ಸೋಮವಾರ, ಸೆಪ್ಟೆಂಬರ್ 30, 2024
ಸ್ವಚ್ಚತೆ ಕಾಪಾಡುವ ಮೂಲಕ ರೋಗ-ರುಜಿನ ನಿಯಂತ್ರಿಸಲು ಕೈಜೋಡಿಸಿ: ಡಿಹೆಚ್‌ಓ ಡಾ.ಯಲ್ಲಾ ರಮೇಶಬಾಬು
ಬಳ್ಳಾರಿ,ಸೆ.30(ಕರ್ನಾಟಕ ವಾರ್ತೆ):
ಪ್ರತಿಯೊಬ್ಬರೂ ತಮ್ಮ ಮನೆಯ ಸುತ್ತ-ಮುತ್ತ ಸ್ವಚ್ಛತೆ ಕಾಪಾಡುವ ಮೂಲಕ ಸಾಂಕ್ರಾಮಿಕ ರೋಗಗಳನ್ನು ತಡೆಗಟ್ಟಲು ಕೈಜೋಡಿಸಬೇಕು ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಯಲ್ಲಾ ರಮೇಶಬಾಬು ಅವರು ಹೇಳಿದರು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಜಿಲ್ಲಾ ಆಸ್ಪತ್ರೆ ಸಂಯುಕ್ತಾಶ್ರಯದಲ್ಲಿ ‘ಸ್ವಚ್ಚತೆಯೇ ಸೇವೆ’ ಅಭಿಯಾನದಡಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ ಕಾರ್ಯಾಲಯದ ಆವರಣದಲ್ಲಿ ಸೋಮವಾರ ಹಮ್ಮಿಕೊಂಡಿದ್ದ ಸ್ವಚ್ಚತಾ ಸೇವೆಯಲ್ಲಿ ಭಾಗವಹಿಸಿ ಅವರು ಮಾತನಾಡಿದರು.
ರಾಷ್ಟಿçÃಯ ಸ್ವಚ್ಚತಾ ಅಭಿಯಾನದಡಿ ಕಾಯಕಲ್ಪ ಕಾರ್ಯಕ್ರಮದ ಮೂಲಕ ಎಲ್ಲಾ ಆಸ್ಪತ್ರೆಗಳಲ್ಲಿ ರೋಗಿಗಳ ಆರೋಗ್ಯ ಕಾಪಾಡಲು ವೈದ್ಯಕೀಯ ತ್ಯಾಜ್ಯ ಎಲ್ಲೆಂದರಲ್ಲಿ ಬಿಸಾಡದೆ ನಿಯಮಾನುಸಾರ ಪ್ರತಿದಿನ ವಿಲೇವಾರಿ ಮಾಡಲಾಗುತ್ತಿದೆ, ಸಾರ್ವಜನಿಕರು ಕಸಕಡ್ಡಿಯನ್ನು ಚರಂಡಿಗಳಲ್ಲಿ ಹಾಕದೇ, ಕಸದ ವಾಹನದಲ್ಲಿ ಹಾಕುವ ಮೂಲಕ ಡೆಂಗ್ಯು ನಿಯಂತ್ರಣಕ್ಕೆ ಸಹಕರಿಸಬೇಕು. ನೀರಿನ ಮೂಲಗಳನ್ನು ಸ್ವಚ್ಚವಾಗಿಟ್ಟುಕೊಳ್ಳುವ ಮೂಲಕ ವಾಂತಿ-ಬೇಧಿಗಳAತಹ ಕಾಯಿಲೆಗಳನ್ನು ನಿಯಂತ್ರಿಸಲು ಪ್ರತಿಯೊಬ್ಬರು ಕೈಜೋಡಿಸಬೇಕು ಎಂದರು.
ಜಿಲ್ಲಾ ಶಸ್ತçಚಿಕಿತ್ಸಕ ಡಾ.ಎನ್.ಬಸರೆಡ್ಡಿ ಅವರು ಮಾತನಾಡಿ, ಜಿಲ್ಲಾಸ್ಪತ್ರೆಯಲ್ಲಿ ರೋಗಿಗಳಿಗೆ ಗುಣಮಟ್ಟದ ಚಿಕಿತ್ಸೆ ನೀಡುವುದರ ಜೊತೆಗೆ ಸ್ವಚ್ಚತೆಗೆ ಆದ್ಯತೆ ನೀಡಲಾಗುತ್ತಿದೆ. ಆಸ್ಪತ್ರೆಗೆ ಬರುವ ಜನತೆಯು ಆಹಾರ ತ್ಯಾಜ್ಯ, ಟೀ-ಕಾಪಿ ಕಪ್ü, ಗಂಜಿಯ ಪ್ಲಾಸ್ಟಿಕ್ ಕವರ್, ಖಾಲಿಯಾದ ಎಳೆನೀರಿನ ಕಾಯಿಗಳನ್ನು ಎಲ್ಲೆಂದರಲ್ಲಿ ಬಿಸಾಡದೆ ಕಸದ ಬುಟ್ಟಿಗಳಲ್ಲಿಯೇ ಹಾಕಬೇಕು. ಸಾರ್ವಜನಿಕ ಆಸ್ಪತ್ರೆಯನ್ನು ಸ್ವಚ್ಚವಾಗಿಡಲು ಸಹಕರಿಸಬೇಕು ಎಂದು ವಿನಂತಿಸಿದರು.
ಜಿಲ್ಲಾ ಕುಟುಂಬ ಕಲ್ಯಾಣ ಕಾರ್ಯಕ್ರಮಾಧಿಕಾರಿ ಡಾ.ಪೂರ್ಣಿಮಾ ಕಟ್ಟಿಮನಿ ಅವರು ಪ್ರಾಸ್ತವಿಕವಾಗಿ ಮಾತನಾಡಿದರು.
ಇದೇ ಸಂದರ್ಭದಲ್ಲಿ ಎಲ್ಲಾ ಅಧಿಕಾರಿಗಳು ಹಾಗೂ ನೌಕರರು ಸ್ವಚ್ಛತೆ ಕುರಿತ ಪ್ರತಿಜ್ಞಾ ವಿಧಿ ಸ್ವೀಕರಿಸಿ ಸ್ವಚ್ಛತಾ ಕಾರ್ಯವನ್ನು ಕೈಗೊಂಡರು.
ಈ ಸಂದರ್ಭದಲ್ಲಿ ಜಿಲ್ಲಾ ಕುಷ್ಠರೋಗ ನಿರ್ಮೂಲನಾಧಿಕಾರಿ ಡಾ.ವಿರೇಂದ್ರಕುಮಾರ, ಜಿಲ್ಲಾ ಆರ್‌ಸಿಹೆಚ್ ಅಧಿಕಾರಿ ಡಾ.ಹನುಮಂತಪ್ಪ, ಉಪಮುಖ್ಯ ವೈದ್ಯಾಧಿಕಾರಿ ಡಾ.ಗುರುನಾಥ ಬಿ.ಚೌವ್ಹಾಣ್, ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಈಶ್ವರ ದಾಸಪ್ಪನವರ, ಕಾಯಕಲ್ಪ ವಿಭಾಗಾಧಿಕಾರಿ ಡಾ.ಪ್ರಿಯಾಂಕ್, ಶುಶ್ರೂಷಣಾ ಅಧೀಕ್ಷಕಿ ವಿಮಲಾಕ್ಷಿ, ಸಹಾಯಕ ಆಡಳಿತ ಅಧಿಕಾರಿ ಉದಯ ಶ್ರೀಪತಿ ಗುಮಾಸ್ತೆ ದೇಸಾಯಿ, ಸಾರಿಗೆ ಅಭಿಯಂತರ ವಿಜಯಕುಮಾರ್, ಕಚೇರಿ ಅಧೀಕ್ಷಕರಾದ ಬಸವರಾಜ್, ರವಿಚಂದ್ರ, ವೆಂಕಟೇಶ, ಗುಣಮಟ್ಟ ಖಾತರಿ ಮೇಲ್ವಿಚಾರಕ ರಾಘವೇಂದ್ರ ಸೇರಿದಂತೆ ಎಲ್ಲ ವಿಭಾಗಗಳ ಅಧಿಕಾರಿಗಳು, ಜಿಲ್ಲಾ ಆಸ್ಪತ್ರೆಯ ಸಿಬ್ಬಂದಿಯರು ಭಾಗವಹಿಸಿದ್ದರು.
----------
ಬಾಲ ಹುಳುಗಳನ್ನು ನಿರ್ಲಕ್ಷö್ಯ ಮಾಡಬೇಡಿ, ಅವು ಡೆಂಗ್ಯು ಹರಡುವ ಸೊಳ್ಳೆ ಮರಿಗಳು: ಡಾ.ಯಲ್ಲಾ ರಮೇಶ್‌ಬಾಬು
ಬಳ್ಳಾರಿ,ಸೆ.30(ಕರ್ನಾಟಕ ವಾರ್ತೆ):
ಡ್ರಮ್, ಬ್ಯಾರಲ್, ಸಿಮೆಂಟ್ ತೊಟ್ಟಿ ಸೇರಿದಂತೆ ಯಾವುದೇ ನೀರಿನ ಸಂಗ್ರಹಾರಕಗಳಲ್ಲಿ ಕಂಡುಬರುವ ಬಾಲ ಹುಳುಗಳನ್ನು ನಿರ್ಲಕ್ಷö್ಯ ಮಾಡಬಾರದು, ಅವು ಡೆಂಗ್ಯು ಹರಡುವ ಸೊಳ್ಳೆ ಮರಿಗಳಾಗಬಹುದು ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಯಲ್ಲಾ ರಮೇಶ್ ಬಾಬು ಅವರು ಹೇಳಿದರು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ರೋಗವಾಹಕ ಆಶ್ರೀತ ರೋಗಗಳ ನಿಯಂತ್ರಣ ವಿಭಾಗದ ವತಿಯಿಂದ ಸಿದ್ದಮ್ಮನಹಳ್ಳಿ ಪ್ರಾಥಮಿಕ ಆರೋಗ್ಯ ಕೇಂದ್ರ ಹಾಗೂ ಗ್ರಾಮ ಪಂಚಾಯತ್ ಸಹಕಾರದೊಂದಿಗೆ ಸೋಮವಾರದಂದು ಸಿದ್ದಮ್ಮನಹಳ್ಳಿ ಗ್ರಾಮಕ್ಕೆ ಭೇಟಿ ನೀಡಿ ಈಡೀಸ್ ಲಾರ್ವಾ ಸಮೀಕ್ಷಾ ಕಾರ್ಯವನ್ನು ಪರಿಶೀಲಿಸಿ ಅವರು ಮಾತನಾಡಿದರು.
ಪ್ರತಿಯೊಬ್ಬರಿಗೂ ನೀರಿನ ಅವಶ್ಯಕತೆ ಇದ್ದು, ಸಾಮಾನ್ಯವಾಗಿ ಕುಡಿಯಲು ಹೊರತುಪಡಿಸಿ ಬಳಕೆಗಾಗಿ ನೀರು ಸಂಗ್ರಹಿಸುವ ಡ್ರಮ್, ಬ್ಯಾರೆಲ್, ಕಲ್ಲಿನದೋಣಿ, ಸಿಮೆಂಟ್ ತೊಟ್ಟಿ ಹಾಗೂ ಬೀಸಾಡಿದ ಟೈರ್, ತಗಡಿನ್ ಟಿನ್, ಹೂವಿನ ಕುಂಡಲು, ಫ್ರೀಜ್ ಹಿಂಭಾಗದ ನೀರಿನಲ್ಲಿ ಕಂಡುಬರುವ ಬಾಲದ ಹುಳುವನ್ನು ನಿರ್ಲಕ್ಷö್ಯ ಮಾಡುವಂತಿಲ್ಲ. 7 ದಿನಗಳಲ್ಲಿ ಸೊಳ್ಳೆಯಾಗಿ ನಮ್ಮನ್ನೆ ಕಚ್ಚುವ ಡೆಂಗ್ಯೂ ರೋಗ ಹರಡುವ ಈಡೀಸ್ ಸೊಳ್ಳೆಯ ಮರಿಯಾಗಿರುತ್ತದೆ ಎಂದು ಅವರು ತಿಳಿಸಿದರು.
ಸಾರ್ವಜನಿಕರು ತಮ್ಮ ಮನೆಗೆ ಬಳಕೆಗಾಗಿ ನೀರು ತುಂಬುವ ಈ ಎಲ್ಲಾ ಪರಿಕರಗಳನ್ನು ವಾರಕ್ಕೊಮ್ಮೆ ತೊಳೆದು ಒಣಗಿಸಿ, ನೀರು ತುಂಬಿದ ನಂತರ ಸರಿಯಾಗಿ ಮುಚ್ಚಳ ಮುಚ್ಚಿ ಹಾಗೂ ಅನಗತ್ಯವಾಗಿ ನೀರು ನಿಲ್ಲುವ ಪರಿಕರಗಳನ್ನು ವಾರಕ್ಕೊಮ್ಮೆ ಪರೀಕ್ಷಿಸಬೇಕು. ಸೊಳ್ಳೆ ಮರಿ ಉಂಟಾಗದAತೆ ತಡೆಯುವ ಮೂಲಕ ಡೆಂಗ್ಯೂ ರೋಗ ನಿಯಂತ್ರಣಕ್ಕೆ ಸಹಕರಿಸಬೇಕು ಎಂದು ಹೇಳಿದರು.
ಪ್ರಸ್ತುತ ದಿನಬಿಟ್ಟು ದಿನ ಮಳೆ ಬರುತ್ತಿದ್ದು, ಬೇಡವಾದ ವಸ್ತುಗಳಲ್ಲಿ ನೀರು ಸಂಗ್ರಹಣೆಗೊAಡು ಡೆಂಗ್ಯೂ ಮತ್ತು ಚಿಕಿನ್ ಗುನ್ಯಾ ಹರಡುವ ಸೊಳ್ಳೆಗಳ ಉತ್ಪತ್ತಿ ತಡೆಯಬೇಕು. ಜೊತೆಗೆ ಮಲೇರಿಯಾ, ಮೆದುಳು ಜ್ವರ, ಆನೆಕಾಲು ರೋಗ, ಡೆಂಗ್ಯೂ, ಚಿಕಿನ್ ಗುನ್ಯಾ ಮತ್ತು ಇತ್ತೀಚಿಗೆ ಕಂಡು ಬರುತ್ತಿರುವ ಝೀಕಾ ವೈರಸ್ ರೋಗಗಳನ್ನು ತಡೆಗಟ್ಟಲು ಕುರಿತಂತೆ ವ್ಯಾಪಕವಾಗಿ ಜಾಗೃತಿ ನೀಡಲಾಗುತ್ತಿದ್ದು, ಸಾರ್ವಜನಿಕರು ಕೈ ಜೋಡಿಸಬೇಕು ಎಂದು ವಿನಂತಿಸಿದರು.
ಜಿಲ್ಲಾ ರೋಗವಾಹಕ ಆಶ್ರೀತ ರೋಗಗಳ ನಿಯಂತ್ರಣಾಧಿಕಾರಿ ಡಾ.ಆರ್ ಅಬ್ದುಲ್ಲಾ ಅವರು ಮಾತನಾಡಿ, ಸಾರ್ವಜನಿಕರು ಡೆಂಗ್ಯೂ ಕಾಯಿಲೆಯ ಲಕ್ಷಣಗಳಾದÀ ಜ್ವರ, ಕಣ್ಣು ಕೆಂಪಾಗುವಿಕೆ, ಕಣ್ಣಿನ ಹಿಂಭಾಗದಲ್ಲಿ ನೋವು, ತಲೆನೋವು, ಗಂಧೆಗಳು, ಕೀಲುಗಳಲ್ಲಿ ನೋವು, ಸ್ನಾಯುಗಳಲ್ಲಿ ನೋವು ಕಂಡುಬAದಲ್ಲಿ ತಕ್ಷಣವೇ ಹತ್ತಿರದ ಆಸ್ಪತ್ರೆಗೆ ತಪ್ಪದೇ ಭೇಟಿ ನೀಡಬೇಕು ಎಂದರು.
ಹೆಚ್ಚು ದಿನಗಳ ಕಾಲ ನೀರು ಸಂಗ್ರಹವಿರುವ ಸ್ಥಳಗಳಲ್ಲಿ ಗಪ್ಪಿ ಮತ್ತು ಗಾಂಬೋಷಿಯ ಮೀನುಗಳನ್ನು ಬಿಡಲು ಅವಕಾಶವಿದ್ದು, ಎಲ್ಲಾ ಆರೋಗ್ಯ ಕೇಂದ್ರಗಳಲ್ಲಿ ಮೀನುಗಳನ್ನು ಪಡೆದು ನೀರಿನ ತಾಣಗಳಲ್ಲಿ ಬಿಡಲು ಹಾಗೂ ಮನೆಯ ಮುಂದೆ ಸ್ವಚ್ಛಗೊಳಿಸಲಾಗದ ನೀರಿನ ಪರಿಕರಗಳಿಗೆ ಟೆಮಿಫಾಸ್ ದ್ರಾವಣವನ್ನು ತಮ್ಮ ಮನೆಗೆ ಆರೋಗ್ಯ ಇಲಾಖೆಯ ಸಿಬ್ಬಂದಿಯವರು ಭೇಟಿ ನೀಡಿದಾಗ ಹಾಕಿಸಿಕೊಳ್ಳಬೇಕು ಎಂದು ಅವರು ತಿಳಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾ ಕೀಟಶಾಸ್ತçಜ್ಞರಾದ ನಂದಾ ಕಡಿ, ವೈದ್ಯಾಧಿಕಾರಿ ಡಾ.ದಿವ್ಯಾ, ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಈಶ್ವರ ಹೆಚ್ ದಾಸಪ್ಪನವರ, ಎಪಡಮಾಲಜಿಷ್ಟ್ ಡಾ.ನಿವೇದಿತಾ, ಕಾಲರಾ ನಿಯಂತ್ರಣ ತಂಡದ ತಿಪ್ಪೇಸ್ವಾಮಿ, ಸವಿತಾ, ಆರೋಗ್ಯ ನಿರೀಕ್ಷಣಾಧಿಕಾರಿ ಮರಿಬಸವನಗೌಡ, ಎಮ್‌ಟಿಎಸ್ ಶ್ವೇತಾ, ಬಾಬುರಾವ್ ಹಾಗೂ ಪ್ರಾಥಮಿಕ ಆರೋಗ್ಯ ಸುರಕ್ಷಾಧಿಕಾರಿಗಳು, ಆಶಾ ಕಾರ್ಯಕರ್ತೆಯರು ಹಾಜರಿದ್ದರು.
-------
ಅಂಚೆ ಇಲಾಖೆ; ಅ.14 ರಂದು ನೇರ ಸಂದರ್ಶನ
ಬಳ್ಳಾರಿ,ಸೆ.30(ಕರ್ನಾಟಕ ವಾರ್ತೆ):
ಅಂಚೆ ಜೀವ ವಿಮೆ ಹಾಗೂ ಗ್ರಾಮೀಣ ಅಂಚೆ ಜೀವ ವಿಮೆ ಉತ್ಪನ್ನಗಳನ್ನು ಮಾರಾಟ ಮಾಡಲು ನೇರಪ್ರತಿನಿಧಿ ಮತ್ತು ಮತ್ತು ಫೀಲ್ಡ್ ಆಫೀಸರ್‌ಗಳ ನೇಮಕಕ್ಕಾಗಿ ಅ.14 ರಂದು ಬೆಳಿಗ್ಗೆ 10 ಗಂಟೆಯಿAದ ಮಧ್ಯಾಹ್ನ 02 ಗಂಟೆಯವರೆಗೆ, ನಗರದ ಕೋಟೆ ಆವರಣದ ಅಂಚೆ ಅಧೀಕ್ಷಕರ ಕಾರ್ಯಾಲಯದಲ್ಲಿ ನೇರ ಸಂದರ್ಶನ ಏರ್ಪಡಿಸಲಾಗಿದೆ.
ಅರ್ಹ ಅಭ್ಯರ್ಥಿಗಳು ತಮ್ಮ ಇತ್ತೀಚಿನ ಭಾವಚಿತ್ರ ಹಾಗೂ ಶೈಕ್ಷಣಿಕ ಪ್ರಮಾಣ ಪತ್ರದ ನಕಲುಗಳೊಂದಿಗೆ ಅಂದು ನಡೆಯಲಿರುವ ನೇರ ಸಂದರ್ಶನಕ್ಕೆ ಹಾಜರಾಗಬಹುದು.
*ಅರ್ಹತೆ:*
ಐದು ಸಾವಿರಕ್ಕಿಂತ ಕಡಿಮೆ ಜನಸಂಖ್ಯೆ ಹೊಂದಿರುವ ಪ್ರದೇಶದಲ್ಲಿ ವಾಸಿಸುತ್ತಿದ್ದರೆ 10ನೇ ತರಗತಿ ಉತ್ತೀರ್ಣರಾಗಿರಬೇಕು. ಐದು ಸಾವಿರ ಹಾಗೂ ಅದಕ್ಕಿಂತ ಹೆಚ್ಚಿನ ಜನಸಂಖ್ಯೆ ಹೊಂದಿರುವ ಇತರೆ ಪ್ರದೇಶಗಳಿಗೆ 12ನೇ ತರಗತಿ ಉತ್ತೀರ್ಣರಾಗಿರಬೇಕು.
ಬಳ್ಳಾರಿ ಹಾಗೂ ವಿಜಯನಗರ(ಹೊಸಪೇಟೆ) ಜಿಲ್ಲೆಯ ವ್ಯಾಪ್ತಿಯಲ್ಲಿ ವಾಸಿಸುವ ವಿಳಾಸ ಪುರಾವೆಯನ್ನು ಹೊಂದಿರಬೇಕು. ವಯೋಮಿತಿ 18 ವರ್ಷ, ಗರಿಷ್ಠ ವಯಸ್ಸಿನ ಮಿತಿ ಇರುವುದಿಲ್ಲ.
*ನೇರಪ್ರತಿನಿಧಿಗಳು:*
ನಿರುದ್ಯೋಗಿ ಹಾಗೂ ಸ್ವಯಂ ಉದ್ಯೋಗ ನಿರತ ಯುವಕರು, ಮಾಜಿ ವಿಮಾ ಕಂಪನಿಗಳ ಸಲಹೆಗಾರರು, ಅಂಗನವಾಡಿ ಕಾರ್ಯಕರ್ತೆಯರು, ಮಹಿಳಾ ಮಂಡಳಿಯ ಕಾರ್ಯಕರ್ತೆಯರು, ಮಾಜಿ ಗ್ರಾಮ ಪಂಚಾಯಿತಿಯ ಸದಸ್ಯರು ಅರ್ಹರಾಗಿರುತ್ತಾರೆ.
ಫೀಲ್ಡ್ಆಫೀಸರ್:
ನಿವೃತ್ತ ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ನೌಕರರು, ನಿವೃತ್ತ ಗ್ರಾಮೀಣ ಅಂಚೆ ಸೇವಕರು (ಜಿಡಿಎಸ್) ಅರ್ಹರಾಗಿರುತ್ತಾರೆ. ವಿಮಾ ಉತ್ಪನ್ನಗಳನ್ನು ಮಾರಾಟ ಮಾಡುವ ಅನುಭವ, ಕಂಪ್ಯೂಟರ್ ಜ್ಞಾನ ಅಥವಾ ಸ್ಥಳೀಯ ಪ್ರದೇಶದ ಜ್ಞಾನವಿರಬೇಕು.
ಆಯ್ಕೆಯಾದ ಅಭ್ಯರ್ಥಿಗಳು ರೂ.5000/- (ಐದು ಸಾವಿರ ಮಾತ್ರ) ಗಳನ್ನು ರಾಷ್ಟಿçÃಯ ಉಳಿತಾಯ ಪತ್ರ ಅಥವಾ ಕಿಸಾನ್ ವಿಕಾಸ ಪತ್ರದ ರೂಪದಲ್ಲಿ ಭದ್ರತಾ ಠೇವಣಿ ಇಡಬೇಕಾಗುತ್ತದೆ.
ಆಯ್ಕೆಯಾದ ನೇರಪ್ರತಿನಿಧಿ ಮತ್ತು ಫೀಲ್ಡ್ಆಫೀಸರ್‌ಗಳಿಗೆ ಅವರು ಮಾಡಿದ ವ್ಯವಹಾರಕ್ಕೆ ತಕ್ಕಂತೆ ಸೂಕ್ತ ಕಮಿಷನ್ ನೀಡಲಾಗುವುದು. ಇದರ ಹೊರತಾಗಿ ಬೇರೆ ಯಾವುದೇ ನಿಗದಿತ ವೇತನ ಇರುವುದಿಲ್ಲ.
ಅಭ್ಯರ್ಥಿಗಳು ಬೇರೆ ಯಾವುದೇ ವಿಮಾ ಕಂಪನಿ, ಸಂಸ್ಥೆ, ಸಂಘಗಳ ಏಜೆಂಟ್ ಆಗಿರಬಾರದು.
*ಬೇಕಾದ ದಾಖಲೆ:*
ಆಧಾರ್‌ಕಾರ್ಡ್, ಪಾನ್‌ಕಾರ್ಡ್, ಪಾಸ್‌ಪೋರ್ಟ್ ಅಳತೆಯ 2 ಭಾವಚಿತ್ರ, ಎಸ್‌ಎಸ್‌ಎಲ್‌ಸಿ, ಪಿಯುಸಿ, ಪದವಿ ಅಂಕಪಟ್ಟಿ ದಾಖಲೆಗಳನ್ನು ಸಲ್ಲಿಸಬೇಕು.
ನೋಂದಣಿಯ ಸಮಯ: ಬೆಳಗ್ಗೆ 10:30 ರಿಂದ 11:30 ರ ವರೆಗೆ.
ಹೆಚ್ಚಿನಮಾಹಿತಿಗಾಗಿ ಡೆವಲಪ್‌ಮೆಂಟ್ ಆಫೀಸರ್ ಮಾರುತಿ.ವಿ (ಮೊ.9481694420) ಹಾಗೂ ಅಂಚೆ ಅಧೀಕ್ಷಕರ ಕಾರ್ಯಾಲಯ ಅಥವಾ ದೂ.08392-266768 ಗೆ ಸಂಪರ್ಕಿಸಬಹುದು ಎಂದು ಬಳ್ಳಾರಿ ವಿಭಾಗದ ಅಂಚೆ ಅಧೀಕ್ಷಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
---------
ಮಹಿಳೆ ಕಾಣೆ; ಪತ್ತೆಗೆ ಮನವಿ
ಬಳ್ಳಾರಿ,ಸೆ.30(ಕರ್ನಾಟಕ ವಾರ್ತೆ):
ಕುರುಗೋಡು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಎ.ಕೆ.ರೇಣುಕಮ್ಮ ಎನ್ನುವ 38 ವರ್ಷದ ಮಾನಸಿಕ ಅಸ್ವಸ್ಥೆ ಸೆ.19 ರಂದು ಕಾಣೆಯಾಗಿರುವ ಕುರಿತು ಪ್ರಕರಣ ದಾಖಲಾಗಿದ್ದು, ಪತ್ತೆಗೆ ಸಹಕರಿಸಬೇಕು ಎಂದು ಸಹಾಯಕ ಉಪನಿರೀಕ್ಷಕರು ತಿಳಿಸಿದ್ದಾರೆ.
ಚಹರೆ ಗುರುತು: ಸುಮಾರು 5 ಅಡಿ ಎತ್ತರ, ಸಾಧಾರಣ ಮೈಕಟ್ಟು, ಗೋಧಿ ಮೈಬಣ್ಣ, ಕೋಲು ಮುಖ ಹೊಂದಿದ್ದು, ಎಡಗೈ ಹೆಬ್ಬಟ್ಟಿನ ಮೇಲೆ ಮೂರು ಹಸಿರು ಬಣ್ಣದ ಅಚ್ಚೆಯ ಗುರುತು ಇರುತ್ತದೆ.
ಕಾಣೆಯಾದ ಸಂದರ್ಭದಲ್ಲಿ ಕಾಫಿ ಬಣ್ಣದ ಹೂವಿನ ಡಿಜೈನ್‌ವುಳ್ಳ ಸೀರೆ, ನೀಲಿ ಬಣ್ಣದ ಕುಪ್ಪಸ ಧರಿಸಿರುತ್ತಾಳೆ. ಕನ್ನಡ ಭಾಷೆ ಮಾನಾಡುತ್ತಾಳೆ.
ಮೇಲ್ಕಂಡ ಚಹರೆಯುಳ್ಳ ಮಹಿಳೆಯ ಬಗ್ಗೆ ಸುಳಿವು ಸಿಕ್ಕಲ್ಲಿ ಬಳ್ಳಾರಿ ಎಸ್‌ಪಿ ಕಚೇರಿ ದೂ.08392-258400, ತೋರಣಗಲ್ಲು ಉಪವಿಭಾಗ ಡಿಎಸ್‌ಪಿ ಮೊ.9480803010, ಕುರುಗೋಡು ಸಿಪಿಐ ಮೊ.9480803039, ಕುರುಗೋಡು ಪಿಎಸ್‌ಐ ಮೊ.9480803051 ಗೆ ಸಂಪರ್ಕಿಸಬಹುದು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
---------
ಪ್ರಧಾನಮಂತ್ರಿ ಜನಜಾತಿ ಉನ್ನತ ಗ್ರಾಮ ಅಭಿಯಾನಕ್ಕೆ ಜಿಲ್ಲೆಯ 59 ಗ್ರಾಮಗಳು ಆಯ್ಕೆ
ಬಳ್ಳಾರಿ,ಸೆ.30(ಕರ್ನಾಟಕ ವಾರ್ತೆ):
ಪ್ರಧಾನಮಂತ್ರಿ ಜನಜಾತಿಯ ಉನ್ನತ ಗ್ರಾಮ ಅಭಿಯಾನ ಯೋಜನೆಯಡಿ ಅಭಿವೃದ್ಧಿಪಡಿಸಲು ಪಂಗಡ ಜನಾಂಗದವರು ಹೆಚ್ಚಾಗಿರುವ ಬಳ್ಳಾರಿ ಜಿಲ್ಲೆಯ 5 ವಲಯಗಳಿಂದ (ತಾಲ್ಲೂಕುಗಳಿಂದ) ಒಟ್ಟು 59 ಗ್ರಾಮಗಳನ್ನು ಆಯ್ಕೆಮಾಡಿದ್ದು, ಮೂಲಭೂತ ಸೌಕರ್ಯಗಳ ಅಭಿವೃದ್ಧಿಗೆ ಕ್ರಿಯಾ ಯೋಜನೆ ರೂಪಿಸಲಾಗಿದೆ ಎಂದು ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಅವರು ತಿಳಿಸಿದ್ದಾರೆ.
ಭಾರತ ಸರ್ಕಾರ ಬುಡಕಟ್ಟು ಮಂತ್ರಾಲಯ, ನವದೆಹಲಿ ಇವರ ಆದೇಶದಂತೆ, ಜಿಲ್ಲೆಯ ಒಟ್ಟು 59 ಗ್ರಾಮಗಳಲ್ಲಿ ಮೂಲಭೂತ ಸೌಕರ್ಯಗಳ ಅಭಿವೃದ್ಧಿಗೆ ಕ್ರಿಯಾಯೋಜನೆ ರೂಪಿಸಲು ಕ್ರಮಕೈಗೊಳ್ಳಲಾಗಿದೆ.
ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಮೀಸಲಿರುವ 79,156 ಕೋಟಿ ರೂ.ಗಳಲ್ಲಿ ಬುಡಕಟ್ಟು ಸಮುದಾಯಗಳು ಹೆಚ್ಚಿನ ಸಂಖ್ಯೆಯಲ್ಲಿ ವಾಸಿಸುವ ದೇಶದ 63,000 ಗ್ರಾಮಗಳಲ್ಲಿ ಅಭಿವೃದ್ಧಿಪಡಿಸಲು ಕ್ರಿಯಾಯೋಜನೆ ರೂಪಿಸಲಾಗಿದೆ.
ಕೇಂದ್ರ ಬುಡಕಟ್ಟು ಮಂತ್ರಾಲಯ ಈ ಯೋಜನೆಗಳನ್ನು ಅನುಷ್ಠಾನಗೊಳಿಸುವ ಜವಾಬ್ದಾರಿ ಹೊತ್ತಿದೆ. ದೇಶದ ಸುಮಾರು 8 ಕೋಟಿ ಜನರಿಗೆ ಯೋಜನೆಯಿಂದ ಅನುಕೂಲವಾಗಲಿದೆ ಎಂದು ಡಿಸಿಯವರು ತಿಳಿಸಿದ್ದಾರೆ.
2024-25 ರಿಂದ 2028-29ನೇ ಸಾಲಿನವರೆಗೆ 5 ವರ್ಷಗಳಲ್ಲಿ ಯೋಜನೆಯನ್ನು ಪೂರ್ಣಗೊಳಿಸಲಾಗುವುದು. 2024-25 ರಿಂದ 2025-26ನೇ ಸಾಲಿಗೆ ಮೊದಲ ಹಂತದಲ್ಲಿ 4000 ಕೋಟಿ ಅನುದಾನವನ್ನು ಪ್ರಧಾನಮಂತ್ರಿ ಜನಜಾತಿ ಉನ್ನತ ಗ್ರಾಮ ಅಭಿಯಾನದಡಿ 17 ಇಲಾಖೆಗಳ ಸಹಯೋಗದಲ್ಲಿ ಜಿಲ್ಲೆಯ 59 ಗ್ರಾಮಗಳಲ್ಲಿ ಮೂಲಭೂತ ಸೌಕರ್ಯಗಳನ್ನು ಕಲ್ಪಿಸಲು ಕ್ರಿಯಾಯೋಜನೆ ಸಿದ್ದಪಡಿಸಲಾಗಿದೆ.
ಈ ಯೋಜನೆಗೆ ಒಳಪಟ್ಟ 59 ಗ್ರಾಮದ ಜನರು ಯೋಜನೆಯ ಸದುಪಯೋಗಪಡೆದುಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
--------
ಹೊನ್ನೂರಸ್ವಾಮಿ.ವೈ ಅವರಿಗೆ ಪಿಎಚ್‌ಡಿ ಪದವಿ
ಬಳ್ಳಾರಿ,ಸೆ.30(ಕರ್ನಾಟಕ ವಾರ್ತೆ):
ವಿಜಯನಗರ ಶ್ರೀ ಕೃಷ್ಣದೇವರಾಯ ವಿಶ್ವವಿದ್ಯಾಲಯದ ನಿರ್ವಹಣಾಶಾಸ್ತç ಅಧ್ಯಯನ ವಿಭಾಗದಲ್ಲಿ ಪೂರ್ಣಕಾಲಿಕ ಪಿಎಚ್‌ಡಿ ವಿದ್ಯಾರ್ಥಿಯಾಗಿದ್ದ ಹೊನ್ನೂರಸ್ವಾಮಿ.ವೈ ಅವರಿಗೆ ಪಿಎಚ್‌ಡಿ ಪದವಿ ಲಭಿಸಿದೆ.
ವಿವಿಯ ವ್ಯವಹಾರ ಅಧ್ಯಯನ ನಿಕಾಯದ ನಿರ್ವಹಣಾಶಾಸ್ತç ಅಧ್ಯಯನ ವಿಭಾಗದ ಸಹ ಪ್ರಾಧ್ಯಾಪಕರಾದ ಡಾ.ಕೆ.ಸಿ.ಪ್ರಶಾಂತ್ ಅವರ ಮಾರ್ಗದರ್ಶನದಲ್ಲಿ “ಅಪರೇಷನಲ್ ಪರ್ಫಾರ್ಮನ್ಸ್ ಆಫ್ ಆನ್‌ಲೈನ್ ಎಜುಕೇಶನ್ ಅಪ್ಸ್ - ಎ ಸ್ಟಡಿ ಆಫ್ ಸೆಲೆಕ್ಟ್ ಅಪ್ಸ್ ಆಕ್ಟಿಂಗ್ ಇನ್ ಕಲ್ಯಾಣ ಕರ್ನಾಟಕ ರೀಜನ್” ಎಂಬ ಪ್ರೌಢ ಪ್ರಬಂಧ ಪ್ರಸ್ತುತಪಡಿಸಿದ್ದಕ್ಕಾಗಿ ಪಿಎಚ್‌ಡಿ ಪದವಿ ಪ್ರದಾನ ಮಾಡಲಾಗಿದೆ ಎಂದು ವಿವಿ ಪ್ರಕಟಣೆ ತಿಳಿಸಿದೆ.
----------
ಕೃಷಿ ಯಂತ್ರೋಪಕರಣಗಳ ಯೋಜನೆಯಡಿ ಅರ್ಜಿ ಅಹ್ವಾನ
ಬಳ್ಳಾರಿ,ಸೆ.30(ಕರ್ನಾಟಕ ವಾರ್ತೆ):
ಕೃಷಿ ಇಲಾಖೆ ವತಿಯಿಂದ ಪ್ರಸ್ತಕ ಸಾಲಿನಲ್ಲಿ ಕೃಷಿ ಯಾಂತ್ರೀಕರಣ ಹಾಗೂ ಕೃಷಿ ಸಂಸ್ಕರಣ ಘಟಕಗಳಿಗೆ ಬಳ್ಳಾರಿ ಹಾಗೂ ಕುರುಗೋಡು ತಾಲ್ಲೂಕು ವ್ಯಾಪ್ತಿಗೆ ಬರುವ ರೈತರಿಗೆ ಸಾಮಾನ್ಯ ವರ್ಗದಡಿ ಶೇ.50 ರಷ್ಟು ಸಹಾಯಧನ ನೀಡಲು ಅರ್ಜಿ ಆಹ್ವಾನಿಸಲಾಗಿದೆ.
ಸೂಕ್ಷö್ಮ ನೀರಾವರಿ ಯೋಜನೆಯಡಿ ತುಂತುರು ನೀರಾವರಿ ಘಟಕಗಳಿಗೆ ಎಲ್ಲಾ ವರ್ಗದ ರೈತರಿಗೆ ಶೇ.90 ರಷ್ಟು ಸಹಾಯಧನ ನೀಡಲಾಗುತ್ತದೆ.
ಆಸಕ್ತ ರೈತರು ಅರ್ಜಿಗಳನ್ನು ಸಂಬAಧಪಟ್ಟ ರೈತ ಸಂಪರ್ಕ ಕೇಂದ್ರಗಳಲ್ಲಿ ಸಲ್ಲಿಸುವ ಮೂಲಕ ನೋಂದಾಯಿಸಿಕೊಳ್ಳಬಹುದು.
ರೈತರಿAದ ಹೆಚ್ಚಿನ ಸಂಖ್ಯೆಯಲ್ಲಿ ಅರ್ಜಿಗಳು ಸ್ವೀಕೃತಿಯಾದಲ್ಲಿ ನಿಯಮಾನುಸಾರ ಜೇಷ್ಠತೆ ಅನ್ವಯ ಅರ್ಜಿಗಳನ್ನು ಪರಿಗಣಿಸಲಾಗುವುದು.
ಹೆಚ್ಚಿನ ಮಾಹಿತಿಗಾಗಿ ಹತ್ತಿರದ ರೈತ ಸಂಪರ್ಕ ಕೇಂದ್ರ ಅಥವಾ ಸಹಾಯಕ ಕೃಷಿ ನಿರ್ದೇಶಕರ ಕಚೇರಿಗೆ ಸಂಪರ್ಕಿಸಬಹುದು ಎಂದು ಸಹಾಯಕ ಕೃಷಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
----------
ಅ.04, 05 ರಂದು ಪುಸ್ತಕಗಳ ಪ್ರದರ್ಶನ
ಬಳ್ಳಾರಿ,ಸೆ.30(ಕರ್ನಾಟಕ ವಾರ್ತೆ):
2021ನೇ ಸಾಲಿನಲ್ಲಿ ಪ್ರಥಮ ಮುದ್ರಣವಾಗಿ ಪ್ರಕಟಗೊಂಡ ರಾಜ್ಯ ಮಟ್ಟದ ಪುಸ್ತಕ ಆಯ್ಕೆ ಸಮಿತಿಯಿಂದ ಆಯ್ಕೆಯಾದ ಹಾಗೂ ಆಯ್ಕೆಯಾಗದ ಪುಸ್ತಕಗಳ ಪ್ರದರ್ಶನವನ್ನು ಅ.04 ಮತ್ತು 05 ರಂದು ಬೆಂಗಳೂರಿನ ಹಂಪಿನಗರದ ಪಶ್ಚಿಮ ವಲಯದ ನಗರ ಕೇಂದ್ರ ಗ್ರಂಥಾಲಯದ ಗ್ರಂಥಾAಗಣದಲ್ಲಿ ಏರ್ಪಡಿಸಲಾಗಿದೆ.
ಆಯ್ಕೆಯಾದ ಪುಸ್ತಕಗಳ ತಾತ್ಕಾಲಿಕ ಪಟ್ಟಿಯನ್ನು ಜಿಲ್ಲಾ/ನಗರ ಕೇಂದ್ರ ಗ್ರಂಥಾಲಯಗಳ ಕಚೇರಿಗಳಲ್ಲಿ ಪ್ರದರ್ಶಸಲು ಮತ್ತು ಇಲಾಖೆಯ ಅಧಿಕೃತ ವೆಬ್ ಸೈಟ್ dpl karnataka.gov.in ನಲ್ಲಿ ಪ್ರಕಟಿಸಲು ಕ್ರಮ ವಹಿಸಲಾಗುತ್ತದೆ.
ರಾಜ್ಯ ಮಟ್ಟದ ಪುಸ್ತಕ ಆಯ್ಕೆ ಸಮಿತಿಯಿಂದ ಆಯ್ಕೆಗಾಗಿ ಸಲ್ಲಿಸಿದ ಲೇಖಕರು, ಲೇಖಕ-ಪ್ರಕಾಶಕರು, ಪ್ರಕಾಶಕರು ಮತ್ತು ಪುಸ್ತಕ ಮಾರಾಟಗಾರರು ಆಕ್ಷೇಪಣೆಗಳಿದ್ದಲ್ಲಿ ಅ.09 ಸಂಜೆ 5.30 ರ ಒಳಗಾಗಿ ಅಯುಕ್ತರು, ಸಾರ್ವಜನಿಕ ಗ್ರಂಥಾಲಯ ಇಲಾಖೆ, ವಿಶ್ವೇಶ್ವರಯ್ಯ ಮುಖ್ಯ ಗೋಪುರ, 4ನೇ ಮಹಡಿ, ಡಾ. ಅಂಬೇಡ್ಕರ್ ವೀಧಿ, ಬೆಂಗಳೂರು-560001 ಇಲ್ಲಿಗೆ ಲಿಖಿತವಾಗಿ ಮನವಿಗಳನ್ನು ಸಲ್ಲಿಸಬಹುದು.
ನಂತರ ಬಂದ ಮನವಿಗಳನ್ನು ಪರಿಗಣಿಸಲಾಗುವುದಿಲ್ಲ.
ಹೆಚ್ಚಿನ ಮಾಹಿತಿಗಾಗಿ ಬಳ್ಳಾರಿ ನಗರ ಕೇಂದ್ರ ಗ್ರಂಥಾಲಯದ ಮುಖ್ಯ ಗ್ರಂಥಾಲಯಾಧಿಕಾರಿ ಕಚೇರಿಗೆ ಸಂಪರ್ಕಿಸಬಹುದು ಎಂದು ಬಳ್ಳಾರಿ ನಗರ ಕೇಂದ್ರ ಗ್ರಂಥಾಲಯದ ಮುಖ್ಯ ಗ್ರಂಥಾಲಯಾಧಿಕಾರಿಯವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
----------
ಶುಕ್ರವಾರ, ಸೆಪ್ಟೆಂಬರ್ 27, 2024
ಬಳ್ಳಾರಿಯಲ್ಲಿ ವಿಶ್ವ ಪ್ರವಾಸೋದ್ಯಮ ದಿನಾಚರಣೆ | ಪ್ರವಾಸಿ ತಾಣಗಳ ವೀಕ್ಷಣೆಯಿಂದ ಆಹ್ಲಾದಕ ಅನುಭವ: ಮುಂಡರಗಿ ನಾಗರಾಜ
ಬಳ್ಳಾರಿ,ಸೆ.27(ಕರ್ನಾಟಕ ವಾರ್ತೆ):
ನಮ್ಮ ಸುತ್ತಮುತ್ತಲಿನ ಐತಿಹಾಸಿಕ ಸ್ಥಳಗಳನ್ನು ತಪ್ಪದೇ ವೀಕ್ಷಿಸಬೇಕು. ಪ್ರವಾಸಿ ತಾಣಗಳ ವೀಕ್ಷಣೆಯಿಂದ ಮನಸ್ಸಿಗೆ ಆಹ್ಲಾದಕ ಅನುಭವ ದೊರೆಯುತ್ತದೆ ಎಂದು ಡಾ.ಬಾಬು ಜಗಜೀವನರಾಂ ಚರ್ಮ ಕೈಗಾರಿಕಾ ಅಭಿವೃದ್ಧಿ ನಿಗಮದ ಅಧ್ಯಕ್ಷ ಮುಂಡರಗಿ ನಾಗರಾಜ ಅವರು ಹೇಳಿದರು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಪ್ರವಾಸೋದ್ಯಮ ಇಲಾಖೆ ಹಾಗೂ ಹೋಟೆಲ್ ಮಾಲೀಕರ ಸಂಘದ ಸಹಯೋಗದೊಂದಿಗೆ ನಗರದ ಐತಿಹಾಸಿಕ ಕೋಟೆ ಮುಂಭಾಗದ ಆವರಣದಲ್ಲಿ ಶುಕ್ರವಾರ ಏರ್ಪಡಿಸಿದ್ದ ವಿಶ್ವ ಪ್ರವಾಸೋದ್ಯಮ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ವಿಶ್ವ ವಿಖ್ಯಾತ ಹಂಪಿ ಹಾಗೂ ತುಂಗಾಭದ್ರಾ ಡ್ಯಾಂ ಪ್ರವಾಸಿ ತಾಣಗಳು ಬಳ್ಳಾರಿ ಜಿಲ್ಲೆಯನ್ನು ಬೇರ್ಪಟ್ಟವು. ಆದರೂ ನಮ್ಮ ಜಿಲ್ಲೆಯಲ್ಲಿ ಸಂಡೂರಿನ ಕುಮಾರಸ್ವಾಮಿ ದೇವಸ್ಥಾನ, ಸ್ವಾಮಿಮಲೈ ಅರಣ್ಯ ಕ್ಷೇತ್ರ, ನಾರಿಹಳ್ಳ ಜಲಾಶಯ, ಬಳ್ಳಾರಿಯ ಐತಿಹಾಸಿಕ ಕೋಟೆ, ಮಿಂಚೇರಿ ಬೆಟ್ಟ, ಸಂಗನಕಲ್ಲು ಗುಡ್ಡ, ಸಿರುಗುಪ್ಪದ ಕೆಂಚನಗುಡ್ಡ, ಕುರುಗೋಡಿನ ದೊಡ್ಡ ಬಸವೇಶ್ವರ ದೇವಸ್ಥಾನ ಸೇರಿದಂತೆ ಅನೇಕ ಪ್ರವಾಸಿ ತಾಣಗಳಿದ್ದು, ಜನಸಾಮಾನ್ಯರು ಈ ಸ್ಥಳಗಳಿಗೆ ಭೇಟಿ ನೀಡಿ ಸ್ಥಳೀಯ ಪ್ರವಾಸಿ ತಾಣಗಳನ್ನು ವೀಕ್ಷಿಸಬೇಕು ಎಂದರು.
*ಬಳ್ಳಾರಿಯಲ್ಲೂ ರಾಷ್ಟçಪಿತರ ಚಿತಾಭಸ್ಮ:*
ರಾಷ್ಟçಪಿತ ಮಹಾತ್ಮ ಗಾಂಧೀಜಿಯವರ ಚಿತಾಭಸ್ಮವು ನಗರದ ರೇಡಿಯೋ ಪಾರ್ಕ್ನ ಪಿಸಿಹೆಚ್ ಕಾಲೇಜು ಆವರಣದಲ್ಲಿರುವುದು ವಿಶೇಷವಾಗಿದೆ. ಈ ಹಿಂದೆ ಗಾಂಧೀಜಿಯವರು ನಗರದ ರೈಲ್ವೇ ನಿಲ್ದಾಣದಲ್ಲಿ ತಂಗಿದ್ದು, ನಂತರ ಸಂಡೂರಿಗೆ ತೆರಳಿ ಅಲ್ಲಿನ ಪ್ರಕೃತಿ ಸೌಂದರ್ಯ ಸವೆದು “ಸೀ ಸಂಡೂರು ಇನ್ ಸೆಪ್ಟಂಬರ್” ಎನ್ನುವ ಮಾತನ್ನು ಹೇಳಿದ್ದು ಸಂತಸದ ವಿಷಯವಾಗಿದೆ ಎಂದರು.
ಮುAದಿನ ಪೀಳಿಗೆಯು ಇತಿಹಾಸ ಅರಿತುಕೊಳ್ಳಲು ಐತಿಹಾಸಿಕ ಪ್ರವಾಸಿ ತಾಣಗಳನ್ನು ವೀಕ್ಷಿಸಿ ಸಂರಕ್ಷಿಸಿ, ಪೋಷಣೆ ಮಾಡಬೇಕು ಎಂದು ತಿಳಿಸಿದರು.
ಮಹಾನಗರ ಪಾಲಿಕೆಯ ಮೇಯರ್ ಮುಲ್ಲಂಗಿ ನಂದೀಶ್ ಅವರು ಮಾತನಾಡಿ, ಪ್ರವಾಸೋದ್ಯಮ ಮಹತ್ವವನ್ನು ಅಂತರಾಷ್ಟಿçÃಯ ಮಟ್ಟದಲ್ಲಿ ಜಾಗೃತಿ ಮೂಡಿಸುವ ನಿಮಿತ್ತವಾಗಿ ವಿಶ್ವ ಪ್ರವಾಸೋದ್ಯಮ ದಿನಾಚರಣೆ ಆಚರಿಸಲಾಗುತ್ತಿದ್ದು, ದೇಶ-ದೇಶಗಳ ಮಧ್ಯೆ ಉತ್ತಮ ಬಾಂಧವ್ಯ ಬೆಸೆಯಲು ಪ್ರವಾಸೋದ್ಯಮವು ಸಹಕಾರಿಯಾಗಿದೆ ಎಂದು ಹೇಳಿದರು.
ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಾಹುಲ್ ಶರಣಪ್ಪ ಸಂಕನೂರ ಅವರು ಮಾತನಾಡಿ, ದೇಶ ಸುತ್ತು-ಕೋಶ ಓದು ಎನ್ನುವ ಗಾದೆ ಮಾತಿನಂತೆ ಪ್ರತಿಯೊಬ್ಬರೂ ಪುಸ್ತಕದ ಓದಿನ ಜೊತೆಗೆ ಪ್ರವಾಸಿ ತಾಣಗಳಿಗೆ ಭೇಟಿ ನೀಡಿದಾಗ ಮಾತ್ರ ಜಗತ್ತಿನ ಸಾಂಸ್ಕೃತಿಕ, ಭೌಗೋಳಿಕ ಮತ್ತು ಆರ್ಥಿಕ ಸ್ಥಿತಿಗತಿಗಳನ್ನು ಅರಿಯಲು ಸಾಧ್ಯವಾಗುತ್ತದೆ ಎಂದರು.
ಐತಿಹಾಸಿಕ, ನೈಸರ್ಗಿಕ ತಾಣಗಳ ವೀಕ್ಷಣೆಯಿಂದ ಇತಿಹಾಸದ ಕುರಿತು ಕುತೂಹಲ ಸೃಷ್ಟಿಯಾಗಿ ಜ್ಞಾನ ವೃದ್ಧಿಯಾಗಲಿದೆ. ಜನಸಾಮಾನ್ಯರು ವೀಕ್ಷಣೆ ತಾಣಗಳ ಕುರಿತು ಒಬ್ಬರಿಗೊಬ್ಬರೂ ವಿವರಿಸುತ್ತಾ ಜನಪ್ರಿಯತೆಗೊಳಿಸಬೇಕು. ಪ್ರವಾಸೋದ್ಯಮ ಆಯಾಮಗಳನ್ನು ಅರಿತುಕೊಂಡು ಐತಿಹಾಸಿಕ ಪ್ರಾಮುಖ್ಯತೆ ತಿಳಿದುಕೊಳ್ಳಬೇಕು ಎಂದು ಹೇಳಿದರು.
*ಶಾಲಾ ಮಕ್ಕಳಿಗೆ ಪ್ರವಾಸ:*
ಜಿಲ್ಲೆಯ ಡಿಎಂಎಫ್ ಅನುದಾನಡಿ 9ನೇ ತರಗತಿ ಶಾಲಾ ಮಕ್ಕಳಿಗೆ “ಆಡಳಿತ ಪ್ರವಾಸೋದ್ಯಮ” ಯೋಜನೆಯಡಿ ಸಂಡೂರು ನೈಸರ್ಗಿಕ ಪ್ರವಾಸಿ ತಾಣ, ಜಿಲ್ಲಾಧಿಕಾರಿ ಕಚೇರಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕಚೇರಿ, ರಾಬರ್ಟ್ ಬ್ರೂಸ್‌ಫೂಟ್ ಪ್ರಾಕ್ತನ ವಸ್ತು ಸಂಗ್ರಾಲಯ ಸೇರಿದಂತೆ ನಾನಾ ಸ್ಥಳಗಳಿಗೆ ವಿದ್ಯಾರ್ಥಿಗಳನ್ನು ಕರೆದೊಯ್ಯಲಾಗುತ್ತದೆ ಎಂದು ತಿಳಿಸಿದರು.
ಇದೇ ವೇಳೆ ಪ್ರವಾಸಿ ಮಿತ್ರ ರಕ್ಷಣಾ ಸಿಬ್ಬಂದಿಗಳಿಗೆ ಪ್ರಶಂಸೆ ಪತ್ರ ವಿತರಿಸಲಾಯಿತು.
ಈ ಸಂದರ್ಭದಲ್ಲಿ ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆಯ ಸಹಾಯಕ ಸಂರಕ್ಷಣಾಧಿಕಾರಿ ರವೀಂದ್ರ, ಹೋಟೆಲ್ ಮಾಲೀಕರ ಸಂಘದ ಕಾರ್ಯದರ್ಶಿ ವಿಕ್ರಮ್ ಪೋಲಾ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಬಿ.ನಾಗರಾಜ ಪ್ರವಾಸೋದ್ಯಮ ಇಲಾಖೆಯ ಅಧಿಕಾರಿ ಶ್ರೀಹರಿ ಮಾಸನೂರು ಸೇರಿದಂತೆ ಸಿಬ್ಬಂದಿ, ಪ್ರವಾಸಿ ಮಾರ್ಗದರ್ಶಕರು ಹಾಗೂ ಶಾಲಾ ಶಿಕ್ಷಕರು, ವಿದ್ಯಾರ್ಥಿಗಳು ಹಾಗೂ ಇತರರು ಉಪಸ್ಥಿತರಿದ್ದರು.
--------
ಕಲ್ಯಾಣ ಕರ್ನಾಟಕ ಭಾಗದಲ್ಲಿ ವಿನೂತನ ವಿಧಾನ | ಬಾದನಹಟ್ಟಿಯಲ್ಲಿ ಪುಸ್ತಕ ಗೂಡು ಲೋಕಾರ್ಪಣೆ
ಬಳ್ಳಾರಿ,ಸೆ.27(ಕರ್ನಾಟಕ ವಾರ್ತೆ):
ಕುರುಗೋಡು ತಾಲ್ಲೂಕಿನ ಬಾದನಹಟ್ಟಿ ಗ್ರಾಮದಲ್ಲಿ ಮೊದಲ ಬಾರಿಗೆ ಗ್ರಾಮದ ಶಿವಶರಣೆ ಹಂಪಮ್ಮನವರ ಮಠದಲ್ಲಿ ಪುಸ್ತಕದ ಗೂಡನ್ನು ಶುಕ್ರವಾರ ಉದ್ಘಾಟನೆ ಮಾಡಲಾಯಿತು.
ಬಾದನಹಟ್ಟಿ ಗ್ರಾಮ ಪಂಚಾಯತ್‌ನ ಅಧ್ಯಕ್ಷ ಕರಿಯಪ್ಪ ಅವರು ಉದ್ಘಾಟಿಸಿ, ಬಳಿಕ ಮಾತನಾಡಿದ ಅವರು, ಗ್ರಾಮೀಣ ಭಾಗದ ಮಕ್ಕಳು ಜ್ಞಾನ ಪಡೆಯಲು, ಹಲವು ಸರ್ಕಾರಿ ಹುದ್ದೆಗೆ ಓದುವವರಿಗೆ ಈ ಪುಸ್ತಕ ಗೂಡು ಸಹಕಾರಿಯಾಗಲಿದೆ ಎಂದರು.
ಕುರುಗೋಡು ತಾಪಂ ಕಾರ್ಯನಿರ್ವಾಹಕ ಅಧಿಕಾರಿ ನಿರ್ಮಲಾ ಅವರು ಮಾತನಾಡಿ, ಪುಸ್ತಕ ಗೂಡು ಗ್ರಾಮೀಣ ಭಾಗದ ಮಕ್ಕಳಲ್ಲಿ ಅಕ್ಷರ ಜ್ಞಾನ, ಪುಸ್ತಕ ಪ್ರೀತಿ ಮೂಡಿಬರಲಿ, ಇದರ ಸದುಪಯೋಗ ಜನರು ಉಪಯೋಗಿಸಿಕೊಳ್ಳಬೇಕು ಎಂದರು.
ನರೇಗಾ ಸಹಾಯಕ ನಿರ್ದೇಶಕ ಶಿವರಾಮರೆಡ್ಡಿ ಅವರು ಮಾತನಾಡಿ, 371-ಜೆ ಹೈದರಾಬಾದ್ ವಿಶೇಷ ಪ್ರಾತಿನಿಧ್ಯ ವತಿಯಿಂದ ಸರ್ಕಾರ ಹಲವಾರು ಕಾರ್ಯಕ್ರಮಗಳನ್ನು ಜಾರಿಗೊಳಿಸುತ್ತಿದೆ. ಇವುಗಳನ್ನು ಬಳಸಿಕೊಳ್ಳಬೇಕು, ಗ್ರಾಮದ ಜನರು ಈ ಪುಸ್ತಕ ಗೂಡನ್ನು ಸಮರ್ಪಕವಾಗಿ ಉಪಯೋಗಿಸಬೇಕು ಎಂದು ತಿಳಿಸಿದರು.
ಪುಸ್ತಕ ಗೂಡುಗಳನ್ನು ಪ್ರಸ್ತುತ ಬಸ್ ನಿಲ್ದಾಣಗಳಲ್ಲಿ, ಉದ್ಯಾನವನಗಳಲ್ಲಿ ಸಾರ್ವಜನಿಕ ಕಚೇರಿಗಳಲ್ಲಿ, ಮಠ, ಮಂದಿರಗಳಲ್ಲಿ ಸಾರ್ವಜನಿಕರು ತಮ್ಮ ಬಿಡುವಿನ ಸಮಯದಲ್ಲಿ ಪುಸ್ತಕ ಓದುವ ಹವ್ಯಾಸ ಮೂಡಲಿ ಎಂಬ ಉದ್ದೇಶದಿಂದ ಈ ಪುಸ್ತಕ ಗೂಡನ್ನು ನಿರ್ಮಿಸಲಾಗಿದೆ.
ಈ ವಿನೂತನ ವಿಧಾನದಿಂದ ಸಮುದಾಯದಲ್ಲಿ ಓದುವ ಪ್ರಜ್ಞೆ ಮೂಡಿಸುವಲ್ಲಿ ಪುಸ್ತಕ ಗೂಡು ಪ್ರಭಾವ ಬೀರಲಿ ಎಂಬುದು ಇದರ ಅಶಯವಾಗಿದೆ. ಇಲ್ಲಿ ಕಥೆ, ಕಾದಂಬರಿ, ನಿಯತಕಾಲಿಕೆಗಳು ಮತ್ತು ನಿತ್ಯ ಸುದ್ದಿ ಪತ್ರಿಕೆಗಳ ಪೂರೈಕೆಯಿದ್ದು. ಲಭ್ಯವಿರುವ ಪುಸ್ತಕಗಳನ್ನು ಓದುವ ಹವ್ಯಾಸ ಸಮುದಾಯದಲ್ಲಿ ಹೆಚ್ಚು ಮೂಡಲಿ.
- ಡಾ.ಪೂಜಾರಿ ಯಲ್ಲೇಶ, ರಾಜೀವ್‌ಗಾಂಧಿ ಪಂಚಾಯತ್ ರಾಜ್ ಫೆಲೋ, ಕುರುಗೋಡು ತಾಪಂ, ಬಳ್ಳಾರಿ.
ಕಾರ್ಯಕ್ರಮದಲ್ಲಿ ಬಾದನಹಟ್ಟಿ ಗ್ರಾಪಂ ಉಪಾಧ್ಯಕ್ಷರಾದ ಮೇಟಿ ಕರಿಬಸಮ್ಮ, ಪಂಚಾಯತಿ ಅಭಿವೃದ್ಧಿ ಅಧಿಕಾರಿ ರಾಮಲಿ, ಗ್ರಂಥಪಾಲಕ ಹಾಗಲೂರಪ್ಪ, ಶರಣಬಸಪ್ಪ, ದುರ್ಗ ಹಾಗಲುರಪ್ಪ, ಜಿ.ದೇವರಾಜ್ ಸೇರಿದಂತೆ ಎನ್‌ಆರ್‌ಎಲ್‌ಎಂ ಸಿಬ್ಬಂದಿಗಳು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.
--------
ರಾಜ್ಯ ಮಟ್ಟದ ಪುಸ್ತಕ ಆಯ್ಕೆ ಸಮಿತಿಯಿಂದ ಆಯ್ಕೆಯಾದ ಹಾಗೂ ಆಯ್ಕೆಯಾಗದ ಪುಸ್ತಕಗಳ ಪ್ರದರ್ಶನ
ಬಳ್ಳಾರಿ,ಸೆ.27(ಕರ್ನಾಟಕ ವಾರ್ತೆ):
2021ನೇ ಸಾಲಿನಲ್ಲಿ ಪ್ರಥಮ ಮುದ್ರಣವಾಗಿ ಪ್ರಕಟಗೊಂಡ ರಾಜ್ಯ ಮಟ್ಟದ ಪುಸ್ತಕ ಆಯ್ಕೆ ಸಮಿತಿಯಿಂದ ಆಯ್ಕೆಯಾದ ಹಾಗೂ ಆಯ್ಕೆಯಾಗದ ಪುಸ್ತಕಗಳ ಪ್ರದರ್ಶನವನ್ನು ಅ.04 ಮತ್ತು 05 ರಂದು ಬೆಂಗಳೂರಿನ ಹಂಪಿನಗರದ ಪಶ್ಚಿಮ ವಲಯದ ನಗರ ಕೇಂದ್ರ ಗ್ರಂಥಾಲಯದ ಗ್ರಂಥಾAಗಣದಲ್ಲಿ ಏರ್ಪಡಿಸಲಾಗಿದೆ.
ಆಯ್ಕೆಯಾದ ಪುಸ್ತಕಗಳ ತಾತ್ಕಾಲಿಕ ಪಟ್ಟಿಯನ್ನು ಜಿಲ್ಲಾ ಮತ್ತು ನಗರ ಕೇಂದ್ರ ಗ್ರಂಥಾಲಯಗಳ ಕಚೇರಿಗಳಲ್ಲಿ ಮತ್ತು ಇಲಾಖೆಯ ಅಧಿಕೃತ ವೆಬ್‌ಸೈಟ್ ಜಠಿಟ ಞಚಿಡಿಟಿಚಿಣಚಿಞಚಿ.gov.iಟಿ ನಲ್ಲಿ ಪ್ರದರ್ಶಸಲಾಗಿದೆ.
ರಾಜ್ಯ ಮಟ್ಟದ ಪುಸ್ತಕ ಆಯ್ಕೆ ಸಮಿತಿಯಿಂದ ಆಯ್ಕೆಗಾಗಿ ಸಲ್ಲಿಸಿದ ಲೇಖಕರು, ಲೇಖಕ-ಪ್ರಕಾಶಕರು, ಪ್ರಕಾಶಕರು ಮತ್ತು ಪುಸ್ತಕ ಮಾರಾಟಗಾರರು ಆಕ್ಷೇಪಣೆಗಳಿದ್ದಲ್ಲಿ ಅ.09 ರ ಸಂಜೆ 5.30 ರೊಳಗಾಗಿ ಅಯುಕ್ತರು, ಸಾರ್ವಜನಿಕ ಗ್ರಂಥಾಲಯ ಇಲಾಖೆ, ವಿಶ್ವೇಶ್ವರಯ್ಯ ಮುಖ್ಯ ಗೋಪುರ, 4ನೇ ಮಹಡಿ, ಡಾ. ಅಂಬೇಡ್ಕರ್ ವೀಧಿ, ಬೆಂಗಳೂರು-560001 ಇಲ್ಲಿಗೆ ಲಿಖಿತವಾಗಿ ಮನವಿಗಳನ್ನು ಸಲ್ಲಿಸಬಹುದು.
ನಂತರ ಬಂದ ಮನವಿಗಳನ್ನು ಪರಿಗಣಿಸಲಾಗುವುದಿಲ್ಲ.
ಹೆಚ್ಚಿನ ಮಾಹಿತಿಗಾಗಿ ಬಳ್ಳಾರಿ ನಗರ ಕೇಂದ್ರ ಗ್ರಂಥಾಲಯದ ಮುಖ್ಯ ಗ್ರಂಥಾಲಯಾಧಿಕಾರಿ ಕಚೇರಿಗೆ ಸಂಪರ್ಕಿಸಬಹುದು ಎಂದು ಬಳ್ಳಾರಿ ನಗರ ಕೇಂದ್ರ ಗ್ರಂಥಾಲಯದ ಮುಖ್ಯ ಗ್ರಂಥಾಲಯಾಧಿಕಾರಿ ನರಸಣ್ಣ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
---------
ಸೆ.28 ರಂದು ‘ಸ್ವಚ್ಛತಾ ದಿನಾಚರಣೆ’ ಕಾರ್ಯಕ್ರಮ
ಬಳ್ಳಾರಿ,ಸೆ.27(ಕರ್ನಾಟಕ ವಾರ್ತೆ):
ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ವಕೀಲರ ಸಂಘ ಮತ್ತು ಬಳ್ಳಾರಿ ಮಹಾನಗರ ಪಾಲಿಕೆ ಇವರ ಸಂಯುಕ್ತಾಶ್ರಯದಲ್ಲಿ ‘ಅ.02 ಗಾಂಧಿ ಜಯಂತಿ ಹಾಗೂ ಸ್ವಚ್ಛತಾ-ಹಿ-ಸೇವಾ ಅಭಿಯಾನ 2024’ರ ಅಂಗವಾಗಿ ‘ಸ್ವಭಾವ ಸ್ವಚ್ಛತಾ-ಸಂಸ್ಕಾರ ಸ್ವಚ್ಛತಾ’ ಎನ್ನುವ ಘೋಷವಾಕ್ಯದೊಂದಿಗೆ ಸೆ.28 ರಂದು ಬೆಳಿಗ್ಗೆ 07.30 ಗಂಟೆಗೆ ನಗರದ ತಾಳೂರು ರಸ್ತೆಯ ಹೊಸ ನ್ಯಾಯಾಲಯದಲ್ಲಿ ಸ್ವಚ್ಛತಾ ದಿನಾಚರಣೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶರಾದ ರಾಜೇಶ್ ಎನ್.ಹೊಸಮನೆ ಅವರು ತಿಳಿಸಿದ್ದಾರೆ.
---------
ಸೆ.28 ರಂದು ವಿದ್ಯುತ್ ವ್ಯತ್ಯಯ
ಬಳ್ಳಾರಿ,ಸೆ.27(ಕರ್ನಾಟಕ ವಾರ್ತೆ):
ಸಿರುಗುಪ್ಪ ಜೆಸ್ಕಾಂ ವ್ಯಾಪ್ತಿಯ 110/11 ಕೆವಿ ತೆಕ್ಕಲಕೋಟೆ ವಿದ್ಯುತ್ ವಿತರಣಾ ಕೇಂದ್ರದಿAದ ಸರಬರಾಜು ಆಗುವ 11 ಕೆವಿ ಫೀಡರ್ ವ್ಯಾಪ್ತಿಯಲ್ಲಿ ರಸ್ತೆ ಕಾಮಗಾರಿ ಕೈಗೊಳ್ಳುತ್ತಿರುವುದರಿಂದ ಸೆ.28 ಬೆಳಿಗ್ಗೆ 10 ಗಂಟೆಯಿAದ ಸಂಜೆ 05 ಗಂಟೆಯವರೆಗೆ ಎಫ್-6 ನ ಹಳೇಕೋಟೆ ನಿರಂತರ ಜ್ಯೋತಿ (ಎನ್‌ಜೆವೈ) ಮಾರ್ಗದಲ್ಲಿ ವಿದ್ಯುತ್ ಸಂಪರ್ಕದಲ್ಲಿ ವ್ಯತ್ಯಯವಾಗಲಿದೆ.
ವಿದ್ಯುತ್ ವ್ಯತ್ಯಯವಾಗುವ ಗ್ರಾಮಗಳು: ನಿಟ್ಟೂರು, ಹೆರಕಲ್ ಹಳೇಕೋಟೆ ಮತ್ತು ಹಳೇಕೋಟೆ ಸುತ್ತಮುತ್ತಲಿನ ಕ್ರಷರ್‌ಗಳ ವಿದ್ಯುತ್ ಸಂಪರ್ಕದಲ್ಲಿ ವ್ಯತ್ಯಯವಾಗಲಿದೆ.
ಸೂಚನೆ: ರಸ್ತೆ ಅಗಲೀಕರಣ ಕಾಮಗಾರಿ ಮುಗಿಯುವವರೆಗೂ ಅಥವಾ ಮುಗಿದ ತಕ್ಷಣ ಯಾವುದೇ ಸಂದರ್ಭದಲ್ಲಿ ವಿದ್ಯುತ್ ಸಂಪರ್ಕ ಚಾಲನೆ ಮಾಡುವ ಸಾಧ್ಯತೆ ಇದ್ದು, ವಿದ್ಯುತ್ ಗ್ರಾಹಕರು ವಿದ್ಯುತ್ ಮಾರ್ಗಗಳ ಹತ್ತಿರ ಯಾವುದೇ ತರಹದ ಕೆಲಸ ಕೈಗೊಳ್ಳಬಾರದು ಎಂದು ಸಿರುಗುಪ್ಪ ಜೆಸ್ಕಾಂನ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
----------
ವಿಧಾನಮಂಡಲದ ಎಸ್‌ಸಿ-ಎಸ್‌ಟಿ ಕಲ್ಯಾಣ ಸಮಿತಿಯಿಂದ ಬಳ್ಳಾರಿ ಜಿಲ್ಲಾ ಪ್ರಗತಿ ಪರಿಶೀಲನೆ ಬಡ-ಶೋಷಿತ ಸಮುದಾಯದವರ ಅಭಿವೃದ್ಧಿಗೆ ಅಧಿಕಾರಿಗಳು ಶ್ರಮಿಸಬೇಕು: ಪಿ.ಎಂ.ನರೇAದ್ರಸ್ವಾಮಿ
ಬಳ್ಳಾರಿ,ಸೆ.27(ಕರ್ನಾಟಕ ವಾರ್ತೆ):
ಸಮಾಜದಲ್ಲಿ ಶೋಷಣೆಗೊಳಗಾದ ಪರಿಶಿಷ್ಟ ಸಮುದಾಯ ವರ್ಗದವರ ಅಭಿವೃದ್ಧಿಗೆ ಅವರಿಗಾಗಿಯೇ ಇರುವ ಯೋಜನೆಗಳನ್ನು ಸಕಾಲದಲ್ಲಿ ತಲುಪಿಸುವ ಮೂಲಕ ಪರಿಶಿಷ್ಟ ಸಮುದಾಯದ ಕಟ್ಟ ಕಡೆಯ ವ್ಯಕ್ತಿಗೂ ಬದುಕು ರೂಪಿಸುವ ಕೆಲಸವಾಗಬೇಕು ಎಂದು ಕರ್ನಾಟಕ ವಿಧಾನಮಂಡಲದ ಅನುಸೂಚಿತ ಜಾತಿ ಮತ್ತು ಅನುಸೂಚಿತ ಪಂಗಡಗಳ ಕಲ್ಯಾಣ ಸಮಿತಿಯ ಅಧ್ಯಕ್ಷ ಪಿ.ಎಂ. ನರೇಂದ್ರಸ್ವಾಮಿ ಅವರು ಹೇಳಿದರು.
ನಗರದ ಜಿಲ್ಲಾ ಪಂಚಾಯತ್‌ನ ಅಬ್ದುಲ್ ನಜೀರ್‌ಸಾಬ್ ಸಭಾಂಗಣದಲ್ಲಿ ಶುಕ್ರವಾರದಂದು ಅನುಸೂಚಿತ ಜಾತಿ ಮತ್ತು ಅನುಸೂಚಿತ ಪಂಗಡಗಳ ಕಲ್ಯಾಣ ಸಮಿತಿ ವತಿಯಿಂದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಸಮುದಾಯದವರ ಅಭಿವೃದ್ಧಿ, ಕಲ್ಯಾಣ, ಏಳಿಗೆಗೆ ವಿವಿಧ ಇಲಾಖೆಗಳು ಹಮ್ಮಿಕೊಂಡಿರುವ ಕಾರ್ಯಕ್ರಮಗಳು ಹಾಗೂ ಯೋಜನೆಗಳ ಕುರಿತು ಏರ್ಪಡಿಸಿದ್ದ ಜಿಲ್ಲಾ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಅತ್ಯಂತ ಹಿಂದುಳಿದ ಪ್ರದೇಶವಾದ ಕಲ್ಯಾಣ ಕರ್ನಾಟಕ ಭಾಗದಲ್ಲಿ ಅಧಿಕಾರಿಗಳು ಕಾರ್ಯನಿರ್ವಹಿಸುತ್ತಿದ್ದೀರಿ; ಸಾಮಾಜಿಕ ಕಳಕಳಿಯ ಜವಾಬ್ದಾರಿ ಹೊಂದಬೇಕು. ಪರಿಶಿಷ್ಟ ಸಮುದಾಯದವರಿಗೂ ಸಾಮಾಜಿಕ ಜಗತ್ತಿನಲ್ಲಿ ಸಹಬಾಳ್ವೆ ನಡೆಸಲು ಅವಕಾಶ ನೀಡಬೇಕು ಎಂದು ತಿಳಿಸಿದರು.
ಸರ್ಕಾರದ ಆದೇಶದಂತೆ ಜಿಲ್ಲೆಯ ಎಲ್ಲಾ ಇಲಾಖೆ ಕಚೇರಿಗಳಲ್ಲಿಯೂ ಮೀಸಲಾತಿ ಉದ್ಯೋಗಾವಕಾಶ ಕಲ್ಪಿಸಲು ಅಧಿಕಾರಿಗಳು ಮುತುವರ್ಜಿ ವಹಿಸಬೇಕು ಎಂದರು.
ಜಿಲ್ಲೆಯಲ್ಲಿನ ಮಾಜಿ ದೇವದಾಸಿಯರ ಪುನರ್ವಸತಿಗೆ ಕ್ರಮ ವಹಿಸಬೇಕು. ವಸತಿ ರಹಿತರಿಗೆ ವಸತಿ ಯೋಜನೆಯಡಿ ಮನೆ ನೀಡಬೇಕು. ನಿವೇಶನ ಇಲ್ಲದಿದ್ದಲ್ಲಿ ಸರ್ಕಾರವೇ ಖರೀದಿಸಿ ಮಾಜಿ ದೇವದಾಸಿಯರಿಗೆ ನೀಡಬೇಕು. ಈ ಬಗ್ಗೆ ಸಂಬAಧಿಸಿದ ಇಲಾಖೆಯ ಅಧಿಕಾರಿಗಳು ವಿಶೇಷ ಕಾಳಜಿ ವಹಿಸಬೇಕು ಎಂದರು.
ಜಿಲ್ಲೆಯಲ್ಲಿ ದೇವದಾಸಿಯರ ಏಳ್ಗೆಗಾಗಿ ರೂಪಿಸಿದ ಕಾರ್ಯಯೋಜನೆಗಳ ಬಗ್ಗೆ ಪೂರಕ ಮಾಹಿತಿಯೊಂದಿಗೆ ಸಮಿತಿಗೆ ವರದಿ ನೀಡಬೇಕು ಎಂದು ಅಧ್ಯಕ್ಷರು ಅಧಿಕಾರಿಗಳಿಗೆ ಸೂಚಿಸಿದರು.
ಜಿಲ್ಲೆಯಲ್ಲಿ ಪರಿಶಿಷ್ಟರ ಕಾಲೋನಿಗಳಲ್ಲಿ ಮೂಲಭೂತ ಸೌಕರ್ಯಗಳಲ್ಲಿ ಕಲ್ಪಿಸಬೇಕು. ಜೆಜೆಎಂ ಕಾಮಗಾರಿ ಸಮರ್ಪಕವಾಗಿ ಅನುಷ್ಠಾನಗೊಳಿಸಬೇಕು. ಜಿಲ್ಲೆಯಲ್ಲಿ ಪರಿಶಿಷ್ಟರಿಗೆ ಸಮುದಾಯ ಭವನಗಳನ್ನು ಕಲ್ಪಿಸಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.
ಸರ್ಕಾರಿ ಮತ್ತು ಖಾಸಗಿ ಶಾಲಾ-ಕಾಲೇಜುಗಳಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಮಕ್ಕಳಿಗೆ ಶುಲ್ಕ ನೆಪವೊಡ್ಡಿ ಪ್ರವೇಶ ನಿರಾಕರಿಸುವಂತಿಲ್ಲ. ಪ್ರವೇಶ ನಿರಾಕರಿಸಿದಲ್ಲಿ ಅಂತಹ ಕಾಲೇಜು-ಸಂಸ್ಥೆಗಳ ವಿರುದ್ದ ಕ್ರಮವಹಿಸಬೇಕು ಡಿಡಿಪಿಯು ಅಧಿಕಾರಿಗಳಿಗೆ ಸೂಚಿಸಿದರು.
ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಎಸೆಸೆಲ್ಸಿ ವಿದ್ಯಾರ್ಥಿಗಳನ್ನು ಶೈಕ್ಷಣಿಕವಾಗಿ ಮುನ್ನಲೆಗೆ ತರಲು ಗ್ರಾಮೀಣ ಭಾಗದಲ್ಲಿ ಎಸ್.ಡಿ.ಎಂ.ಸಿ ಸಮಿತಿಯನ್ನು ವಿಶ್ವಾಸಕ್ಕೆ ಪಡೆದು ಸರ್ಕಾರದ ಅನುದಾನ ಹೊರತಾಗಿ ಸ್ಥಳೀಯವಾಗಿ ಅನುದಾನ ಸಂಗ್ರಹಿಸಿ ಗುಣಮಟ್ಟದ ಶಿಕ್ಷಣ ನೀಡುವತ್ತ ಹೆಚ್ಚು ಮುತುವರ್ಜಿ ವಹಿಸಬೇಕು ಎಂದರು.
2011ರ ಜನಗಣತಿ ಪ್ರಕಾರ ಬಳ್ಳಾರಿ ಜಿಲ್ಲೆಯಲ್ಲಿನ ಒಟ್ಟು 14,00,970 ಜನಸಂಖ್ಯೆ ಪೈಕಿ ಪರಿಶಿಷ್ಟ ಜಾತಿಯಲ್ಲಿ 1,33,180 ಪುರುಷರು ಮತ್ತು 1,34,213 ಮಹಿಳೆಯರು ಇದ್ದಾರೆ. ಪರಿಶಿಷ್ಟ ಪಂಗಡದಲ್ಲಿ 1,31,119 ಪುರುಷರು ಮತ್ತು 1,31,553 ಮಹಿಳೆಯರು ಇದ್ದಾರೆ. ಕಳೆದ ಮೂರು ವರ್ಷಗಳಲ್ಲಿ ಜಿಲ್ಲೆಯಲ್ಲಿ 65 ದೌರ್ಜನ್ಯ ಪ್ರಕರಣಗಳು ನಡೆದಿದ್ದು, 127 ಸಂತ್ರಸ್ತರಿಗೆ ಪರಿಹಾರ ಕಲ್ಪಿಸಲಾಗಿದೆ ಎಂದು ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿಗಳು ಸಭೆಗೆ ಮಾಹಿತಿ ನೀಡಿದರು.
ಎಸ್ಸಿ ಮತ್ತು ಎಸ್ಟಿ ಜನರು ಸೇರಿದಂತೆ ಹೆಚ್ಚಿನ ಸಂಖ್ಯೆಯಲ್ಲಿ ಫಲಾನುಭವಿಗಳು ಇರುವ ಗೃಹಲಕ್ಷಿö್ಮÃ ಯೋಜನೆಯ ಜಾರಿಗೆ ಕಾಳಜಿ ವಹಿಸಬೇಕು. ಜಿಲ್ಲೆಗೆ ನಿಗದಿಪಡಿಸಿದ ಗುರಿಯನ್ನು ತಲುಪಿ ಗೃಹಲಕ್ಷಿö್ಮÃ ಯೋಜನೆಯ ಅನುಷ್ಠಾನದಲ್ಲಿ ಉತ್ತಮ ಸಾಧನೆ ತೋರೇಕು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಅಧಿಕಾರಿಗಳಿಗೆ ತಿಳಿಸಿದರು.
*ಅರಣ್ಯ ರಕ್ಷಾ ಸಮಿತಿ ಸ್ಥಾಪಿಸಿ:*
ಜಿಲ್ಲೆಯ ಆರಣ್ಯ ಪ್ರದೇಶದ ಅರಣ್ಯ ವಾಸಿಗಳಿಗೆ ಸಂಬAಧಪಟ್ಟAತೆ ಪುನರ್ವಸತಿ ಯೋಜನೆಯಡಿ ರಚಿಸಬೇಕಾಗಿದ್ದ ರಕ್ಷಣಾ ಸಮಿತಿ ರಚಿಸದಿರುವುದಕ್ಕೆ ಅಸಮಾಧಾನ ವ್ಯಕ್ತಪಡಿಸಿದ ಪಿ.ಎಂ.ನರೇAದ್ರಸ್ವಾಮಿ ಅವರು, ಸಮಿತಿ ರಚಿಸದೆ ಹೋದರೆ ಅವರಿಗೆ ಹೇಗೆ ಸೌಲಭ್ಯ ನೀಡುವುದು ಎಂದು ಪ್ರಶ್ನಿಸಿ ಕೂಡಲೇ ಅರಣ್ಯ ಇಲಾಖೆ ಸಮಿತಿ ರಚಿಸಿ ಸಮಿತಿಗೆ ವರದಿ ಸಲ್ಲಿಸಬೇಕು. ಅಲ್ಲದೆ ಅರಣ್ಯದಲ್ಲಿನ ಪಟ್ಟಾ ಜಮೀನಿಗೆ ಸಂಬAಧಿಸಿದAತೆ ಪ್ರಕರಣಗಳ ಕುರಿತು ಅರಣ್ಯ ಹಕ್ಕು ಸಮಿತಿಯಲ್ಲಿ ಮತ್ತೊಮ್ಮೆ ಪರಿಶೀಲಿಸಬೇಕು ಎಂದರು.
*ಗುತ್ತಿಗೆಯಲ್ಲಿ ಮೀಸಲಾತಿ:*
ಲೋಕೋಪಯೋಗಿ, ನೀರಾವರಿ, ಜೆಸ್ಕಾಂ, ಪಿ.ಆರ್.ಇ.ಡಿ, ಸ್ಥಳೀಯ ಸಂಸ್ಥೆಗಳು ಸೇರಿದಂತೆ ವಿವಿಧ ಇಲಾಖೆಗಳ ಮೂಲಕ ಕೈಗೊಳ್ಳುವ ಸಿವಿಲ್, ಮೂಲಸೌಕರ್ಯ ಕಾಮಗಾರಿಗಳ ಪೈಕಿ 1 ಕೋಟಿ ರೂ. ವರೆಗಿನ ಕಾಮಗಾರಿಗಳಿಗೆ ಎಸ್‌ಸಿ ಮತ್ತು ಎಸ್‌ಟಿ ಗುತ್ತಿಗೆದಾರರಿಗೆ ಮೀಸಲಾತಿ ಅನ್ವಯ ಗುತ್ತಿಗೆ ನೀಡಲು ಸರ್ಕಾರದ ಸ್ಪಷ್ಟ ನಿರ್ದೇಶನವಿದ್ದರೂ ವಿವಿಧ ಕಾಮಗಾರಿಗಳನ್ನು ಕ್ಲಬ್ ಮಾಡಿ ಪ್ಯಾಕೇಜ್ ಆಧಾರದ ಮೇಲೆ ಟೆಂಡರ್ ಕರೆಯುತ್ತಿರುವುದಿರಂದ ಈ ವರ್ಗದ ಗುತ್ತಿಗೆದಾರರಿಗೆ ಮೀಸಲಾತಿಯಿಂದ ವಂಚಿಸಲಾಗುತ್ತಿದೆ. ಕೂಡಲೆ ಇದನ್ನು ಸರಿಪಡಿಸಿ ಸಮಪರ್ಕವಾಗಿ ಅನುಷ್ಠಾನಗೊಳಿಸಬೇಕು ಎಂದು ವಿವಿಧ ಇಲಾಖೆಗಳ ಎಲ್ಲಾ ಇಂಜಿನಿರ‍್ಸ್ಗಳಿಗೆ ಸೂಚನೆ ನೀಡಿದರು.
ಅಧಿಕಾರಿಗಳು ಎಸ್‌ಸಿ, ಎಸ್‌ಟಿ ವಸತಿನಿಲಯಗಳಿಗೆ ನಿಯಮಿತವಾಗಿ ಭೇಟಿ ನೀಡಬೇಕು. ಅಲ್ಲಿನ ಮೂಲಭೂತ ಸೌಲಭ್ಯಗಳ ಬಗ್ಗೆ ಪರಿಶೀಲನೆ ನಡೆಸಬೇಕು. ಗುಣಮಟ್ಟದ ಆಹಾರ ಪೂರೈಕೆಯಾಗಬೇಕು. ಮಕ್ಕಳು ಕುಟುಂಬ ತೊರೆದು ವಿದ್ಯಾಭ್ಯಾಸಕ್ಕಾಗಿ ಹಾಸ್ಟೆಲ್‌ನಲ್ಲಿರುತ್ತಾರೆ. ಭೇಟಿ ನೀಡುವುದರಿಂದ, ಅಧಿಕಾರಿಗಳು ನಮ್ಮ ಜೊತೆ ಇದ್ದಾರೆ; ಸರ್ಕಾರವು ನಮ್ಮ ಜೊತೆಗಿದೆ ಎಂಬ ಭಾವನೆ ಮೂಡುತ್ತದೆ. ಅಧಿಕಾರಿಗಳು ಮಕ್ಕಳಿಗೆ ನೈತಿಕ ಬಲ ತುಂಬುವ ಕೆಲಸ ಮಾಡಬೇಕು ಎಂದು ನಿರ್ದೇಶನ ನೀಡಿದರು.
ಕೃಷಿ, ಪಶು ಸಂಗೋಪನಾ, ಇಂಧನ, ಮೀನುಗಾರಿಕೆ, ಸಹಕಾರ ಹಾಗೂ ನಗರಾಭಿವೃದ್ಧಿ ಇಲಾಖೆಗಳು ಸೇರಿದಂತೆ ವಿವಿಧ ಇಲಾಖೆಗಳ ಎಸ್‌ಸಿಎಸ್‌ಪಿ ಮತ್ತು ಟಿಎಸ್‌ಪಿ ಅನುದಾನದಡಿಯ ಕಾರ್ಯಕ್ರಮಗಳ ಕುರಿತು ಚರ್ಚಿಸಿ ಮಾಹಿತಿ ಪಡೆದುಕೊಂಡರು.
ಸಭೆಯಲ್ಲಿ ವಿಧಾನಸಭಾ ಸದಸ್ಯರು ಹಾಗೂ ಅನುಸೂಚಿತ ಜಾತಿ ಮತ್ತು ಅನುಸೂಚಿತ ಪಂಗಡಗಳ ಕಲ್ಯಾಣ ಸಮಿತಿಯ ಸದಸ್ಯರಾದ ಬಿ.ಜಿ.ಗೋವಿಂದಪ್ಪ, ಐಹೊಳೆ ದುರ್ಯೋಧನ, ಕೃಷ್ಣ ನಾಯಕ, ಕರೆಮ್ಮ, ಶಾಂತರಾಮ್ ಬುಡ್ನ ಸಿದ್ದಿ, ಜಗದೇವ್ ಗುತ್ತೇದಾರ್ ಮತ್ತು ಕರ್ನಾಟಕ ವಿಧಾನಸಭೆ ಸಚಿವಾಲಯದ ಅಧೀನ ಕಾರ್ಯದರ್ಶಿ ಪಿ.ಸೀನ, ಸಮಾಜ ಕಲ್ಯಾಣ ಇಲಾಖೆಯ ಆಯುಕ್ತ ರಾಕೇಶ್ ಕುಮಾರ್, ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಶೋಭಾರಾಣಿ.ವಿ.ಜೆ., ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಾಹುಲ್ ಶರಣಪ್ಪ ಸಂಕನೂರ ಸೇರಿದಂತೆ ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದ ವಿವಿಧ ಇಲಾಖೆಗಳ ಅಧಿಕಾರಿಗಳು ಹಾಗೂ ಇತರರು ಉಪಸ್ಥಿತರಿದ್ದರು.
----------
ಬಳ್ಳಾರಿ; ವಿಶ್ವ ರೇಬಿಸ್ ದಿನಾಚರಣೆ ಅಂಗವಾಗಿ ಜನಜಾಗೃತಿ ಜಾಥಾ ನಾಯಿ ಕಡಿತಕ್ಕೆ ತಪ್ಪದೇ ಲಸಿಕೆ ಪಡೆಯಿರಿ: ಡಾ.ಮರಿಯಂಬಿ.ವಿ.ಕೆ
ಬಳ್ಳಾರಿ,ಸೆ.27(ಕರ್ನಾಟಕ ವಾರ್ತೆ):
ನಾಯಿ ಕಡಿದ ಸಂದರ್ಭದಲ್ಲಿ ಗಾಯವನ್ನು ಸೋಪಿನಿಂದ 15 ನಿಮಿಷಗಳ ಕಾಲ ನೀರಿನಲ್ಲಿ ತೊಳೆದು, ಹತ್ತಿರದ ಆಸ್ಪತ್ರೆಗೆ ಭೇಟಿ ನೀಡಿ ವೈದ್ಯರ ಸಲಹೆ ಮೇರೆಗೆ ತಪ್ಪದೇ ಲಸಿಕೆ ಪಡೆಯಬೇಕು ಎಂದು ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ.ಮರಿಯಂಬಿ.ವಿ.ಕೆ ಅವರು ಹೇಳಿದರು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಸರ್ವೇಕ್ಷಣಾ ಘಟಕ ರಾಷ್ಟಿçÃಯ ರೇಬೀಸ್ ನಿಯಂತ್ರಣ ಕಾರ್ಯಕ್ರಮದಡಿ “ವಿಶ್ವ ರೇಬಿಸ್ ದಿನಾಚರಣೆ” ಅಂಗವಾಗಿ ‘ರೇಬಿಸ್ ಗಡಿಗಳನ್ನು ಮೀರಿ ಮುಂದುವರೆಯೋಣ’ ಎಂಬ ಘೋಷವಾಕ್ಯದೊಂದಿಗೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳ ಕಚೇರಿ ಮುಂಭಾಗದಿAದ ಶುಕ್ರವಾರ ಹಮ್ಮಿಕೊಂಡಿದ್ದ ಜನ ಜಾಗೃತಿ ಜಾಥಾಗೆ ಚಾಲನೆ ನೀಡಿ ಅವರು ಮಾತನಾಡಿದರು.
2030ರ ವೇಳೆಗೆ ನಾಯಿ ಕಡಿತದ ಮೂಲಕ ಹರಡುವ ರೇಬಿಸ್ ಖಾಯಿಲೆಯಿಂದ ಸಂಭವಿಸುವ ಸಾವಿನ ಸಂಖ್ಯೆಯನ್ನು ಶೂನ್ಯ ಪ್ರಮಾಣಕ್ಕಿಳಿಸುವ ಗುರಿಯನ್ನು ಸಾಧಿಸಲು ಕ್ರಿಯಾ ಯೋಜನೆಗೆ ವಿಶ್ವದಾದ್ಯಂತ ಚಾಲನೆ ನೀಡಲಾಗಿದೆ. ಕರ್ನಾಟಕ ಸೇರಿದಂತೆ ಭಾರತ ದೇಶವು ಇದೇ ಗುರಿಯನ್ನು ಸಾಧಿಸುವ ನಿಟ್ಟಿನಲ್ಲಿ ಕಾರ್ಯನ್ಮುಖವಾಗಿದೆ ಎಂದು ತಿಳಿಸಿದರು.
ರೇಬಿಸ್ ಖಾಯಿಲೆಗೆ ಯಾವುದೇ ಚಿಕಿತ್ಸೆ ಇರುವುದಿಲ್ಲ, ಇದು ಒಂದು ಮಾರಾಂಣಾತಿಕ ಖಾಯಿಲೆಯಾಗಿದ್ದು, ನಾಯಿ ಕಚ್ಚಿದ ನಂತರ ಗಾಯವನ್ನು ಹರಿಯುವ ಸ್ವಚ್ಚ ನೀರಿನಲ್ಲಿ 15 ನಿಮಿಷಗಳ ಕಾಲ ತೊಳೆಯುವುದರಿಂದ ಶೇ.50 ರಿಂದ 70 ರಷ್ಟು ರೇಬಿಸ್‌ಗೆ ತುತ್ತಾಗುವುದನ್ನು ತಡೆಯಬಹುದು ಎಂದರು.
ಹತ್ತಿರದ ಆಸ್ಪತ್ರೆಗೆ ಭೇಟಿ ನೀಡಿ ವೈದ್ಯರ ಸಲಹೆ ಪಡೆದು ಪೋಸ್ಟ್ ಎಕ್ಸ್ಪೋಸರ್ ಪ್ರೊಫಿಲ್ಯಾಕ್ಸಿಸ್ ಅನ್ನು ಸಂಪೂರ್ಣವಾಗಿ ಎಲ್ಲಾ 5 ಡೋಸ್‌ಗಳನ್ನು ಕ್ರಮವಾಗಿ 1, 3, 7, 14 ಮತ್ತು 28 ನಿಗಧಿಪಡಿಸಿದ ದಿನಗಳಂದು ಪಡೆಯಬೇಕು ಮತ್ತು ರೇಬೀಸ್ ಇಮ್ಯೂನೊಗ್ಲೊಬ್ಯುಲಿನ್ ಪಡೆಯುವುದರ ಮೂಲಕ ರೇಬಿಸ್‌ನ್ನು ಸಂಪೂರ್ಣವಾಗಿ ತಡೆಗಟ್ಟಬಹುದು ಎಂದರು.
ಪ್ರಸ್ತುತ ಜಿಲ್ಲೆಯಲ್ಲಿ 10 ಆ್ಯಂಟಿ ರೇಬಿಸ್ ಕ್ಲಿನಿಕ್‌ಗಳನ್ನು ಸ್ಥಾಪಿಸಲಾಗಿದೆ. ಜಿಲ್ಲೆಯ ಎಲ್ಲಾ ಆರೋಗ್ಯ ಕೇಂದ್ರಗಳಲ್ಲಿ ಲಸಿಕೆ ಲಭ್ಯವಾಗುವ ನಿಟ್ಟಿನಲ್ಲಿ ಕ್ರಮ ವಹಿಸಲಾಗಿದೆ ಎಂದು ತಿಳಿಸಿದರು.
ಜಿಲ್ಲಾ ಸರ್ವೇಕ್ಷಣಾ ಘಟಕದ ಎನ್‌ಆರ್‌ಸಿಪಿ ಕಾರ್ಯಕ್ರಮದಡಿ ಎಲ್ಲಾ ಪ್ರಾಣಿ, ನಾಯಿ ಕಡಿತ ಪ್ರಕರಣಗಳನ್ನು ಪರಿಣಾಮಕಾರಿಯಾಗಿ ಪರಿವೀಕ್ಷಣೆಯಲ್ಲಿಟ್ಟಿದ್ದು ರೋಗ ನಿಯಂತ್ರಣ ಚಟುವಟಿಕೆಗಳನ್ನು ಬಲಪಡಿಸಲು ತರಬೇತಿ ಹಾಗೂ ಅರಿವು ಮೂಡಿಸುವ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುತ್ತಾ ಬಂದಿದೆ. ಇದಕ್ಕೆ ಅಂತರ್ ಇಲಾಖಾ ಸಹಕಾರವೂ ಅತ್ಯವಶ್ಯಕವಾಗಿದೆ ಎಂದು ಹೇಳಿದರು.
ಪಶುಪಾಲನ ಮತ್ತು ಪಶುವೈದ್ಯಕೀಯ ಇಲಾಖೆಯ ಉಪನಿರ್ದೇಶಕ ಡಾ.ವಿನೋದ್ ಕುಮಾರ್ ಅವರು ಮಾತನಾಡಿ, ರೇಬಿಸ್ ಖಾಯಿಲೆಗೆ ಒಮ್ಮೆ ತುತ್ತಾದ ಬಳಿಕ ಯಾವುದೇ ಚಿಕಿತ್ಸೆ ಇರುವುದಿಲ್ಲವಾದರೂ ರೇಬಿಸ್ ಖಾಯಿಲೆಯು ಸೂಕ್ತ ಪೂರ್ವ ರೋಗ ನಿರೋಧಕ ಲಸಿಕೆ ಪಡೆಯುವುದರಿಂದ ಸಂಪೂರ್ಣವಾಗಿ ತಡೆಗಟ್ಟಬಹುದಾಗಿದೆ ಎಂದು ತಿಳಿಸಿದರು.
ಪಶುವೈದ್ಯಕೀಯ ಇಲಾಖೆಯ ವತಿಯಿಂದ ಸೆಪ್ಟೆಂಬರ್ ತಿಂಗಳಲ್ಲಿ ನಗರ, ಗ್ರಾಮಾಂತರ ಪ್ರದೇಶಗಳಲ್ಲಿ ಕ್ಯಾಂಪೇನ್ ಮೋಡ್‌ನಲ್ಲಿ ಬೀದಿ ನಾಯಿಗಳು ಮತ್ತು ಸಾಕು ನಾಯಿಗಳಿಗೆ ಲಸಿಕಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗುವುದು ಎಂದರು.
ವಿಶೇಷವಾಗಿ ನಗರ ಪ್ರದೇಶಗಳಲ್ಲಿ ನಾಯಿಗಳ ಸಾಕಾಣಿಕೆ ಮಾಡಿಕೊಂಡಿರುವ ಮಾಲೀಕರು ತಪ್ಪದೇ ನಾಯಿಗಳಿಗೆ ಲಸಿಕೆ ಹಾಕಿಸಬೇಕು. ಈಗಾಗಲೇ ರೇಬಿಸ್ ಖಾಯಿಲೆಯ ಬಗ್ಗೆ ಸಾರ್ವಜನಿಕರಲ್ಲಿ ಅರಿವು ಮೂಡಿಸಲಾಗಿದ್ದು, ಮುಂದಿನ ದಿನಗಳಲ್ಲಿ ಸೂಕ್ತ ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಳ್ಳುವ ಮೂಲಕ 2030 ವೇಳೆಗೆ ರೇಬಿಸ್ ಖಾಯಿಲೆಯಿಂದ ಮುಕ್ತರಾಗಲೂ ಎಲ್ಲರೂ ಕೈ ಜೋಡಿಸೋಣ ಎಂದರು.
ಕಾರ್ಯಕ್ರಮದಲ್ಲಿ ಪಶು ಸಂಗೋಪನಾ ಇಲಾಖೆಯ ಸಹಾಯಕ ನಿರ್ದೇಶಕ ಡಾ.ರಾಜಶೇಖರ್, ಕುಟುಂಬ ಕಲ್ಯಾಣಾಧಿಕಾರಿ ಡಾ.ಪೂರ್ಣಿಮಾ ಎಸ್. ಕಟ್ಟಿಮನಿ, ಜಿಲ್ಲಾ ಕ್ಷಯರೋಗ ನಿಯಂತ್ರಣಾಧಿಕಾರಿ ಡಾ.ಇಂದ್ರಾಣಿ.ವಿ, ಜಿಲ್ಲಾ ಕುಷ್ಠರೋಗ ನಿಯಂತ್ರಣಾಧಿಕಾರಿ ಡಾ.ವಿರೇಂದ್ರ ಕುಮಾರ್, ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಈಶ್ವರ ಹೆಚ್ ದಾಸಪ್ಪನವರ, ಜಿಲ್ಲಾ ಎಪಿಡಮಾಲಾಜಿಸ್ಟ್ ಡಾ. ನಿವೇದಿತಾ, ಜಿಲ್ಲಾ ಮೈಕ್ರೋಬಯಾಲಾಜಿಸ್ಟ್ ಶರತ್ ಬಾಬು, ಎನ್‌ಸಿಡಿ ಜಿಲ್ಲಾ ಕಾರ್ಯಕ್ರಮ ಸಂಯೋಜಕ ಡಾ.ಜಬೀನ್‌ತಾಜ್, ಜಿಲ್ಲಾ ತಂಬಾಕು ಸಲಹೆಗಾರರಾದ ಪ್ರಶಾಂತ್, ಶ್ರೀದೇವಿ ಹಾಗೂ ಜಿಲ್ಲಾ ಸರ್ವೇಕ್ಷಣಾ ಘಟಕದ ಸಿಬ್ಬಂದಿಗಳು ಉಪಸ್ಥಿತರಿದ್ದರು.
---------
ಗುರುವಾರ, ಸೆಪ್ಟೆಂಬರ್ 26, 2024
ರೈತರು ಮೆಣಸಿನಕಾಯಿ ಬೆಳೆಯಲ್ಲಿ ಥ್ರಿಪ್ಸ್ ನುಸಿ (ಥ್ರಿಪ್ಸ್ ಪಾರ್ವಿಸ್ಸಿನಸ್) ಕೀಟ ಕಂಡುಬAದಲ್ಲಿ ಸೂಕ್ತ ಕ್ರಮ ಅನುಸರಿಸಿ
ಬಳ್ಳಾರಿ,ಸೆ.26(ಕರ್ನಾಟಕ ವಾರ್ತೆ):
ಪ್ರಸಕ್ತ ವರ್ಷದಲ್ಲಿ ಬಳ್ಳಾರಿ, ಕುರುಗೋಡು ಮತ್ತು ಕಂಪ್ಲಿ ತಾಲ್ಲೂಕುಗಳಲ್ಲಿ 26 ಸಾವಿರ ಹೆಕ್ಟೇರ್‌ಗಿಂತ ಹೆಚ್ಚು ಪ್ರದೇಶದಲ್ಲಿ ಮೆಣಸಿನಕಾಯಿ ಬೆಳೆಯಲಾಗಿದ್ದು, ಕಳೆದ ವರ್ಷ ಮೆಣಸಿನಕಾಯಿ ಬೆಳೆಯನ್ನು ಬಾಧಿಸಿದ್ದ ಹೊಸ ಥ್ರಿಪ್ಸ್ ನುಸಿ (ಥ್ರಿಪ್ಸ್ ಪಾರ್ವಿಸ್ಪಿನಸ್) ಕೀಟವು ಈ ಬಾರಿಯೂ ಕಾಣಿಸುವ ಸಂಭವವಿದ್ದು, ಕೀಟದ ನಿರ್ವಹಣೆಗೆ ರೈತರು ಸೂಕ್ತ ಕ್ರಮ ಅನುಸರಿಸಬೇಕು ಎಂದು ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು ತಿಳಿಸಿದ್ದಾರೆ.
ಪ್ರೌಢ ಕೀಟಗಳು ಗುಂಪು ಗುಂಪಾಗಿ ಎಲೆಗಳ ಕೆಳಭಾಗದಲ್ಲಿ, ಹೂಗಳ ಒಳಗೆ ಮತ್ತು ಹೊರಗೆ ಕಂಡುಬರುತ್ತವೆ. ಮರಿ ಹಂತದ ನುಸಿಗಳು ಎಲೆಗಳ ಕೆಳಭಾಗದಲ್ಲಿ ಕೇಂದ್ರೀಕೃತಗೊAಡಿರುತ್ತವೆ. ಕೀಟಗಳು ಸಸ್ಯದ ಬಹುಭಾಗಗಳಿಂದ ರಸವನ್ನು ಹೀರುವುದರಿಂದ ಸಸ್ಯದ ಬೆಳವಣಿಗೆ ಕುಂಠಿತಗೊಳ್ಳುತ್ತದೆ. ಎಲೆಗಳ ಅಂಚುಗಳು ಮೇಲ್ಮುಖವಾಗಿ ಮುದುಡುವುದು, ಹೂಗಳು ಉದುರುವುದು ಮತ್ತು ಬೆಳವಣಿಗೆ ಹಂತದಲ್ಲಿರುವ ಚಿಗುರುಗಳು ಗುಂಪಾಗಿ ಹೂಬಿಡದೆ ಒಣಗುವುದು ಸಾಮಾನ್ಯವಾಗಿ ಕಂಡುಬರುವ ಹಾನಿಯ ಲಕ್ಷಣಗಳಾಗಿವೆ. ಕಾಲ ಕ್ರಮೇಣ, ಕಾಯಿಗಳ ಸಂಖ್ಯೆ ಕಡಿಮೆಯಾಗಿ ಇಳುವರಿಯು ಗಣನೀಯ ಪ್ರಮಾಣದಲ್ಲಿ ಕುಂಠಿತಗೊಳ್ಳುತ್ತದೆ.
*ನಿರ್ವಹಣಾ ಕ್ರಮಗಳು:*
ಹೊಲದ ಸುತ್ತಲೂ 2-3 ಸಾಲು ಜೋಳ, ಮೆಕ್ಕೆಜೋಳ, ಸಜ್ಜೆಯನ್ನು ಬೇಲಿ ಬೆಳೆಯಾಗಿ ಅಡವಾಗಿ ಬಿತ್ತುವುದರಿಂದ ಕೀಟಗಳ ಪ್ರಸಾರವನ್ನು ನಿಯಂತ್ರಿಸಬಹುದು. ಹೊಲ ಮತ್ತು ಬದುಗಳ ಸ್ವಚ್ಛತೆಯಿಂದ ಥ್ರಿಪ್ಸ್ ನುಸಿಗಳಿಗೆ ಆಸರೆ ನೀಡುವ ಕಳೆಗಳ ನಿರ್ಮೂಲನೆ ಮಾಡಬಹುದು. ಸೂಕ್ತ ಅಂತರ (90*30 ಸೆಂ.ಮೀ ಮತ್ತು 60*45 ಸೆಂ.ಮೀ) ಕಾಪಾಡಬೇಕು.
ಚೆನ್ನಾಗಿ ಕೊಳಿತ ಕೊಟ್ಟಿಗೆ ಗೊಬ್ಬರದೊಡನೆ ಮೆಟಾರೈಜಿಯಮ್ ಅನಿಸೋಪ್ಲಿಯೆ ಎಂಬ ಶಿಲೀಂದ್ರ ಕೀಟನಾಶಕದಿಂದ (2-3 ಕೆ.ಜಿ/ಟನ್) ಮೌಲ್ಯವರ್ಧನೆಗೊಳಿಸಿ ಹೊಲಗಳಿಗೆ ಹಾಕಬೇಕು. ಬೇವಿನ ಹಿಂಡಿ (200 ಕೆ.ಜಿ/ಎಕರೆಗೆ) ಮತ್ತು ಎರೆಹುಳು ಗೊಬ್ಬರವನ್ನು (500 ಕೆ.ಜಿ/ಎಕರೆಗೆ) ಮಣ್ಣಿನಲ್ಲಿ ಬೆರೆಸುವುದರಿಂದ ನಿರೋಧಕ ಶಕ್ತಿ ವೃದ್ಧಿಗೊಳ್ಳುತ್ತದೆ.
ಶಿಫಾರಸ್ಸು ಪ್ರಮಾಣದ ರಸಗೊಬ್ಬರದದೊಂದಿಗೆ ಪೊಟ್ಯಾಶ್‌ನ ಬಳಕೆ ವೃದ್ಧಿಸುವುದರಿಂದ ಕೀಟ ನಿರೋಧಕ ಶಕ್ತಿ ಹೆಚ್ಚುತ್ತದೆ. ನೀಲಿ ಅಂಟಿನ ಬಲೆಗಳನ್ನು @25-30/ಎಕರೆಗೆ ಬೆಳೆಯ ಎತ್ತರಕ್ಕೆ ಅಳವಡಿಸಬೇಕು. ಆಗಿಂದಾಗೆ ಕುಂಟೆಯೊಡೆಯುವುದರಿAದ ಕೋಶಾವಸ್ಥೆಯಲ್ಲಿರುವ ಥ್ರಿಪ್ಸ್ ನುಸಿಯನ್ನು ನಾಶಪಡಿಸಬಹುದು.
ಸಾಧ್ಯವಾದಲ್ಲಿ ಕಾಲುವೆ ಮೂಲಕ ನೀರುಣಿಸುವ ಬದಲು ತುಂತುರು ನೀರಾವರಿ ಪದ್ಧತಿಯನ್ನು ಅಳವಡಿಸಬೇಕು. ಸಿಲ್ವರ್ ಬಣ್ಣದ ಪ್ಲಾಸ್ಟಿಕ್ ಶೀಟ್ (25-30 ಮೈಕ್ರಾನ್)ನಿಂದ ಮಲ್ಚಿಂಗ್ ಮಾಡುವುದರಿಂದ ಮಣ್ಣಿನಲ್ಲಿ ಕೋಶಾವಸ್ಥೆಗೆ ಹೋಗುವುದನ್ನು ತಡೆಯಬಹುದು.
ತೀವ್ರ ಬಾಧೆಗೊಳಗಾದ ಗಿಡಗಳನ್ನು ಕಿತ್ತುಗುಂಡಿಯಲ್ಲಿ ಮುಚ್ಚಬೇಕು ಅಥವಾ ಸುಡಬೇಕು. ಪರಭಕ್ಷಕ/ಮಿತ್ರ ಕೀಟಗಳ ವೃದ್ಧಿಗಾಗಿ ಹೆಚ್ಚಿನ ಪ್ರಮಾಣದಲ್ಲಿ ರಾಸಾಯನಿಕ ಕೀಟನಾಶಕಗಳ ಬದಲು ಪರಿಸರ ಸ್ನೇಹಿ ಕೀಟನಾಶಕಗಳಾದ ಶೇ.5 ರ ಬೇವಿನ ಬೀಜದ ಕಷಾಯ, ಬೇವಿನ ಎಣ್ಣೆ (1500 ಪಿ.ಪಿ.ಯಂ) @ 2 ಮಿ.ಲೀ/ಲೀ, ಹೊಂಗೆ ಎಣ್ಣೆ @3 ಮಿ.ಲೀ/ಲೀ ನೀರಿಗೆ ಬೆರೆಸಿ ಸಿಂಪಡಿಸಬೇಕು.
ಶಿಲೀAಧ್ರ ಕೀಟನಾಶಕಗಳಾದ ಬಿವೇರಿಯಾ ಬಸ್ಸಿಯಾನ ಅಥವಾ ಲೆಕ್ಯಾನಿಸಿಲಿಯಂ ಲೆಕ್ಯಾನಿ ಅಥವಾ ಮೆಟಾರೈಜಿಯಮ್ ಅನಿಸೋಪ್ಲಿಯೇಯನ್ನು @4 ಗ್ರಾಂ/ಲೀ ನೀರಿಗೆ ಬೆರೆಸಿ ಸಿಂಪಡಿಸಬೇಕು.
ಅವಶ್ಯಕತೆಗನುಸಾರವಾಗಿ ಶಿಫಾರಸ್ಸು ಮಾಡಿರುವ ರಾಸಾಯನಿಕ ಕೀಟನಾಶಕಗಳಾದ 0.3 ಮಿ.ಲೀ., ಇಮಿಡಾಕ್ಲೋಪ್ರಿಡ್ 17.8 ಎಸ್.ಎಲ್ ಅಥವಾ 0.2 ಗ್ರಾಂ ಥಯೋಮೆಥಾಕ್ಸಾಮ್ 25 ಡಬ್ಲ್ಯೂ.ಜಿ ಅಥವಾ 1.0 ಮಿ.ಲೀ., ಫಿಪ್ರೋನಿಲ್ 5 ಎಸ್.ಸಿ ಅಥವಾ 1.0 ಗ್ರಾಂ ಡಯಾಫೆನ್ ಥಯೂರಾನ್ 50 ಡಬ್ಲ್ಯೂ.ಪಿ ಪ್ರತಿ ಲೀಟರ್ ನೀರಿಗೆ ಬೆರೆಸಿ ಸಿಂಪಡಿಸಬೇಕು ಎಂದು ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
-----------
ಜಿಲ್ಲಾ ಆರೋಗ್ಯ ಸಂಘದ ಸಭೆಯಲ್ಲಿ ಜಿಪಂ ಸಿಇಒ ರಾಹುಲ್ ಶರಣಪ್ಪ ಸಂಕನೂರು | ಗರ್ಭಿಣಿಯರ ನಿರಂತರ ಕಾಳಜಿ ಮೂಲಕ ತಾಯಿ ಮರಣ ತಡೆಗಟ್ಟಲು ಕ್ರಮವಹಿಸಿ
ಬಳ್ಳಾರಿ,ಸೆ.26(ಕರ್ನಾಟಕ ವಾರ್ತೆ):
ಗರ್ಭಿಣಿ ಮಹಿಳೆಯರು ಪ್ರತಿ ತಿಂಗಳು ತಪಾಸಣೆಗೆ ಬಂದಾಗ ಸಮಯ ಮೀಸಲಿರಿಸಿ, ಅವರು ಕೈಗೊಳ್ಳಬೇಕಾದ ಕಾಳಜಿ ಕುರಿತು ತಿಳಿಸುವ ಮೂಲಕ ತಾಯಿ ಮರಣ ತಡೆಗಟ್ಟಲು ವೈದ್ಯಾಧಿಕಾರಿಗಳು ಕ್ರಮವಹಿಸಬೇಕು ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಾಹುಲ್ ಶರಣಪ್ಪ ಸಂಕನೂರ ಅವರು ಹೇಳಿದರು.
ನಗರದ ಜಿಲ್ಲಾ ಪಂಚಾಯತ್ ನಜೀರ್ ಸಭಾಂಗಣದಲ್ಲಿ ಗುರುವಾರ ಏರ್ಪಡಿಸಿದ್ದ ಜಿಲ್ಲಾ ಆರೋಗ್ಯ ಸಂಘದ ಸಭೆಯಲ್ಲಿ ಅವರು ಮಾತನಾಡಿದರು.
ಯಾವುದೇ ಕುಟುಂಬದಲ್ಲಿ ಗರ್ಭಿಣಿ ಮಹಿಳೆಯನ್ನು ಹೆರಿಗೆ ಕಾರಣದಿಂದ ಕಳೆದುಕೊಳ್ಳಲು ಬಯಸುವುದಿಲ್ಲ. ಹಾಗಾಗಿ ಗರ್ಭಿಣಿ ಮಹಿಳೆಯರ ಕೈಗೊಳ್ಳಬೇಕಾದ ಕಾಳಜಿ ಮತ್ತು ಜೊತೆಗೆ ಕಂಡುಬರಬಹುದಾದ ಆರೋಗ್ಯದ ಸಮಸ್ಯೆಗಳ ಬಗ್ಗೆ ಮನವರಿಕೆ ಮಾಡಬೇಕು ಎಂದರು.
ಜಿಲ್ಲೆಯಲ್ಲಿ ಗರ್ಭಿಣಿ ಎಂದು ತಿಳಿದ ದಿನದಿಂದ ಹೆರಿಗೆಯಾಗುವವರೆಗೆ ಮತ್ತು ಹೆರಿಗೆ ನಂತರದ 45 ದಿನಗಳ ಕಾಲ ಬಾಣಂತಿಯ ಅವಧಿಯನ್ನು ಅತ್ಯಂತ ಗಂಭೀರವಾಗಿ ಪರಿಗಣಿಸಬೇಕು. ರಕ್ತದೊತ್ತಡ, ಸಕ್ಕರೆ ಕಾಯಿಲೆ, ರಕ್ತಹೀನತೆ ಮುಂತಾದವುಗಳಿAದ ಗಂಭೀರತೆ ಉಂಟಾಗದAತೆ ಜಾಗೃತಿ ವಹಿಸಬೇಕು ಎಂದು ಸೂಚಿಸಿದರು.
ಪ್ರತಿ ಗರ್ಭಿಣಿಗೆ ಒದಗಿಸಬೇಕಾದ ಟಿಡಿ ಚುಚ್ಚುವiದ್ದು, ಕಬ್ಬಿಣಾಂಶ ಮಾತ್ರೆಗಳು ಮತ್ತು ಕೈಗೊಳ್ಳಬೇಕಾದ ಎಲ್ಲಾ ಪರೀಕ್ಷೆಗಳನ್ನು ಸಕಾಲದಲ್ಲಿ ಕೈಗೊಂಡು ಅಗತ್ಯ ಇರುವವರಿಗೆ ಹೆಚ್ಚುವರಿ ಸ್ಕಾö್ಯನಿಂಗ್ ಅನ್ನು ತಡ ಮಾಡದೇ ಕೈಗೊಳ್ಳುವುದರ ಜೊತೆಗೆ ಮನೆ ಹೆರಿಗೆಯಾಗದಂತೆ ನಿಗಾವಹಿಸಬೇಕು ಎಂದು ಅವರು ತಿಳಿಸಿದರು.
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಯಲ್ಲಾ ರಮೇಶ್ ಬಾಬು ಅವರು ಮಾತನಾಡಿ, ಜಿಲ್ಲೆಯಾದ್ಯಂತ ತಾಯಿ ಮತ್ತು ಶಿಶು ಮರಣ ತಡೆಗೆ ಮೂರು ಹಂತದಲ್ಲಿ ಕ್ರಮಗಳನ್ನು ಕೈಗೊಳ್ಳಲಾಗುತ್ತಿದ್ದು, ಹೆರಿಗೆ ಕೊಠಡಿ ವಾರ್ಡ್ಗಳ ಪರಿಶೀಲನೆ ಹಾಗೂ ಸಾಧ್ಯವಿರಬಹುದಾದ ಸೋಂಕುಗಳನ್ನು ಗುರ್ತಿಸಲು ಜಿಲ್ಲಾ ಆಸ್ಪತ್ರೆ ಹಾಗೂ ವಿಮ್ಸ್ ಪ್ರಸೂತಿ ತಜ್ಞರ ಮೂಲಕ ಸಮಾಲೋಚನಾ ಸಭೆ ನಡೆಸಲಾಗುತ್ತಿದೆ ಮತ್ತು ಎಲ್ಲಾ ತಾಲ್ಲೂಕಗಳಲ್ಲಿ ಕ್ಷೇತ್ರ ಮಟ್ಟದ ಸಿಬ್ಬಂದಿಯವರೊAದಿಗೆ ಸಭೆಗಳನ್ನು ಹಮ್ಮಿಕೊಳ್ಳಲಾಗುತ್ತಿದೆ ಎಂದು ಸಭೆಗೆ ತಿಳಿಸಿದರು.
ಮಕ್ಕಳ ಬಾಲ್ಯದ ಬೆಳವಣಿಗೆಯ ನ್ಯೂನತೆಗಳನ್ನು ಕಂಡುಹಿಡಿಯಲು ರಾಷ್ಟಿçÃಯ ಬಾಲ ಸ್ವಾಸ್ಥö್ಯ ಕಾರ್ಯಕ್ರಮದಡಿ ಶಾಲೆ ಮತ್ತು ಅಂಗನವಾಡಿಗಳಿಗೆ ಭೇಟಿ ನೀಡಿ ಗುರ್ತಿಸಿ ಜಿಲ್ಲಾ ಡಿಇಐಸಿ ಕೇಂದ್ರಕ್ಕೆ ಕಳುಹಿಸಿಕೊಡಲು ಆದ್ಯತೆ ನೀಡಲಾಗುತ್ತಿದೆ ಎಂದು ಹೇಳಿದರು.
ಸಾರ್ವತ್ರಿಕ ಲಸಿಕಾ ಕಾರ್ಯಕ್ರಮದಡಿ ಎಲ್ಲಾ ಲಸಿಕೆಗಳನ್ನು ಮಕ್ಕಳಿಗೆ ತಪ್ಪದೇ ಹಾಕಿಸಲು ಹಾಗೂ ಎಲ್ಲಾ ಗರ್ಭಿಣಿಯರ ನಾಲ್ಕು ತಪಾಸಣೆಗಳು ಆಗಿರುವ ಬಗ್ಗೆ ನಿರಂತರ ನಿಗಾವಹಿಸಲು ಮತ್ತು ಹೆಚ್ಚಿನ ಚಿಕಿತ್ಸೆಗೆ ಕಳುಹಿಸುವಾಗ 108 ಆರೋಗ್ಯ ಕವಚ ಅಥವಾ ಎಬಿಎಸ್ ಅಂಬುಲೇನ್ಸ್ ಸಕಾಲದಲ್ಲಿ ಲಭ್ಯವಾಗುವಂತೆ ನೋಡಿಕೊಳ್ಳಲಾಗುತ್ತಿದೆ ಎಂದು ತಿಳಿಸಿದರು.
ಕ್ಷಯಮುಕ್ತ ಗಾಮಪಂಚಾಯತ್ ಆಯ್ಕೆ ಮಾಡಲು ಹೆಚ್ಚಿನ ಪರೀಕ್ಷೆಗಳನ್ನು ಕೈಗೊಂಡು ಚಿಕಿತ್ಸೆ ನೀಡಲಾಗುತ್ತಿದೆ. ಅಂಧತ್ವ ನಿಯಂತ್ರಣ ಕಾರ್ಯಕ್ರಮದಡಿಯಲ್ಲಿ ಶಸ್ತçಚಿಕಿತ್ಸೆ ಹಾಗೂ ಕನ್ನಡಕಗಳ ವಿತರಣೆ, ಕುಷ್ಠರೋಗ, ಡೆಂಗ್ಯೂ ನಿಯಂತ್ರಣಕ್ಕೆ ಗ್ರಾಮೀಣ ಹಾಗೂ ನಗರದ ಕೊಳಚೆ ಪ್ರದೇಶಗಳಲ್ಲಿ ಲಾರ್ವಾ ಸಮೀಕ್ಷೆ ಪರಿಣಾಮಕಾರಿಯಾಗಿ ಕೈಗೊಳ್ಳಲಾಗುತ್ತಿದೆ.
ನಾಯಿಕಡಿತ ಪ್ರಕರಣಗಳ ಸಂದರ್ಭಗಳಲ್ಲಿ ಸಕಾಲದಲ್ಲಿ ಚಿಕಿತ್ಸೆ ನೀಡಲು ಔಷಧಿ ದಾಸ್ತಾನು ಕೊರತೆಯಾಗದಂತೆ ಮತ್ತು ಕುಟುಂಬ ಕಲ್ಯಾಣ ತಾತ್ಕಾಲಿಕ ವಿಧಾನಗಳು ಜೊತೆಗೆ ಶಸ್ತçಚಿಕಿತ್ಸಾ ಶಿಬಿರಗಳಲ್ಲಿ ಹೆಚ್ಚಿನ ಫಲಾನುಭವಿಗಳು ಬರುವಂತೆ ಕ್ರಮವಹಿಸಲಾಗುತ್ತಿದೆ ಎಂದು ಸಭೆಗೆ ತಿಳಿಸಿದರು.
ಭಿತ್ತಪತ್ರ ಬಿಡುಗಡೆ: ಇದೇ ಸಂದರ್ಭದಲ್ಲಿ ತಂಬಾಕು ಮುಕ್ತ ಯುವ ಅಭಿಯಾನ 2.0 ಹಾಗೂ ರೇಬೀಸ್ ಕುರಿತ ಭಿತ್ತಪತ್ರ ಬಿಡುಗಡೆ ಮಾಡಿದರು.
ಈ ಸಂದರ್ಭದಲ್ಲಿ ಜಿಲ್ಲಾ ಶಸ್ತ್ರಚಿಕಿತ್ಸಕ ಡಾ.ಎನ್.ಬಸರೆಡ್ಡಿ, ವಿಮ್ಸ್ ಅಧಿಕ್ಷಕ ಡಾ.ಕೊಟ್ರೇಶ, ಕಾರ್ಯಕ್ರಮ ಅನುಷ್ಠಾನ ಅಧಿಕಾರಿಗಳಾದ ಡಾ.ಅಬ್ದುಲ್ಲಾ, ಡಾ.ಪೂರ್ಣಿಮಾ ಕಟ್ಟಿಮನಿ, ಡಾ.ಮರಿಯಂಬಿ. ಡಾ.ಇಂದ್ರಾಣಿ, ಡಾ.ವೀರೇಂದ್ರ ಕುಮಾರ್, ಡಾ.ಹನುಮಂತಪ್ಪ, ತಾಲ್ಲೂಕು ಆರೋಗ್ಯ ಅಧಿಕಾರಿಗಳಾದ ಡಾ.ಭರತ್, ಡಾ.ಅರುಣ್, ಡಾ.ಮಂಜುನಾಥ ಜವಳಿ, ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಈಶ್ವರ ದಾಸಪ್ಪನವರ, ಡಾ.ಜಬೀನ್ ತಾಜ್, ವೆಂಕೋಬ್ ನಾಯ್ಕ್, ರುದ್ರಮ್ಮ, ಪ್ರಶಾಂತ್, ಪ್ರಿಯಾ ಶ್ರೀನಿವಾಸ್, ಮಹಾದೇವಿ ಆರ್.ಬಿ.ಎಸ್.ಕೆ ವೈದ್ಯರು, ಸಿಬ್ಬಂದಿಯವರು ಉಪಸ್ಥಿತರಿದ್ದರು.
------------
ವಿಶ್ವ ರೇಬಿಸ್ ದಿನಾಚರಣೆ; ಸೆ.27 ರಂದು ಜನಜಾಗೃತಿ ಜಾಥಾ ಕಾರ್ಯಕ್ರಮ
ಬಳ್ಳಾರಿ,ಸೆ.26(ಕಿರ್ನಾಟಕ ವಾತರ್ರ):
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಸರ್ವೇಕ್ಷಣಾ ಘಟಕ ಇವರ ಸಂಯುಕ್ತಾಶ್ರಯದಲ್ಲಿ ವಿಶ್ವ ರೇಬಿಸ್ ದಿನಾಚರಣೆ ಅಂಗವಾಗಿ “ರೇಬಿಸ್ ಗಡಿಗಳನ್ನು ಮೀರಿ ಮುಂದುವರೆಯೋಣ” ಎಂಬ ಘೋಷವಾಕ್ಯದೊಂದಿಗೆ ಸೆ.27 ರಂದು ಬೆಳಿಗ್ಗೆ 08.30 ಗಂಟೆಗೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ ಕಚೇರಿ ಮುಂಭಾಗದಿAದ ಜನಜಾಗೃತಿ ಜಾಥಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಯಲ್ಲಾ ರಮೇಶ್ ಬಾಬು ಅವರು ಚಾಲನೆ ನೀಡುವರು.
ಜಿಲ್ಲಾ ಶಸ್ತçಚಿಕಿತ್ಸಕ ಬಸರೆಡ್ಡಿ.ಎನ್ ಅವರು ಅಧ್ಯಕ್ಷತೆ ವಹಿಸುವರು.
ಜಿಲ್ಲಾ ಸರ್ವೇಕ್ಷಣಾ ಘಟಕದ ಜಿಲ್ಲಾ ಸರ್ವೇಕ್ಷಣಾಧಿಕಾರಿ ಎನ್.ಆರ್.ಸಿ.ಪಿಯ ಕಾರ್ಯಕ್ರಮಾಧಿಕಾರಿ ಡಾ.ಮರಿಯಂಬಿ ವಿ.ಕೆ ಕಾರ್ಯಕ್ರಮದ ಕುರಿತು ಪ್ರಾಸ್ತಾವಿಕ ನುಡಿ ಹೇಳುವರು.
ಪಶುಪಾಲನ ಮತ್ತು ಪಶುವೈದ್ಯಕೀಯ ಇಲಾಖೆಯ ಉಪನಿರ್ದೇಶಕ ವಿನೋದ್ ಕುಮಾರ್, ಜಿಲ್ಲಾ ತರಬೇತಿ ಕೇಂದ್ರದ ಪ್ರಾಂಶುಪಾಲರಾದ ಜಿ.ರಮೇಶ್ ಬಾಬು, ಜಿಲ್ಲಾ ಕುಟುಂಬ ಕಲ್ಯಾಣಾಧಿಕಾರಿ ಡಾ.ಪೂರ್ಣಿಮ ಕಟ್ಟಿಮನಿ, ಜಿಲ್ಲಾ ರೋಗವಾಹಕ ಆಶ್ರೀತ ರೋಗಗಳ ನಿಯಂತ್ರಣಾಧಿಕಾರಿ ಡಾ.ಅಬ್ದುಲ್ಲಾ.ಆರ್., ಕ್ಷಯರೋಗ ನಿಯಂತ್ರಣಾಧಿಕಾರಿ ಡಾ.ಇಂದ್ರಾಣಿ, ಜಿಲ್ಲಾ ಕುಷ್ಠರೋಗ ನಿಯಂತ್ರಣಾಧಿಕಾರಿ ಡಾ.ವಿರೇಂದ್ರ ಕುಮಾರ್, ಜಿಲ್ಲಾ ಆರ್.ಸಿ.ಹೆಚ್ ಅಧಿಕಾರಿ ಡಾ.ಹನುಮಂತಪ್ಪ, ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಈಶ್ವರ್ ದಾಸಪ್ಪನವರು ಸೇರಿದಂತೆ ಇತರರು ಭಾಗವಹಿಸುವರು ಎಂದು ಪ್ರಕಟಣೆ ತಿಳಿಸಿದೆ.
---------
ಕರಾಮುವಿ: ಪ್ರವೇಶಾತಿಗೆ ಅರ್ಜಿ ಆಹ್ವಾನ
ಬಳ್ಳಾರಿ,ಸೆ.26(ಕರ್ನಾಟಕ ವಾರ್ತೆ):
ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯವು 2024-25ರ ಜುಲೈ ಆವೃತ್ತಿಗೆ ಯುಜಿಸಿ ಅನುಮೋದಿತ ಶಿಕ್ಷಣಕ್ರಮಗಳ ಪ್ರವೇಶಾತಿಗಾಗಿ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಬಿ.ಎ., ಬಿ.ಕಾಂ., ಬಿ.ಎಸ್ಸಿ., ಬಿ.ಬಿ.ಎ., ಬಿ.ಸಿ.ಎ., ಬಿ.ಲಿಬ್.ಐ.ಎಸ್ಸಿ., ಬಿ.ಎಸ್.ಡಬ್ಲೂö್ಯ,. ಎಂ.ಎ., ಎಂ.ಕಾA., ಎಂ.ಎಸ್ಸಿ., ಎಂ.ಬಿ.ಎ., ಎಂ.ಸಿ.ಎ., ಎಂ.ಎಸ್.ಡಬ್ಲೂö್ಯ., ಎಂ.ಲಿಬ್.ಐ.ಎಸ್ಸಿ., ಪಿಜಿ ಸರ್ಟಿಫಿಕೇಟ್, ಡಿಪ್ಲೋಮಾ ಮತ್ತು ಸರ್ಟಿಫಿಕೇಟ್ ಶಿಕ್ಷಣಕ್ರಮಗಳಿಗೆ ಬಳ್ಳಾರಿಯ ಪ್ರಾದೇಶಿಕ ಕೇಂದ್ರದಲ್ಲಿ ಆನ್‌ಲೈನ್ ಮೂಲಕ ಪ್ರವೇಶಾತಿ ನೀಡಲಾಗುತ್ತಿದೆ.
ವಿಶ್ವವಿದ್ಯಾನಿಲಯದ ಅಂತರ್ಜಾಲ ತಿತಿತಿ.ಞsoumಥಿsuಡಿu.ಚಿಛಿ.iಟಿ ನಲ್ಲಿ ಲಭ್ಯವಿರುವ ಪ್ರಾಸ್‌ಪೆಕ್ಟಸ್‌ನಲ್ಲಿ ಎಲ್ಲಾ ವಿವರಗಳನ್ನು ನೀಡಿದ್ದು, ವಿದ್ಯಾರ್ಥಿಗಳು ಅದರನ್ವಯ ಅರ್ಹ ಶಿಕ್ಷಣಕ್ರಮಗಳಿಗೆ ವೆಬ್‌ಸೈಟ್‌ನಲ್ಲಿ ಲಭ್ಯವಿರುವ ಆನ್‌ಲೈನ್ ಅಡ್ಮಿಷನ್ ಪೋರ್ಟಲ್ ಮೂಲಕ ಪ್ರವೇಶಾತಿ ಮಾಡಿಕೊಳ್ಳಬಹುದಾಗಿದೆ.
ಬಿಪಿಎಲ್ ಕಾರ್ಡ್ ಹೊಂದಿರುವ ಮಹಿಳಾ ವಿದ್ಯಾರ್ಥಿಗಳಿಗೆ, ಡಿಫೆನ್ಸ್ / ಎಕ್ಸ್ಸರ್ವೀಸ್‌ಮನ್ ವಿದ್ಯಾರ್ಥಿಗಳು, ಆಟೋ/ಕ್ಯಾಬ್ ಡ್ರೆöÊರ‍್ಸ್ ಮತ್ತು ಕೆ.ಎಸ್.ಆರ್.ಟಿ.ಸಿ ನೌಕರರಿಗೆ ಮತ್ತು ಅವರ ಮಕ್ಕಳಿಗೆ ಬೋಧನಾ ಶುಲ್ಕದಲ್ಲಿ ಶೇ.10 ರಷ್ಟು ವಿಶೇಷ ರಿಯಾಯಿತಿ ಇದೆ.
ಕೋವಿಡ್‌ನಿಂದಾಗಿ ಮೃತರಾದ ಪೋಷಕರ ಮಕ್ಕಳಿಗೆ, ದೃಷ್ಠಿಹೀನ ವಿದ್ಯಾರ್ಥಿಗಳಿಗೆ ಹಾಗೂ ತೃತಿಯ ಲಿಂಗಗಳಿಗೆ ಪೂರ್ಣಶುಲ್ಕ ವಿನಾಯಿತಿ ಇದ್ದು, ಇದರ ಸದುಪಯೋಗ ಪಡೆದುಕೊಳ್ಳಬೇಕು.
ಅಕ್ಟೋಬರ್ 31 ರಂದು ಪ್ರವೇಶಾತಿ ಮಾಡಿಸಲು ಕೊನೆಯ ದಿನವಾಗಿದೆ.
ಅರ್ಜಿ ಸಲ್ಲಿಸುವಾಗ ಯಾವುದೇ ರೀತಿಯ ತೊಂದರೆಯಾದಲ್ಲಿ ಆನ್-ಲೈನ್ ಸಹಾಯವಾಣಿ 8800335638/8690544544 ಗೆ ಸಂಪರ್ಕಿಸಬಹುದು.
ಹೆಚ್ಚಿನ ಮಾಹಿತಿಗಾಗಿ ಕರಾಮುವಿ ಪ್ರಾದೇಶಿಕ ಕೇಂದ್ರವು, ಜಿಲ್ಲಾ ಕ್ರೀಡಾಂಗಣದ ಹತ್ತಿರ, ಪ್ರಾದೇಶಿಕ ವಿಜ್ಞಾನ ಕೇಂದ್ರದ ಹಿಂಭಾಗ, ನಲ್ಲಚೆರವು ಪ್ರದೇಶ, ಬಳ್ಳಾರಿ ಅಥವಾ ಮೊ.7892597159 ಗೆ ಸಂಪರ್ಕಿಸಬಹುದು ಎಂದು ಕರಾಮುವಿ ಪ್ರಾದೇಶಿಕ ನಿರ್ದೇಶಕ ಡಾ.ಹೆಚ್.ಮಲ್ಲಿಕಾರ್ಜುನ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
-----------
ಅ.01 ರಂದು ವಿಶ್ವ ಹಿರಿಯ ನಾಗರಿಕರ ದಿನಾಚರಣೆ ಕಾರ್ಯಕ್ರಮ
ಬಳ್ಳಾರಿ,ಸೆ.26(ಕರ್ನಾಟಕ ವಾರ್ತೆ):
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಹಾಗೂ ಹಿರಿಯ ನಾಗರಿಕರಿಗಾಗಿ ಶ್ರಮಿಸುತ್ತಿರುವ ಸ್ವಯಂ ಸೇವಾ ಸಂಸ್ಥೆಗಳ ಸಂಯುಕ್ತಾಶ್ರಯದಲ್ಲಿ ಅ.01 ರಂದು ಬೆಳಿಗ್ಗೆ 10.30 ಗಂಟೆಗೆ ನಗರದ ಡಾ.ಜೋಳದರಾಶಿ ದೊಡ್ಡನಗೌಡ ರಂಗಮAದಿರದಲ್ಲಿ ‘ವಿಶ್ವ ಹಿರಿಯ ನಾಗರಿಕ ದಿನಾಚರಣೆ’ ಕಾರ್ಯಕ್ರಮ ಏರ್ಪಡಿಸಲಾಗಿದೆ.
ವಸತಿ ವಕ್ಫ್ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಸಚಿವ ಹಾಗೂ ಬಳ್ಳಾರಿ ಉಸ್ತುವಾರಿ ಸಚಿವರಾದ ಬಿ.ಜೆಡ್.ಜಮೀರ್ ಅಹ್ಮದ್ ಖಾನ್ ಅವರು ಕಾರ್ಯಕ್ರಮ ಉದ್ಘಾಟಿಸುವರು.
ಬಳ್ಳಾರಿ ನಗರ ಶಾಸಕ ನಾರಾ ಭರತ್ ರೆಡ್ಡಿ ಅವರು ಅಧ್ಯಕ್ಷತೆ ವಹಿಸುವರು.
ಕರ್ನಾಟಕ ಕೈಮಗ್ಗ ಅಭಿವೃದ್ಧಿ ನಿಗಮ ನಿಯಮಿತದ ಅಧ್ಯಕ್ಷ ಹಾಗೂ ಶಾಸಕ ಜೆ.ಎನ್ ಗಣೇಶ್, ಸಂಸದರಾದ ಈ.ತುಕಾರಾಂ, ಕೆ.ರಾಜಶೇಖರ ಬಸವರಾಜ ಹಿಟ್ನಾಳ್, ಡಾ.ಸೈಯದ್ ನಾಸೀರ್ ಹುಸೇನ್, ಬಿ.ನಾಗೇಂದ್ರ, ಬಿ.ಎಂ.ನಾಗರಾಜ, ವಿಧಾನಪರಿಷÀತ್ ಶಾಸಕರಾದ ಡಾ.ಚಂದ್ರಶೇಖರ್ ಬಿ.ಪಾಟೀಲ, ಶಶೀಲ್ ನಮೋಶಿ, ವೈ.ಎಂ.ಸತೀಶ್, ಡಾ.ಬಾಬು ಜಗಜೀವನ್‌ರಾಮ್ ಚರ್ಮ ಕೈಗಾರಿಕಾ ಅಭಿವೃದ್ಧಿ ನಿಗಮದ ಅಧ್ಯಕ್ಷ ಮುಂಡರಗಿ ನಾಗರಾಜ, ಮಹಾನಗರ ಪಾಲಿಕೆಯ ಮಹಾಪೌರರಾದ ಮುಲ್ಲಂಗಿ ನಂದೀಶ್, ಬಳ್ಳಾರಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಜೆ.ಎಸ್.ಆಂಜನೇಯಲು ಸೇರಿದಂತೆ ಇತರರು ಮುಖ್ಯ ಅತಿಥಿಗಳಾಗಿ ಭಾಗವಹಿಸುವರು.
ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶರಾದ ರಾಜೇಶ್ ಹೊಸಮನೆ, ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಶೋಭರಾಣಿ ವಿ.ಜೆ., ಜಿಲ್ಲಾ ಪಂಚಾಯತ್‌ನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಾಹುಲ್ ಶರಣಪ್ಪ ಸಂಕನೂರ, ಅಪರ ಜಿಲ್ಲಾಧಿಕಾರಿ ಮಹಮ್ಮದ್ ಝುಬೇರ್.ಎನ್., ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕ ವಿಜಯ್‌ಕುಮಾರ್, ಜಿಲ್ಲಾ ಅಂಗವಿಕಲರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಕಲ್ಯಾಣಾಧಿಕಾರಿ ಗೋವಿಂದಪ್ಪ ಸೇರಿದಂತೆ ಇತರರು ಉಪಸ್ಥಿತರಿರುವರು.
ಕಾರ್ಯಕ್ರಮದಲ್ಲಿ ಶತಾಯುಶಿಗಳಿಗೆ ಸನ್ಮಾನ ಮತ್ತು ಕ್ರೀಡಾ ಹಾಗೂ ಸಾಂಸ್ಕೃತಿಕ ಸ್ಪರ್ಧೆಗಳಲ್ಲಿ ವಿಜೇತರಾದ ಹಿರಿಯ ನಾಗರಿಕರಿಗೆ ಬಹುಮಾನ ವಿತರಿಸಲಾಗುವುದು ಎಂದು ಪ್ರಕಟಣೆ ತಿಳಿಸಿದೆ.
---------
ಗುರುತಿನ ಚೀಟಿ ವಿತರಣೆಗೆ ಅರ್ಜಿ ಆಹ್ವಾನ
ಬಳ್ಳಾರಿ,ಸೆ.26(ಕರ್ನಾಟಕ ವಾರ್ತೆ):
ಕರ್ನಾಟಕ ಕುರಿ ಮತ್ತು ಉಣ್ಣೆ ಅಭಿವೃದ್ಧಿ ನಿಗಮ ಹಾಗೂ ಪಶುಪಾಲನಾ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆ ವತಿಯಿಂದ ಪ್ರಸ್ತಕ ಸಾಲಿಗೆ ಜಿಲ್ಲೆಯ ವಲಸೆಕುರಿಗಾರರಿಗೆ ಗುರುತಿನ ಚೀಟಿ ವಿತರಿಸುವ ಯೋಜನೆಯಡಿ ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿದಾರರು ಕನಿಷ್ಠ 20 ಕುರಿಗಳನ್ನು ಹೊಂದಿರಬೇಕು. ನಿಗಧಿಪಡಿಸಿದ ಅರ್ಜಿ ನಮೂನೆಗಳನ್ನು ತಮ್ಮ ತಾಲ್ಲೂಕು ವ್ಯಾಪ್ತಿಯ ಪಶು ಆಸ್ಪತ್ರೆ ಅಥವಾ ಹೊಸಪೇಟೆಯ ಕರ್ನಾಟಕ ಕುರಿ ಮತ್ತು ಉಣ್ಣೆ ಅಭಿವೃದ್ಧಿ ನಿಗಮದ ಸಹಾಯಕ ನಿರ್ದೇಶಕರ ಕಚೇರಿಯಲ್ಲಿ ಪಡೆಯಬಹುದು.
ಭರ್ತಿ ಮಾಡಿದ ಅರ್ಜಿಗಳನ್ನು ನಿಗದಿತ ದಾಖಲೆಗಳೊಂದಿಗೆ ತಮ್ಮ ತಾಲ್ಲೂಕು ವ್ಯಾಪ್ತಿಯ ಪಶು ಆಸ್ಪತ್ರೆ ಅಥವಾ ಹೊಸಪೇಟೆಯ ಕರ್ನಾಟಕ ಕುರಿ ಮತ್ತು ಉಣ್ಣೆ ಅಭಿವೃದ್ಧಿ ನಿಗಮದ ಸಹಾಯಕ ನಿರ್ದೇಶಕರ ಕಚೇರಿಗೆ ಸಲ್ಲಿಸಬೇಕು.
ಹೆಚ್ಚಿನ ಮಾಹಿತಿಗಾಗಿ ಹೊಸಪೇಟೆಯ ಪಶು ಆಸ್ಪತ್ರೆ ಆವರಣದ ಕರ್ನಾಟಕ ಕುರಿ ಮತ್ತು ಉಣ್ಣೆ ಅಭಿವೃದ್ಧಿ ನಿಗಮದ ಸಹಾಯಕ ನಿರ್ದೇಶಕರ ಕಚೇರಿ ಅಥವಾ ದೂ.08394-225129 ಗೆ ಸಂಪರ್ಕಿಸಬಹುದು ಎಂದು ಹೊಸಪೇಟೆಯ ಕರ್ನಾಟಕ ಕುರಿ ಮತ್ತು ಉಣ್ಣೆ ಅಭಿವೃದ್ಧಿ ನಿಗಮದ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
---------
ಅಲ್ಪ ಸಂಖ್ಯಾತರ ಕಲ್ಯಾಣ ಇಲಾಖೆ: ಪ್ರೋತ್ಸಾಹಧನಕ್ಕಾಗಿ ಅರ್ಜಿ ಆಹ್ವಾನ
ಬಳ್ಳಾರಿ,ಸೆ.26(ಕರ್ನಾಟಕ ವಾರ್ತೆ):
ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ವತಿಯಿಂದ ಪ್ರಸ್ತಕ ಸಾಲಿನಲ್ಲಿ ಬಿಎಸ್ಸಿ ನರ್ಸಿಂಗ್ ಮತ್ತು ಜಿಎನ್‌ಎಂ ನರ್ಸಿಂಗ್ ಕೋರ್ಸ್ಗಳಲ್ಲಿ ವ್ಯಾಸಂಗ ಮಾಡುತ್ತಿರುವ ಅರ್ಹ ಅಲ್ಪಸಂಖ್ಯಾತರ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನವನ್ನು ನೀಡಲು ಉದ್ದೇಶಿಸಲಾಗಿದ್ದು, ಅನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಅಲ್ಪಸಂಖ್ಯಾತರ ಸಮುದಾಯಕ್ಕೆ ಸೇರಿದ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಸಿಖ್, ಬೌದ್ಧ, ಪಾರ್ಸಿ ಜನಾಂಗದ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ.
ಅರ್ಜಿ ಸಲ್ಲಿಸಲು ಆನ್‌ಲೈನ್ ಸೇವಾ ಸಿಂಧು ಪೋರ್ಟಲ್‌ನ https://sevasindhu.karnataka.gov.in/ ಗೆ ಭೇಟಿ ನೀಡಬಹುದು. ಅರ್ಜಿ ಸಲ್ಲಿಸಲು ನವೆಂಬರ್ 10 ಕೊನೆಯ ದಿನವಾಗಿದೆ.
ಹೆಚ್ಚಿನ ಮಾಹಿತಿಗಾಗಿ ನಗರದ ಜೋಳದರಾಶಿ ದೊಡ್ಡನಗೌಡ ರಂಗಮAದಿರ ಹತ್ತಿರದ ಮೌಲಾನ ಅಜಾದ ಭವನದ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿಗಳ ಕಚೇರಿ ಅಥವಾ ಜಿಲ್ಲಾ ಹಾಗೂ ತಾಲ್ಲೂಕು ಮಾಹಿತಿ ಕೇಂದ್ರಗಳ ದೂಸಂ: ಬಳ್ಳಾರಿ-08392-200125/224, ಮೊ.8310321101, ಸಿರುಗುಪ್ಪ-9148889975, ಸಂಡೂರು-9036925966 ಗೆ ಸಂಪರ್ಕಿಸಬಹುದು ಎಂದು ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ವಿಠೋಬಾ ಹೊನಕಾಂಡೆ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
-----------
ತಂಬಾಕು ಮುಕ್ತ ಯುವ ಅಭಿಯಾನ 2.0: ಸೆ.30 ರಂದು ಜಿಲ್ಲಾ ಮಟ್ಟದ ಸಮನ್ವಯ ಸಮಿತಿ ಸಭೆ
ಬಳ್ಳಾರಿ,ಸೆ.26(ಕರ್ನಾಟಕ ವಾರ್ತೆ):
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಡಿಯ ರಾಷ್ಟಿçÃಯ ತಂಬಾಕು ನಿಯಂತ್ರಣ ಕಾರ್ಯಕ್ರಮದ “ತಂಬಾಕು ಮುಕ್ತ ಯುವ ಅಭಿಯಾನ 2.0” ಅನುಷ್ಠಾನಗೊಳಿಸಲು ವಿವಿಧ ಇಲಾಖೆಗಳ ನೇತೃತ್ವದಲ್ಲಿ ವಿಶೇಷ ಜಿಲ್ಲಾ ಮಟ್ಟದ ಸಮನ್ವಯ ಸಮಿತಿ ಸಭೆಯನ್ನು ಸೆ.30 ರಂದು ಸಂಜೆ 04 ಗಂಟೆಗೆ ನಗರದ ಅನಂತಪುರ ರಸ್ತೆಯ ನೂತನ ಜಿಲ್ಲಾಡಳಿತ ಭವನದ ಸಭಾಂಗಣದಲ್ಲಿ ಆಯೋಜಿಲಾಗಿದೆ ಎಂದು ಜಿಲ್ಲಾ ತಂಬಾಕು ನಿಯಂತ್ರಣ ಕೋಶದ ಜಿಲ್ಲಾ ನೋಡೆಲ್ ಅಧಿಕಾರಿಯೂ ಆದ ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಅವರು ತಿಳಿಸಿದ್ದಾರೆ.
---------
ಬುಧವಾರ, ಸೆಪ್ಟೆಂಬರ್ 25, 2024
ಐಸಿಎಆರ್; ಎರಡು ದಿನಗಳ ಕೃಷಿ-ಡ್ರೋನ್ ತಂತ್ರಜ್ಞಾನ ಪ್ರಾತ್ಯಕ್ಷಿಕೆ
ಬಳ್ಳಾರಿ,ಸೆ.25(ಕರ್ನಾಟಕ ವಾರ್ತೆ):
ಐಸಿಎಆರ್ ಭಾರತೀಯ ಮಣ್ಣು ಮತ್ತು ಜಲ ಸಂರಕ್ಷಣಾ ಸಂಸ್ಥೆ, ಸಂಶೋಧನಾ ಕೇಂದ್ರದ ವತಿಯಿಂದ ಸೋಮಸಮುದ್ರ ಮತ್ತು ಲಕ್ಷಿö್ಮÃನಗರ ಗ್ರಾಮಗಳಲ್ಲಿ ಸೋಮವಾರದಿಂದ ಎರಡು ದಿನಗಳ ಕೃಷಿ-ಡ್ರೋನ್ ತಂತ್ರಜ್ಞಾನ ಪ್ರಾತ್ಯಕ್ಷಿಕೆ ಕಾರ್ಯಕ್ರಮವನ್ನು ಅಯೋಜಿಸಲಾಯಿತು.
ಮೆಣಸಿನಕಾಯಿ, ಭತ್ತ ಮತ್ತು ಮೆಕ್ಕೆಜೋಳ ಬೆಳೆಗಳ ಮೇಲೆ ಕೃಷಿ ಡ್ರೋನ್ ಮೂಲಕ ಸಿಂಪರಣೆ ಪ್ರಾತ್ಯಕ್ಷಿಕೆಯನ್ನು 20 ಎಕರೆ ಭೂಪ್ರದೇಶದಲ್ಲಿ ನಡೆಸಲಾಯಿತು.
ಸೋಮಸಮುದ್ರ, ಲಕ್ಷಿö್ಮÃನಗರ ಕ್ಯಾಂಪ್, ಕೋಳೂರು, ಮದಿರೆ, ಕೃಷ್ಣಾನಗರ ಕ್ಯಾಂಪ್, ಭಾಗ್ಯನಗರ ಕ್ಯಾಂಪ್, ಶ್ರೀಧರಗಡ್ಡ ಗ್ರಾಮಗಳ ಸುಮಾರು 49 ರೈತರು ಮತ್ತು ಅನೇಕ ದಾರಿಹೋಕರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.
ಐಸಿಎಆರ್‌ನ ಹಿರಿಯ ವಿಜ್ಞಾನಿ (ಅರಣ್ಯ) ಡಾ.ಎಂ.ಎನ್.ರಮೇಶ ಅವರು ಮಾತನಾಡಿ, ಡ್ರೋನ್ ಸ್ಪೆçà ಬೆಳೆಗಳಿಗೆ ರಾಸಾಯನಿಕಗಳನ್ನು ಅನ್ವಯಿಸಲು ಬೇಕಾಗುವ ಕಾರ್ಮಿಕರನ್ನು ಕಡಿಮೆ ಮಾಡುತ್ತದೆ. ಕೇಂದ್ರೀಕೃತವಾಗಿ ಮತ್ತು ನಿಖರವಾಗಿ ರಾಸಾಯನಿಕವನ್ನು ಯಂತ್ರದ ಮೂಲಕ ಅನ್ವಯಿಸುವುದರಿಂದ, ಮಾನವನ-ಚರ್ಮದ ಅಲರ್ಜಿಕ್ ಆರೋಗ್ಯ ಸಮಸ್ಯೆಗಳನ್ನು ಕಡಿಮೆ ಮಾಡುವುದರ ಜೊತೆಗೆ ಮತ್ತು ರಸಾಯನಿಕಗಳ ಅನ್ವಯಿಕತೆಯ ಪರಿಣಾಮಕಾರಿತ್ವವನ್ನು ಹೆಚ್ಚಿಸುತ್ತದೆ ಎಂದು ತಿಳಿಸಿದರು.
ಹಳ್ಳಿಗಳಲ್ಲಿ ಮೆಣಸಿನಕಾಯಿ ಬೆಳೆಗೆ ಸೂಕ್ಷö್ಮ ಪೋಷಕಾಂಶಗಳನ್ನು ಸಿಂಪಡಿಸಲು ಡ್ರೋನ್‌ಗಳನ್ನು ಬಾಡಿಗೆಗೆ ಪಡೆದು ಸಿಂಪರಣೆ ಮಾಡಲು ಪ್ರೇರೇಪಿತರಾದರು.
ಭಾಗವಹಿಸಿದ ಅನೇಕ ರೈತರು ಡ್ರೋನ್‌ನ ಬೆಲೆಯನ್ನು ಕೇಳಿದರು ಮತ್ತು ಅವರಲ್ಲಿ ಕೆಲವರು ಮುಂಬರುವ ವರ್ಷಗಳಲ್ಲಿ ಡ್ರೋನ್ ಖರೀದಿಸಲು ತಮ್ಮ ಇಚ್ಛೆಯನ್ನು ವ್ಯಕ್ತಪಡಿಸಿದರು.
ಐಸಿಎಆರ್ ಸಂಸ್ಥೆಯ 100 ದಿನಗಳ ಗುರಿಯಡಿ ಈ ಪ್ರದೇಶದ ರೈತರ ಹೊಲಗಳಲ್ಲಿ ತಂತ್ರಜ್ಞಾನದ ಪ್ರಾತ್ಯಕ್ಷಿಕೆಯ ಪ್ರದರ್ಶನವನ್ನು ನಡೆಸಲಾಯಿತು.
ಈ ವೇಳೆ ಐಸಿಎಆರ್‌ನ ಡಾ.ರವಿ ದೂಪದಾಳ್, ಡಾ.ಕೆ.ಎನ್.ರವಿ, ಡಾ.ಎನ್.ಎಂ.ಅನುಷಾ ಹಾಗೂ ರೈತರು ಭಾಗವಹಿಸಿದ್ದರು.
---------
ಗುತ್ತಿಗೆ ಆಧಾರದ ಮೇಲೆ ವಿವಿಧ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ
ಬಳ್ಳಾರಿ,ಸೆ.25(ಕರ್ನಾಟಕ ವಾರ್ತೆ):
ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಕಾನೂನು ನೆರವು ಅಭಿರಕ್ಷಕರ ಕಚೇರಿಯಲ್ಲಿ ಗುತ್ತಿಗೆ ಆಧಾರದ ಮೇಲೆ ನೇಮಕಾತಿಗೆ ವಿವಿಧ ಹುದ್ದೆಗಳಿಗೆ ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ.
ತಾತ್ಕಾಲಿಕ ಹುದ್ದೆಯಾದ ಉಪ ಮುಖ್ಯ ಕಾನೂನು ಅಭಿರಕ್ಷಕರ ಹುದ್ದೆಗಳು 02, ಸಹಾಯಕ ಕಾನೂನು ನೆರವು ಅಭಿರಕ್ಷಕರ ಹುದ್ದೆಗಳು 05, ಕಚೇರಿ ಸಹಾಯಕ ಹುದ್ದೆಗಳು 02 ಮತ್ತು ಜವಾನ ಹುದ್ದೆಗಳು 02 ಇವುಗಳಿಗೆ ಗುತ್ತಿಗೆ ಆಧಾರದ ಮೇಲೆ ನೇಮಕಾತಿಗಾಗಿ ಅರ್ಜಿ ಆಹ್ವಾನಿಸಲಾಗಿದ್ದು, ಅಕ್ಟೋಬರ್ 03 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ.
ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಕಚೇರಿಗೆ ಸಂಪರ್ಕಿಸಬಹುದು ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶರಾದ ರಾಜೇಶ್ ಎನ್.ಹೊಸಮನೆ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
--------
ಸೆ.26 ರಂದು ಕಾರ್ಮಿಕ ಕಾಯ್ದೆಗಳ ಕುರಿತ ತಾಲ್ಲೂಕು ಮಟ್ಟದ ಕಾರ್ಯಾಗಾರ
ಬಳ್ಳಾರಿ,ಸೆ.25(ಕರ್ನಾಟಕ ವಾರ್ತೆ):
ಜಿಲ್ಲಾ ಕಾರ್ಮಿಕ ಇಲಾಖೆಯಿಂದ ಅನುಷ್ಠಾನಗೊಳಿಸುತ್ತಿರುವ ವಿವಿಧ ಕಾರ್ಮಿಕ ಕಾಯ್ದೆಗಳು ಹಾಗೂ ಜಾರಿಗೊಳಿಸಲಾಗುತ್ತಿರುವ ವಿವಿಧ ಯೋಜನೆಗಳ ಬಗ್ಗೆ ಸಾರ್ವಜನಿಕರು, ಉದ್ಯೋಗದಾತರು, ಕಾರ್ಮಿಕ ಸಂಘಟನೆಗಳ ಪ್ರತಿನಿಧಿಗಳಿಗೆ ಅರಿವು ಮೂಡಿಸುವ ಕಾರ್ಯಕ್ರಮ ಭಾಗವಾಗಿ ತಾಲೂಕು ಮಟ್ಟದ ಕಾರ್ಯಾಗಾರವನ್ನು ಸೆ.26 ರಂದು ಬೆಳಿಗ್ಗೆ 10.30 ಗಂಟೆಗೆ ಸಂಡೂರು ತಾಲೂಕಿನ ತೋರಣಗಲ್ಲಿನ ವಿದ್ಯಾನಗರ ಟೌನ್‌ಶಿಪ್‌ನ ಜೆಮ್ಯಾಕ್ಸ್ ಸಭಾಂಗಣದಲ್ಲಿ ಆಯೋಜಿಸಲಾಗಿದೆ.
ಸಂಘಟಿತ ಮತ್ತು ಅಸಂಘಟಿತ ಕಾರ್ಮಿಕರು ಕಾರ್ಯಗಾರದಲ್ಲಿ ಭಾಗವಹಿಸಿ ಯಶ್ವಿಸಿಗೊಳಿಸಬೇಕು ಎಂದು ಬಳ್ಳಾರಿ ಉಪವಿಭಾಗದ ಕಾರ್ಮಿಕ ಅಧಿಕಾರಿ ಸಿದ್ದಪ್ಪ ಜಿ.ಖೈನೂರ್ ಅವರು ತಿಳಿಸಿದ್ದಾರೆ.
----------
ಮಹರ್ಷಿ ವಾಲ್ಮೀಕಿ ಜಯಂತಿ; ಅ.03 ರಂದು ಪೂರ್ವಭಾವಿ ಸಭೆ
ಬಳ್ಳಾರಿ,ಸೆ.25(ಕರ್ನಾಟಕ ವಾರ್ತೆ):
ಜಿಲ್ಲಾಡಳಿತದಿಂದ ಅ.17 ರಂದು ಸೀಗೆ ಹುಣ್ಣಿಮೆ ದಿನದಂದು ಮಹರ್ಷಿ ವಾಲ್ಮೀಕಿ ಜಯಂತಿ ಆಚರಣೆಯ ಸಂಬAಧ ಅ.03 ರಂದು ಮಧ್ಯಾಹ್ನ 12 ಗಂಟೆಗೆ ನಗರದ ನೂತನ ಜಿಲ್ಲಾಡಳಿತ ಭವನದ ಸಭಾಂಗಣದಲ್ಲಿ ಪೂರ್ವಭಾವಿ ಸಭೆ ಏರ್ಪಡಿಸಲಾಗಿದೆ ಎಂದು ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ದಿವಾಕರ ಅವರು ತಿಳಿಸಿದ್ದಾರೆ.
ಜಿಲ್ಲೆಯ ವಿವಿಧ ಸಂಘ-ಸAಸ್ಥೆಗಳ ಅಧ್ಯಕ್ಷರು ಹಾಗೂ ಪದಾಧಿಕಾರಿಗಳು, ಮುಖಂಡರು, ಜಿಲ್ಲಾ ಮಟ್ಟದ, ವಿಭಾಗಮಟ್ಟದ ಹಾಗೂ ತಾಲ್ಲೂಕು ಮಟ್ಟದ ಅಧಿಕಾರಿಗಳು ತಪ್ಪದೇ ಭಾಗವಹಿಸಬೇಕು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
----------
ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗಗಳ ಸಮುದಾಯದವರು ತಮ್ಮ ಅಹವಾಲುಗಳಿದ್ದಲ್ಲಿ ಸಲ್ಲಿಸಿ
ಬಳ್ಳಾರಿ,ಸೆ.25(ಕರ್ನಾಟಕ ವಾರ್ತೆ):
ಜಿಲ್ಲೆಯ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗಗಳ ಸಂಘದ ಮುಖ್ಯಸ್ಥರು, ಸದಸ್ಯರು, ದಲಿತ ಮುಖಂಡರು ಹಾಗೂ ಸಮುದಾಯದ ಜನರು ತಮ್ಮ ಸಮಸ್ಯೆಗಳ ಕುರಿತು ಅಹವಾಲು/ ಮನವಿ ಪತ್ರಗಳಿದ್ದಲ್ಲಿ ಸೆ.26 ರಂದು ಸಂಜೆ 5.00 ಗಂಟೆಯೊಳಗಾಗಿ ಜಿಲ್ಲಾಧಿಕಾರಿಗಳ ಕಚೇರಿಗೆ ಸಲ್ಲಿಸಬಹುದು ಎಂದು ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕ ಮಲ್ಲಿಕಾರ್ಜುನ ಅವರು ತಿಳಿಸಿದ್ದಾರೆ.
ಕರ್ನಾಟಕ ವಿಧಾನಮಂಡಲದ ಅನುಸೂಚಿತ ಜಾತಿ ಮತ್ತು ಅನುಸೂಚಿತ ಪಂಗಡಗಳ ಕಲ್ಯಾಣ ಸಮಿತಿಯ ಅಧ್ಯಕ್ಷರಾದ ಪಿ.ಎಂ.ನರೇAದ್ರಸ್ವಾಮಿ ಹಾಗೂ 18 ಗೌರವಾನ್ವಿತ ಶಾಸಕರು ಹಾಗೂ ಸದಸ್ಯರುಗಳನ್ನೊಳಗೊಂಡ ಸಮಿತಿಯು ಸೆ.27 ರಂದು ಬಳ್ಳಾರಿ ಜಿಲ್ಲೆಯಲ್ಲಿ ಪ್ರವಾಸ ಕೈಗೊಳ್ಳುವರು.
ಜಿಲ್ಲೆಯಲ್ಲಿ ಇರುವ ಅನುಸೂಚಿತ ಜಾತಿ ಮತ್ತು ಅನುಸೂಚಿತ ಪಂಗಡಗಳ ಸಮುದಾಯದವರ ಅಭಿವೃದ್ಧಿಗಾಗಿ ಹಮ್ಮಿಕೊಳ್ಳಲಾಗಿರುವ ವಿವಿಧ ಯೋಜನೆಗಳ/ ಕಾರ್ಯಕ್ರಮಗಳ ಕುರಿತು ಪ್ರಗತಿ ಪರಿಶೀಲನಾ ಸಭೆಯನ್ನು ಸೆ.27 ರಂದು ಬೆಳಿಗ್ಗೆ 09 ಗಂಟೆಗೆ ಜಿಲ್ಲಾ ಪಂಚಾಯತ್‌ನ ನಜೀರ್ ಸಭಾಂಗಣದಲ್ಲಿ ನಡೆಸಲಿದ್ದಾರೆ.
ಹಾಗಾಗಿ ಜಿಲ್ಲೆಯ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗಗಳ ಸಂಘದ ಮುಖ್ಯಸ್ಥರು, ಸದಸ್ಯರು, ದಲಿತ ಮುಖಂಡರು ಹಾಗೂ ಸಮುದಾಯದ ಜನರು ತಮ್ಮ ಸಮಸ್ಯೆಗಳ ಕುರಿತು ಅಹವಾಲು/ಮನವಿ ಪತ್ರಗಳನ್ನು ಸಲ್ಲಿಸಬಹುದು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
----------
ಸೆ.27 ರಂದು ವಿಶ್ವ ಪ್ರವಾಸೋದ್ಯಮ ದಿನಾಚರಣೆ ಕಾರ್ಯಕ್ರಮ
ಬಳ್ಳಾರಿ,ಸೆ.25(ಕರ್ನಾಟಕ ವಾರ್ತೆ):
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಪ್ರವಾಸೋದ್ಯಮ ಇಲಾಖೆ ಹಾಗೂ ಹೋಟೆಲ್ ಮಾಲೀಕರ ಸಂಘದ ಸಹಯೋಗದೊಂದಿಗೆ ಸೆ.27 ರಂದು ಸಂಜೆ 4 ಗಂಟೆಗೆ ನಗರದ ಐತಿಹಾಸಿಕ ಕೋಟೆ ಮುಂಭಾಗದಲ್ಲಿ ವಿಶ್ವ ಪ್ರವಾಸೋದ್ಯಮ ದಿನಾಚರಣೆ ಕಾರ್ಯಕ್ರಮ ಏರ್ಪಡಿಸಲಾಗಿದೆ.
ವಸತಿ ವಕ್ಫ್ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಸಚಿವ ಹಾಗೂ ಬಳ್ಳಾರಿ ಉಸ್ತುವಾರಿ ಸಚಿವರಾದ ಬಿ.ಜೆಡ್.ಜಮೀರ್ ಅಹ್ಮದ್ ಖಾನ್ ಅವರು ಕಾರ್ಯಕ್ರಮ ಉದ್ಘಾಟಿಸುವರು.
ಬಳ್ಳಾರಿ ಗ್ರಾಮೀಣ ಕ್ಷೇತ್ರದ ಶಾಸಕ ಬಿ.ನಾಗೇಂದ್ರ ಅವರು ಅಧ್ಯಕ್ಷತೆ ವಹಿಸುವರು.
ಕರ್ನಾಟಕ ಕೈಮಗ್ಗ ಅಭಿವೃದ್ಧಿ ನಿಗಮ ನಿಯಮಿತದ ಅಧ್ಯಕ್ಷ ಹಾಗೂ ಶಾಸಕ ಜೆ.ಎನ್ ಗಣೇಶ್, ಸಂಸದರಾದ ಈ.ತುಕಾರಾಂ, ಕೆ.ರಾಜಶೇಖರ ಬಸವರಾಜ ಹಿಟ್ನಾಳ್, ಡಾ.ಸೈಯದ್ ನಾಸೀರ್ ಹುಸೇನ್, ಶಾಸಕರಾದ ನಾರಾ ಭರತ್ ರೆಡ್ಡಿ, ಬಿ.ಎಂ.ನಾಗರಾಜ, ವಿಧಾನಪರಿಷÀತ್ ಶಾಸಕರಾದ ಡಾ.ಚಂದ್ರಶೇಖರ್ ಬಿ.ಪಾಟೀಲ, ಶಶೀಲ್ ನಮೋಶಿ, ವೈ.ಎಂ.ಸತೀಶ್, ಡಾ.ಬಾಬು ಜಗಜೀವನ್‌ರಾಮ್ ಚರ್ಮ ಕೈಗಾರಿಕಾ ಅಭಿವೃದ್ಧಿ ನಿಗಮದ ಅಧ್ಯಕ್ಷ ಮುಂಡರಗಿ ನಾಗರಾಜ, ಮಹಾನಗರ ಪಾಲಿಕೆಯ ಮಹಾಪೌರರಾದ ಮುಲ್ಲಂಗಿ ನಂದೀಶ್, ಬಳ್ಳಾರಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಜೆ.ಎಸ್.ಆಂಜನೇಯಲು ಸೇರಿದಂತೆ ಇತರರು ಮುಖ್ಯ ಅತಿಥಿಗಳಾಗಿ ಭಾಗವಹಿಸುವರು.
ಪ್ರವಾಸೋದ್ಯಮ ಇಲಾಖೆಯ ಸರ್ಕಾರದ ಕಾರ್ಯದರ್ಶಿ ಸಲ್ಮಾ.ಕೆ ಫಾಹಿಮ್, ಪ್ರವಾಸೋದ್ಯಮ ಇಲಾಖೆಯ ನಿರ್ದೇಶಕ ಡಾ.ರಾಜೇಂದ್ರ ಕೆ.ವಿ., ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಶೋಭರಾಣಿ ವಿ.ಜೆ., ಜಿಲ್ಲಾ ಪಂಚಾಯತ್‌ನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಾಹುಲ್ ಶರಣಪ್ಪ ಸಂಕನೂರ, ಪ್ರವಾಸೋದ್ಯಮ ಇಲಾಖೆಯ ಉಪ ನಿರ್ದೇಶಕ ಪ್ರಭುಲಿಂಗ.ಎಸ್ ತಳಕೇರಿ ಸೇರಿದಂತೆ ಇತರರು ಉಪಸ್ಥಿತರಿರುವರು ಎಂದು ಪ್ರಕಟಣೆ ತಿಳಿಸಿದೆ.
-------------
ಜಿಲ್ಲಾ ಮಟ್ಟದ ಜಾಗೃತಿ ಜಾಥಾ ಹಾಗೂ ಸಮಾವೇಶ ಕಾರ್ಯಕ್ರಮದಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಶೋಭಾರಾಣಿ ವಿ.ಜೆ | ಹೆಣ್ಣುಮಕ್ಕಳು ಸಾಧನೆಯ ಶಿಖರವೇರಲು ಶಿಕ್ಷಣ ಹೊಂದಬೇಕು
ಬಳ್ಳಾರಿ,ಸೆ.25(ಕರ್ನಾಟಕ ವಾರ್ತೆ):
ಹೆಣ್ಣೊಂದು ಕಲಿತರೆ ಶಾಲೆಯೊಂದು ತೆರೆದಂತೆ ಎನ್ನುವ ನಾಣ್ಣುಡಿಯಂತೆ ಹೆಣ್ಣು ಮಕ್ಕಳು ಶಿಕ್ಷಣ ಪಡೆದಾಗ ಮಾತ್ರ ಸಮಾಜದಲ್ಲಿ ಸಾಧನೆಯ ಶಿಖರವೇರಲು ಸಾಧ್ಯವಾಗುತ್ತದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಶೋಭಾರಾಣಿ ವಿ.ಜೆ ಅವರು ಹೇಳಿದರು.
ರೀಡ್ಸ್ ಸಂಸ್ಥೆ, ಮಕ್ಕಳ ವಿಶೇಷ ಪೊಲೀಸ್ ಘಟಕ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಹಾಗೂ ಜಿಲ್ಲಾ ಮಕ್ಕಳ ರಕ್ಷಣಾ ಘಟಕ ಇವರ ಸಂಯುಕ್ತಾಶ್ರಯದಲ್ಲಿ ನಗರದ ಬಿಡಿಎಎ ಸಭಾಗಂಣದಲ್ಲಿ ಬುಧವಾರ ಏರ್ಪಡಿಸಿದ್ದ ಬಾಲ್ಯ ವಿವಾಹ ನಿಷೇಧ, ಲಿಂಗ ತಾರತಮ್ಯ ಹಾಗೂ ಮಕ್ಕಳ ಮೇಲಿನ ದೌರ್ಜನ್ಯ ತಡೆ ಕುರಿತು ಹದಿ ಹರೆಯದ ಹೆಣ್ಣುಮಕ್ಕಳ ಸಮಾವೇಶ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಆರ್‌ಟಿಇ-2009 ಕಾಯ್ದೆ ಪ್ರಕಾರ ಶಿಕ್ಷಣ ಆಯ್ಕೆಯಲ್ಲ ಅದು ನಮ್ಮ ಹಕ್ಕು. ಪ್ರತಿಯೊಬ್ಬ ಮಹಿಳೆಯೂ ಶಿಕ್ಷಣ ಪಡೆದು ಆರ್ಥಿಕ, ಸಾಮಾಜಿಕವಾಗಿ ಸಬಲೀಕರಣವಾಗಿ ಎಲ್ಲಾ ಕ್ಷೇತ್ರಗಳಲ್ಲಿ ಮುಂದೆ ಬರಬೇಕು ಎಂದು ಹೇಳಿದರು.
ಯೌವನ ಸಮಯದಲ್ಲಿ ಹೆಣ್ಣು ಮಕ್ಕಳು ಯಾವುದೇ ತರಹದ ಆಕರ್ಷಣೆಗೆ ಒಳಗಾಗಿ ತಪ್ಪು ಹಾದಿ ಹಿಡಿಯದೇ, ಜೀವನದ ತಾತ್ಪರ್ಯ ಅರಿತುಕೊಂಡು ಮನೆಗೆ-ಊರಿಗೆ, ಮುಖ್ಯವಾಗಿ ಪೋಷಕರಿಗೆ ಕೀರ್ತಿ ತರುವ ಹಾಗೆ ಉತ್ತಮ ಸಾಧನೆ ಮಾಡಬೇಕು ಎಂದು ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು.
ಬಾಲ್ಯ ವಿವಾಹ, ಲಿಂಗ ತಾರತಮ್ಯ, ಮಕ್ಕಳ ಮೇಲಿನ ದೌರ್ಜನ್ಯಗಳನ್ನು ನಿರ್ಮೂಲನೆ ಮಾಡಲು ಶಿಕ್ಷಣವು ಮಾರ್ಗವಾಗಿದ್ದು, ಉತ್ತಮ ವಿದ್ಯಾಭ್ಯಾಸದಿಂದ ಮಾತ್ರ ಸಾಧ್ಯ ಎಂದರು.
ಮಕ್ಕಳ ರಕ್ಷಣೆಗಾಗಿ ಪ್ರತಿ ಜಿಲ್ಲೆಯಲ್ಲಿಯೂ ಡಿವೈಎಸ್‌ಪಿ, ಪಿಎಸ್‌ಐ, ಮಹಿಳಾ ಪೊಲೀಸ್ ಪೇದೆ ಒಳಗೊಂಡAತೆ ವಿಶೇಷ ಮಕ್ಕಳ ಪೊಲೀಸ್ ಘಟಕವಿದ್ದು, ಬಾಲ್ಯವಿವಾಹ, ಮಕ್ಕಳ ಮೇಲಿನ ದೌರ್ಜನ್ಯ ಪ್ರಕರಣ ಕಂಡುಬAದಲ್ಲಿ ಮಾಹಿತಿ ನೀಡಬೇಕು ಎಂದರು.
ಜಿಲ್ಲೆಯಲ್ಲಿ ಬಾಲ್ಯ ವಿವಾಹ ಪ್ರಕರಣ ಹೆಚ್ಚಾಗುತ್ತಿದ್ದು, ಬಾಲ್ಯ ವಿವಾಹವು ಕಾನೂನು ಬಾಹಿರವಾಗಿದೆ. ಈ ಕುರಿತು ತಮ್ಮ ಮನೆ-ಕುಟುಂಬಗಳಲ್ಲಿ ಮನವರಿಕೆ ಮಾಡಬೇಕು ಎಂದರಲ್ಲದೇ, ಮಕ್ಕಳ ಮೇಲೆ ದೌರ್ಜನ್ಯ, ಬಾಲ್ಯವಿವಾಹ ಹಾಗೂ ಇತರೆ ಸಮಸ್ಯೆ ಇದ್ದಲ್ಲಿ ಮಕ್ಕಳ ಸಹಾಯವಾಣಿ ಸಂಖ್ಯೆ 1098, ಮಹಿಳಾ ಸಹಾಯವಾಣಿ ಸಂಖ್ಯೆ 181 ಹಾಗೂ ತುರ್ತು ಸಹಾಯವಾಣಿ ಸಂಖ್ಯೆ 112 ಗೆ ಕರೆಮಾಡಿ ಮಾಹಿತಿ ನೀಡಬಹುದು ಎಂದರು.
ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶರಾದ ರಾಜೇಶ್ ಎನ್.ಹೊಸಮನೆ ಅವರು ಮಾತನಾಡಿ, ಇತ್ತೀಚಿನ ದಿನಮಾನಗಳಲ್ಲಿ ಎಲ್ಲಾ ರಂಗಗಳಲ್ಲಿ ಪುರುಷರಿಗಿಂತ ಮಹಿಳೆಯರೇ ಎಲ್ಲಾ ರಂಗಗಳಲ್ಲಿ ಹೆಚ್ಚು ಸ್ಥಾನಮಾನ ಹೊಂದುತ್ತಿದ್ದಾರೆ. ಹಾಗಾಗಿ ಸಾಧನೆ ಮಾಡುವ ಹಂಬಲ ಎಲ್ಲರಲ್ಲೂ ಮೂಡಬೇಕು ಎಂದು ಹೇಳಿದರು.
ಪ್ರಸ್ತುತದಲ್ಲಿ ಪ್ರೇಮ-ವಿವಾಹ ಪ್ರಕರಣಗಳಿಂದ ಹದಿ-ಹರೆಯದವರ ಜೀವನ ಹಾಳಾಗುತ್ತಿದೆ. ಹಾಗಾಗಿ ಹೆಣ್ಣುಮಕ್ಕಳು ಜಾಗೃತರಾಗಬೇಕು. ಶಿಕ್ಷಣದಿಂದ ನಿರ್ದಿಷ್ಠ ಗುರಿ ಹೊಂದಿ, ಸಮಾಜದಲ್ಲಿ ಉನ್ನತ ಸ್ಥಾನ-ಮಾನ ಹೊಂದಬೇಕು ಎಂದು ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು.
ಪ್ರತಿಯೊಬ್ಬರೂ ಜವಾಬ್ದಾರಿಯುತ ನಾಗರಿಕನಾಗಬೇಕು. ಸಾಧನೆಗೈದ ಅನೇಕ ಮಹನೀಯರ ದಾರ್ಶನಿಕ ಬದುಕನ್ನು ತಮ್ಮ ಜೀವನದಲ್ಲಿಯೂ ಅಳವಡಿಸಿಕೊಳ್ಳಬೇಕು. ಇಂತಹ ಸಮಾವೇಶ ಕಾರ್ಯಕ್ರಮದ ಮಹತ್ವ ಹೊಂದಿ, ತಮ್ಮ ಗ್ರಾಮ, ಮನೆ, ಕುಟುಂಬದ ಸದಸ್ಯರಿಗೂ ತಿಳಿಸಬೇಕು ಎಂದರು.
ಸAಪನ್ಮೂಲ ವ್ಯಕ್ತಿಗಳಾಗಿ ವಕೀಲರಾದ ಶಿವಲೀಲಾ, ನಿವೃತ್ತ ತಾಲ್ಲೂಕು ವೈದ್ಯಾಧಿಕಾರಿ ಡಾ.ಮೋಹನ ಕುಮಾರಿ, ಕೌಲ್‌ಬಜಾರ್ ಪೊಲೀಸ್ ಠಾಣೆಯ ಪೊಲೀಸ್ ಇನ್ಸ್ಪೆಕ್ಟರ್ ಸುಭಾಷ್ ಚಂದ್ರ, ಗಾಂಧಿನಗರ ಪೊಲೀಸ್ ಠಾಣೆಯ ಪೊಲೀಸ್ ಇನ್ಸ್ಪೆಕ್ಟರ್ ಸಿದ್ದರಾಮೇಶ್ವರ ಕಡೇದ, ಬಳ್ಳಾರಿ ಸಂಚಾರಿ ಪೊಲೀಸ್ ಠಾಣೆಯ ಪೊಲೀಸ್ ಇನ್ಸ್ಪೆಕ್ಟರ್ ಅಯ್ಯನಗೌಡ ಪಾಟೀಲ್ ಅವರು ವಿವಿಧ ವಿಷಯಗಳ ಕುರಿತು ವಿಶೇಷ ಉಪನ್ಯಾಸ ನೀಡಿದರು.
ಈ ಸಂದರ್ಭದಲ್ಲಿ ಹೆಚ್ಚುವರಿ ಪೊಲೀಸ್ ಅಧೀಕ್ಷಕ ನವೀನ ಕುಮಾರ್, ಡಿವೈಎಸ್‌ಪಿ ಹಾಗೂ ಎಸ್‌ಜೆಪಿಯು ಹಿರಿಯ ಮಕ್ಕಳ ಕಲ್ಯಾಣಾಧಿಕಾರಿ ಚಂದ್ರಕಾAತ ನಂದಾ ರೆಡ್ಡಿ, ರೈಲ್ವೇ ಪೊಲೀಸ್ ಅಧಿಕಾರಿ ವಿಜಯಲಕ್ಷಿö್ಮÃ, ಜಿಲ್ಲಾಮಕ್ಕಳ ರಕ್ಷಣಾ ಘಟಕದ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಎಳೆ ನಾಗಪ್ಪ, ರೀಡ್ಸ್ ಸಂಸ್ಥೆಯ ಕಾರ್ಯನಿರ್ವಾಹಕ ನಿರ್ದೇಶಕ ಸಿ.ತಿಪ್ಪೇಶಪ್ಪ, ರೀಡ್ಸ್ ಸಂಸ್ಥೆಯ ಯೋಜನಾ ವ್ಯವಸ್ಥಾಪಕಿ ಕೆ.ಸೀತಾಮಹಾಲಕ್ಷಿö್ಮÃ, ಕಾರ್ಯಕ್ರಮ ವ್ಯವಸ್ಥಾಪಕ ಜಗತಾಪ್, ತಾಲ್ಲೂಕು ಸಂಯೋಜಕರಾದ ಶಿಲ್ಪಾ, ಕೆ.ಎಂ.ತಿಪ್ಪೇಸ್ವಾಮಿ ಸೇರಿದಂತೆ ವಿವಿಧ ಕಾಲೇಜುಗಳ ವಿದ್ಯಾರ್ಥಿನಿಯರು, ಯುವಕ-ಯುವತಿಯರು ಮತ್ತು ಸ್ವ-ಸಹಾಯ ಸಂಘದ ಮಹಿಳೆಯರು, ಇನ್ನೀತರರು ಉಪಸ್ಥಿತರಿದ್ದರು.
*ಅರಿವು ಮೂಡಿಸಿದ ಜಿಲ್ಲಾ ಮಟ್ಟದ ಜಾಗೃತಿ ಜಾಥಾ:*
ಬಾಲ್ಯ ವಿವಾಹ ನಿಷೇಧ, ಲಿಂಗ ತಾರತಮ್ಯ, ಹಾಗೂ ಮಕ್ಕಳ ಮೇಲಿನ ದೌರ್ಜನ್ಯ ತಡೆ ಕುರಿತು ಜಿಲ್ಲಾ ಮಟ್ಟದ ಜಾಗೃತಿ ಜಾಥಾ ನಡೆಯಿತು.
ಜಾಥಾಗೆ ಎಸ್‌ಪಿ ಕಚೇರಿ ಆವರಣದಿಂದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಶೋಭರಾಣಿ.ವಿ.ಜೆ ಅವರು ಚಾಲನೆ ನೀಡಿದರು.
ಜಾಥಾದಲ್ಲಿ ವಿವಿಧ ಶಾಲಾ ಕಾಲೇಜು ವಿದ್ಯಾರ್ಥಿಗಳು, ಸ್ವ-ಸಹಾಯ ಸಂಘ ಸಂಸ್ಥೆಗಳ ಮಹಿಳೆಯರು ಭಾಗವಹಿಸಿ ‘ನಿಲ್ಲಿಸಿ, ನಿಲ್ಲಿಸಿ, ಬಾಲ್ಯ ವಿವಾಹ ನಿಲ್ಲಿಸಿ...’ ‘ಮಕ್ಕಳನ್ನು ಶಾಲೆಗೆ ಕಳುಹಿಸಿ’, ‘ದುಡಿಮೆ ಬೇಡ ಶಾಲೆ ಬೇಕು’ ಎನ್ನುವ ಘೋಷಣೆಗಳನ್ನು ಕೂಗಿದರು.
ಜಾಥಾವು ಎಸ್‌ಪಿ ಕಚೇರಿ ಮುಂಭಾಗದಿAದ ಗಡಗಿ ಚೆನ್ನಪ್ಪ ವೃತ್ತ, ಜಿಲ್ಲಾಧಿಕಾರಿ ಕಚೇರಿ ಮೂಲಕ ಬಿಡಿಎಎ ಫುಟ್‌ಬಾಲ್ ಮೈದಾನದ ವೇದಿಕೆ ಕಾರ್ಯಕ್ರಮದವರೆಗೆ ತಲುಪಿ ಸಂಪನ್ನಗೊAಡಿತು.
----------
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳು (Atom)












































