಅರ್ಜಿಗಳನ್ನು ಸೆ.10 ರೊಳಗಾಗಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು. ಆಸಕ್ತ ಅರ್ಹ ಮಹಿಳೆಯರು https://karnemakaone.kar.nic.in/abcd/ ಗೆ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದು. *ತಾಲ್ಲೂಕುವಾರು ಖಾಲಿ ಇರುವ ಹುದ್ದೆಗಳು*: ಬಳ್ಳಾರಿ ತಾಲ್ಲೂಕಿನ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ 18 ಅಂಗನವಾಡಿ ಕಾರ್ಯಕರ್ತೆ, 34 ಅಂಗನವಾಡಿ ಸಹಾಯಕಿ. ಕುರುಗೋಡು ತಾಲ್ಲೂಕಿನ ಪುರಸಭೆ, ಪಟ್ಟಣ ಪಂಚಾಯಿತಿ, ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿನ 04 ಅಂಗನವಾಡಿ ಕಾರ್ಯಕರ್ತೆ, 21 ಅಂಗನವಾಡಿ ಸಹಾಯಕಿರ ಹುದ್ದೆಗಳಿಗೆ ಗೌರವ ಸೇವೆ ಆಧಾರದ ಮೇಲೆ ನೇಮಕ ಮಾಡಿಕೊಳ್ಳಲಾಗುವುದು. ಹೆಚ್ಚಿನ ಮಾಹಿತಿಗಾಗಿ ಬಳ್ಳಾರಿ ಗ್ರಾಮಾಂತರ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಕಚೇರಿ ಅಥವಾ ದೂ.08392-266080 ಗೆ ಸಂಪರ್ಕಿಸಬಹುದು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. --------

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ