ಬುಧವಾರ, ಸೆಪ್ಟೆಂಬರ್ 25, 2024

ಮಹರ್ಷಿ ವಾಲ್ಮೀಕಿ ಜಯಂತಿ; ಅ.03 ರಂದು ಪೂರ್ವಭಾವಿ ಸಭೆ

ಬಳ್ಳಾರಿ,ಸೆ.25(ಕರ್ನಾಟಕ ವಾರ್ತೆ): ಜಿಲ್ಲಾಡಳಿತದಿಂದ ಅ.17 ರಂದು ಸೀಗೆ ಹುಣ್ಣಿಮೆ ದಿನದಂದು ಮಹರ್ಷಿ ವಾಲ್ಮೀಕಿ ಜಯಂತಿ ಆಚರಣೆಯ ಸಂಬAಧ ಅ.03 ರಂದು ಮಧ್ಯಾಹ್ನ 12 ಗಂಟೆಗೆ ನಗರದ ನೂತನ ಜಿಲ್ಲಾಡಳಿತ ಭವನದ ಸಭಾಂಗಣದಲ್ಲಿ ಪೂರ್ವಭಾವಿ ಸಭೆ ಏರ್ಪಡಿಸಲಾಗಿದೆ ಎಂದು ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ದಿವಾಕರ ಅವರು ತಿಳಿಸಿದ್ದಾರೆ. ಜಿಲ್ಲೆಯ ವಿವಿಧ ಸಂಘ-ಸAಸ್ಥೆಗಳ ಅಧ್ಯಕ್ಷರು ಹಾಗೂ ಪದಾಧಿಕಾರಿಗಳು, ಮುಖಂಡರು, ಜಿಲ್ಲಾ ಮಟ್ಟದ, ವಿಭಾಗಮಟ್ಟದ ಹಾಗೂ ತಾಲ್ಲೂಕು ಮಟ್ಟದ ಅಧಿಕಾರಿಗಳು ತಪ್ಪದೇ ಭಾಗವಹಿಸಬೇಕು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ----------

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ