ಸೋಮವಾರ, ಸೆಪ್ಟೆಂಬರ್ 9, 2024
ಸೆ.10 ರಂದು ಎಲ್‌ಪಿಜಿ ಅನಿಲ ಸೋರಿಕೆ ನಿರ್ವಹಣೆ ಅಣಕು ಪ್ರದರ್ಶನ: ಎಡಿಸಿ ಮಹಮ್ಮದ್ ಎನ್.ಝಬೇರ್
ಬಳ್ಳಾರಿ,ಸೆ.09(ಕರ್ನಾಟಕ ವಾರ್ತೆ):
ಹೆದ್ದಾರಿಗಳಲ್ಲಿ ಸಂಚರಿಸುವ ಬೃಹತ್ ವಾಹನಗಳಲ್ಲಿ ಎಲ್‌ಪಿಜಿ ಅನಿಲ ಸೋರಿಕೆ ಸಂದರ್ಭದಲ್ಲಿ ಅವಘಡ ಸಂಭವಿಸಿದಾಗ ತುರ್ತಾಗಿ ಕ್ರಮ ಕೈಗೊಳ್ಳಲು ಎನ್‌ಡಿಆರ್‌ಎಫ್ ತಂಡದಿAದ ಅನಿಲ ಸೋರಿಕೆ ನಿರ್ವಹಣೆಯ ಅಣಕು ಪ್ರದರ್ಶನ ಏರ್ಪಡಿಸಲಾಗಿದೆ ಎಂದು ಮಹಮ್ಮದ್ ಎನ್.ಝುಬೇರ್ ಅವರು ಹೇಳಿದರು.
ನಗರದ ಜಿಲ್ಲಾಧಿಕಾರಿಗಳ ಕಚೇರಿಯ ಕೆಸ್ವಾನ್ ವಿಡೀಯೋ ಸಭಾಂಗಣದಲ್ಲಿ ಕೇಂದ್ರ ಹಾಗೂ ರಾಜ್ಯ ವಿಪತ್ತು ನಿರ್ವಹಣಾ ತಂಡಗಳಿAದ ಎಲ್‌ಪಿಜಿ ಅಣುಕು ಪ್ರದರ್ಶನ ಹಮ್ಮಿಕೊಳ್ಳುವ ಕುರಿತು ವಿವಿಧ ಇಲಾಖೆ ಅಧಿಕಾರಿಗಳೊಡನೆ ಸೋಮವಾರ ಏರ್ಪಡಿಸಿದ್ದ ಪೂರ್ವಭಾವಿ ಸಭೆಯಲ್ಲಿ ಅವರು ಮಾತನಾಡಿದರು.
ಸಾಮಾನ್ಯವಾಗಿ ರಾಜ್ಯ ಮತ್ತು ರಾಷ್ಟಿçÃಯ ಹೆದ್ದಾರಿ ರಸ್ತೆಗಳಲ್ಲಿ ಕಾರ್ಖಾನೆಗಳಿಗೆ ಸರಬರಾಜು ಮಾಡಲು ಹಾಗೂ ಇತರೆ ಬಳಕೆಗಾಗಿ ತುಂಬಿಕೊAಡು ಹೋಗುವ ಬೃಹತ್ ವಾಹನಗಳಲ್ಲಿ ಕಂಡುಬರುವ ಅನಿಲ ಸೋರಿಕೆ ಸಂದರ್ಭದಲ್ಲಿ ಕೈಗೊಳ್ಳಬೇಕಾದ ಕ್ರಮಗಳ ಕುರಿತು ಬಳ್ಳಾರಿ-ಹೊಸಪೇಟೆಯ ನೂತನ ಹೆದ್ದಾರಿಯಲ್ಲಿ ಸೆ.10 ರಂದು ಬೆಳಿಗ್ಗೆ 11 ಗಂಟೆಗೆ ಜಾಗೃತಿ ಮೂಡಿಸುವ ಅಣಕು ಪ್ರದರ್ಶನ ಏರ್ಪಡಿಸಲಾಗಿದೆ ಎಂದು ಅವರು ತಿಳಿಸಿದರು.
ತುರ್ತು ಸಂದರ್ಭದಲ್ಲಿ ಸ್ವರಕ್ಷಣೆ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ಅಗತ್ಯವಾಗಿದ್ದು, ಆಘಾತಕಾರಿ ಘಟನೆಗಳ ಸಂದರ್ಭದಲ್ಲಿ ತೊಂದರೆಗೆ ಒಳಗಾದವರ ರಕ್ಷಣೆಗೆ ಎನ್‌ಡಿಆರ್‌ಎಫ್, ಎಸ್‌ಡಿಆರ್‌ಎಫ್ ಹಾಗೂ ನುರಿತ ತಂಡಗಳು ಸ್ಥಳೀಯರ ಸಹಕಾರದೊಂದಿಗೆ ಕಾರ್ಯಾಚರಣೆ ನಡೆಸಲು ಅನುಕೂಲವಾಗುತ್ತದೆ ಎಂದು ಅವರು ಹೇಳಿದರು.
ಅಣಕು ಪ್ರದರ್ಶನಕ್ಕೆ ವಿವಿಧ ಇಲಾಖೆಗಳು ಸಹಕಾರ ನೀಡಬೇಕು. ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರು ಪಾಲ್ಗೊಳ್ಳಲು ಕ್ರಮವಹಿಸಬೇಕು ಎಂದು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
ಈ ಸಂದರ್ಭದಲ್ಲಿ ಎನ್‌ಡಿಆರ್‌ಎಫ್ ಡೆಪ್ಯೂಟಿ ಕಮಾಂಡೆAಟ್ ಅಖಿಲೇಶ್ ಕುಮಾರ್ ಚೂಬೆ, ಎಎಸ್ಪಿ ಕೆ.ಪಿ.ರವಿಕುಮಾರ್ ಸೇರಿದಂತೆ ಎನ್‌ಡಿಆರ್‌ಎಫ್ ಹಾಗೂ ಎಸ್‌ಡಿಆರ್‌ಎಫ್ ತಂಡದ ಅಧಿಕಾರಿಗಳು ಮತ್ತು ಸಿಬ್ಬಂದಿ ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು, ಖಾಸಗಿ ಕಾರ್ಖಾನೆಗಳ ಅಧಿಕಾರಿಗಳು, ಅಗ್ನಿಶಾಮಕ ಅಧಿಕಾರಿಗಳು ಮತ್ತು ಇನ್ನೀತರರು ಉಪಸ್ಥಿತರಿದ್ದರು.
--------
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)



ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ