ಮಂಗಳವಾರ, ಸೆಪ್ಟೆಂಬರ್ 3, 2024
ಸೆ.04 ರಂದು ಸಾರ್ವಜನಿಕರ ಅಹವಾಲು ಸ್ವೀಕಾರ ಹಾಗೂ ಜಿಲ್ಲಾ ಮಟ್ಟದ ದಿಶಾ ಸಮಿತಿ ಸಭೆ
ಬಳ್ಳಾರಿ,ಸೆ.03(ಕರ್ನಾಟಕ ವಾರ್ತೆ):
ಲೋಕಸಭಾ ಸದಸ್ಯರು ಹಾಗೂ ಜಿಲ್ಲಾ ಮಟ್ಟದ ದಿಶಾ ಸಮಿತಿಯ ಅಧ್ಯಕ್ಷರಾದ ಈ.ತುಕಾರಾಂ ಅವರು, ಸೆ.04 ರಂದು ಬೆಳಿಗ್ಗೆ 10 ಗಂಟೆಯಿAದ 11 ಗಂಟೆವರೆಗೆ ಜಿಲ್ಲಾ ಪಂಚಾಯತ್ ನಜೀರ್ ಸಾಬ್ ಸಭಾಂಗಣದಲ್ಲಿ ಕೇಂದ್ರ ಮತ್ತು ಕೇಂದ್ರ ಪುರಸ್ಕೃತ ಯೋಜನೆಗಳ ಕುರಿತ ಸಾರ್ವಜನಿಕರಿಂದ ಅಹವಾಲುಗಳು ಇದ್ದಲ್ಲಿ ಸ್ವೀಕರಿಸುವರು. ಹಾಗಾಗಿ ಕುಂದುಕೊರತೆಗಳಿರುವ ಸಾರ್ವಜನಿಕರು ತಮ್ಮ ಅಹವಾಲು ಸಲ್ಲಿಸಬಹುದು.
ಬಳಿಕ ಬೆಳಿಗ್ಗೆ 11 ಗಂಟೆಗೆ ಜಿಲ್ಲಾ ಮಟ್ಟದ ದಿಶಾ ಸಮಿತಿ ಸಭೆ ನಡೆಸುವರು ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಾಹುಲ್ ಶರಣಪ್ಪ ಸಂಕನೂರ ಅವರು ತಿಳಿಸಿದ್ದಾರೆ.
-----------
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)
ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ