ಗುರುವಾರ, ಸೆಪ್ಟೆಂಬರ್ 26, 2024
ಅ.01 ರಂದು ವಿಶ್ವ ಹಿರಿಯ ನಾಗರಿಕರ ದಿನಾಚರಣೆ ಕಾರ್ಯಕ್ರಮ
ಬಳ್ಳಾರಿ,ಸೆ.26(ಕರ್ನಾಟಕ ವಾರ್ತೆ):
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಹಾಗೂ ಹಿರಿಯ ನಾಗರಿಕರಿಗಾಗಿ ಶ್ರಮಿಸುತ್ತಿರುವ ಸ್ವಯಂ ಸೇವಾ ಸಂಸ್ಥೆಗಳ ಸಂಯುಕ್ತಾಶ್ರಯದಲ್ಲಿ ಅ.01 ರಂದು ಬೆಳಿಗ್ಗೆ 10.30 ಗಂಟೆಗೆ ನಗರದ ಡಾ.ಜೋಳದರಾಶಿ ದೊಡ್ಡನಗೌಡ ರಂಗಮAದಿರದಲ್ಲಿ ‘ವಿಶ್ವ ಹಿರಿಯ ನಾಗರಿಕ ದಿನಾಚರಣೆ’ ಕಾರ್ಯಕ್ರಮ ಏರ್ಪಡಿಸಲಾಗಿದೆ.
ವಸತಿ ವಕ್ಫ್ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಸಚಿವ ಹಾಗೂ ಬಳ್ಳಾರಿ ಉಸ್ತುವಾರಿ ಸಚಿವರಾದ ಬಿ.ಜೆಡ್.ಜಮೀರ್ ಅಹ್ಮದ್ ಖಾನ್ ಅವರು ಕಾರ್ಯಕ್ರಮ ಉದ್ಘಾಟಿಸುವರು.
ಬಳ್ಳಾರಿ ನಗರ ಶಾಸಕ ನಾರಾ ಭರತ್ ರೆಡ್ಡಿ ಅವರು ಅಧ್ಯಕ್ಷತೆ ವಹಿಸುವರು.
ಕರ್ನಾಟಕ ಕೈಮಗ್ಗ ಅಭಿವೃದ್ಧಿ ನಿಗಮ ನಿಯಮಿತದ ಅಧ್ಯಕ್ಷ ಹಾಗೂ ಶಾಸಕ ಜೆ.ಎನ್ ಗಣೇಶ್, ಸಂಸದರಾದ ಈ.ತುಕಾರಾಂ, ಕೆ.ರಾಜಶೇಖರ ಬಸವರಾಜ ಹಿಟ್ನಾಳ್, ಡಾ.ಸೈಯದ್ ನಾಸೀರ್ ಹುಸೇನ್, ಬಿ.ನಾಗೇಂದ್ರ, ಬಿ.ಎಂ.ನಾಗರಾಜ, ವಿಧಾನಪರಿಷÀತ್ ಶಾಸಕರಾದ ಡಾ.ಚಂದ್ರಶೇಖರ್ ಬಿ.ಪಾಟೀಲ, ಶಶೀಲ್ ನಮೋಶಿ, ವೈ.ಎಂ.ಸತೀಶ್, ಡಾ.ಬಾಬು ಜಗಜೀವನ್‌ರಾಮ್ ಚರ್ಮ ಕೈಗಾರಿಕಾ ಅಭಿವೃದ್ಧಿ ನಿಗಮದ ಅಧ್ಯಕ್ಷ ಮುಂಡರಗಿ ನಾಗರಾಜ, ಮಹಾನಗರ ಪಾಲಿಕೆಯ ಮಹಾಪೌರರಾದ ಮುಲ್ಲಂಗಿ ನಂದೀಶ್, ಬಳ್ಳಾರಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಜೆ.ಎಸ್.ಆಂಜನೇಯಲು ಸೇರಿದಂತೆ ಇತರರು ಮುಖ್ಯ ಅತಿಥಿಗಳಾಗಿ ಭಾಗವಹಿಸುವರು.
ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶರಾದ ರಾಜೇಶ್ ಹೊಸಮನೆ, ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಶೋಭರಾಣಿ ವಿ.ಜೆ., ಜಿಲ್ಲಾ ಪಂಚಾಯತ್‌ನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಾಹುಲ್ ಶರಣಪ್ಪ ಸಂಕನೂರ, ಅಪರ ಜಿಲ್ಲಾಧಿಕಾರಿ ಮಹಮ್ಮದ್ ಝುಬೇರ್.ಎನ್., ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕ ವಿಜಯ್‌ಕುಮಾರ್, ಜಿಲ್ಲಾ ಅಂಗವಿಕಲರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಕಲ್ಯಾಣಾಧಿಕಾರಿ ಗೋವಿಂದಪ್ಪ ಸೇರಿದಂತೆ ಇತರರು ಉಪಸ್ಥಿತರಿರುವರು.
ಕಾರ್ಯಕ್ರಮದಲ್ಲಿ ಶತಾಯುಶಿಗಳಿಗೆ ಸನ್ಮಾನ ಮತ್ತು ಕ್ರೀಡಾ ಹಾಗೂ ಸಾಂಸ್ಕೃತಿಕ ಸ್ಪರ್ಧೆಗಳಲ್ಲಿ ವಿಜೇತರಾದ ಹಿರಿಯ ನಾಗರಿಕರಿಗೆ ಬಹುಮಾನ ವಿತರಿಸಲಾಗುವುದು ಎಂದು ಪ್ರಕಟಣೆ ತಿಳಿಸಿದೆ.
---------
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)

ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ