ಸೋಮವಾರ, ಸೆಪ್ಟೆಂಬರ್ 30, 2024
ಅ.04, 05 ರಂದು ಪುಸ್ತಕಗಳ ಪ್ರದರ್ಶನ
ಬಳ್ಳಾರಿ,ಸೆ.30(ಕರ್ನಾಟಕ ವಾರ್ತೆ):
2021ನೇ ಸಾಲಿನಲ್ಲಿ ಪ್ರಥಮ ಮುದ್ರಣವಾಗಿ ಪ್ರಕಟಗೊಂಡ ರಾಜ್ಯ ಮಟ್ಟದ ಪುಸ್ತಕ ಆಯ್ಕೆ ಸಮಿತಿಯಿಂದ ಆಯ್ಕೆಯಾದ ಹಾಗೂ ಆಯ್ಕೆಯಾಗದ ಪುಸ್ತಕಗಳ ಪ್ರದರ್ಶನವನ್ನು ಅ.04 ಮತ್ತು 05 ರಂದು ಬೆಂಗಳೂರಿನ ಹಂಪಿನಗರದ ಪಶ್ಚಿಮ ವಲಯದ ನಗರ ಕೇಂದ್ರ ಗ್ರಂಥಾಲಯದ ಗ್ರಂಥಾAಗಣದಲ್ಲಿ ಏರ್ಪಡಿಸಲಾಗಿದೆ.
ಆಯ್ಕೆಯಾದ ಪುಸ್ತಕಗಳ ತಾತ್ಕಾಲಿಕ ಪಟ್ಟಿಯನ್ನು ಜಿಲ್ಲಾ/ನಗರ ಕೇಂದ್ರ ಗ್ರಂಥಾಲಯಗಳ ಕಚೇರಿಗಳಲ್ಲಿ ಪ್ರದರ್ಶಸಲು ಮತ್ತು ಇಲಾಖೆಯ ಅಧಿಕೃತ ವೆಬ್ ಸೈಟ್ dpl karnataka.gov.in ನಲ್ಲಿ ಪ್ರಕಟಿಸಲು ಕ್ರಮ ವಹಿಸಲಾಗುತ್ತದೆ.
ರಾಜ್ಯ ಮಟ್ಟದ ಪುಸ್ತಕ ಆಯ್ಕೆ ಸಮಿತಿಯಿಂದ ಆಯ್ಕೆಗಾಗಿ ಸಲ್ಲಿಸಿದ ಲೇಖಕರು, ಲೇಖಕ-ಪ್ರಕಾಶಕರು, ಪ್ರಕಾಶಕರು ಮತ್ತು ಪುಸ್ತಕ ಮಾರಾಟಗಾರರು ಆಕ್ಷೇಪಣೆಗಳಿದ್ದಲ್ಲಿ ಅ.09 ಸಂಜೆ 5.30 ರ ಒಳಗಾಗಿ ಅಯುಕ್ತರು, ಸಾರ್ವಜನಿಕ ಗ್ರಂಥಾಲಯ ಇಲಾಖೆ, ವಿಶ್ವೇಶ್ವರಯ್ಯ ಮುಖ್ಯ ಗೋಪುರ, 4ನೇ ಮಹಡಿ, ಡಾ. ಅಂಬೇಡ್ಕರ್ ವೀಧಿ, ಬೆಂಗಳೂರು-560001 ಇಲ್ಲಿಗೆ ಲಿಖಿತವಾಗಿ ಮನವಿಗಳನ್ನು ಸಲ್ಲಿಸಬಹುದು.
ನಂತರ ಬಂದ ಮನವಿಗಳನ್ನು ಪರಿಗಣಿಸಲಾಗುವುದಿಲ್ಲ.
ಹೆಚ್ಚಿನ ಮಾಹಿತಿಗಾಗಿ ಬಳ್ಳಾರಿ ನಗರ ಕೇಂದ್ರ ಗ್ರಂಥಾಲಯದ ಮುಖ್ಯ ಗ್ರಂಥಾಲಯಾಧಿಕಾರಿ ಕಚೇರಿಗೆ ಸಂಪರ್ಕಿಸಬಹುದು ಎಂದು ಬಳ್ಳಾರಿ ನಗರ ಕೇಂದ್ರ ಗ್ರಂಥಾಲಯದ ಮುಖ್ಯ ಗ್ರಂಥಾಲಯಾಧಿಕಾರಿಯವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
----------
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)
ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ