ಸೋಮವಾರ, ಸೆಪ್ಟೆಂಬರ್ 9, 2024
ಸೆ.10 ರಂದು ವಿಶ್ವ ಆತ್ಮಹತ್ಯೆ ತಡೆಗಟ್ಟುವ ದಿನಾಚರಣೆ ಕಾರ್ಯಕ್ರಮ
ಬಳ್ಳಾರಿ,ಸೆ.09(ಕರ್ನಾಟಕ ವಾರ್ತೆ):
ಜಿಲ್ಲಾ ಕೇಂದ್ರದಲ್ಲಿ ‘ವಿಶ್ವ ಆತ್ಮಹತ್ಯೆ ತಡೆಗಟ್ಟುವ ದಿನಾಚರಣೆ’ ಜಾಗೃತಿ ವೇದಿಕೆ ಕಾರ್ಯಕ್ರಮವನ್ನು “ಆತ್ಮಹತ್ಯೆ ಬಗ್ಗೆ ಇರುವ ಅಭಿಪ್ರಾಯವನ್ನು ಬದಲಿಸಿ” ಎಂಬ ಘೋಷಣೆಯೊಂದಿಗೆ ಸೆ.10 ರಂದು ಬೆಳಿಗ್ಗೆ 11 ಗಂಟೆಗೆ ನಗರದ ಹಾನಗಲ್ ಶ್ರೀ ಕುಮಾರೇಶ್ವರ ಪಾಲಿಟೆಕ್ನಿಕ್ ಕಾಲೇಜಿನ ಸಭಾಂಗಣದಲ್ಲಿ ಏರ್ಪಡಿಸಲಾಗಿದೆ.
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಆಸ್ಪತ್ರೆ, ಜಿಲ್ಲಾ ಪೊಲೀಸ್ ಇಲಾಖೆ, ಜಿಲ್ಲಾ ಕಾರಾಗೃಹ ಇಲಾಖೆ, ಜಿಲ್ಲಾ ಸಾರ್ವಜನಿಕ ಶಿಕ್ಷಣ ಇಲಾಖೆ, ಜಿಲ್ಲಾ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಜಿಲ್ಲಾ ವಕೀಲರ ಸಂಘ, ಸಮಾಜ ಕಲ್ಯಾಣ ಇಲಾಖೆ, ಅಬಕಾರಿ ಇಲಾಖೆ, ಹಾನಗಲ್ ಶ್ರೀ ಕುಮಾರೇಶ್ವರ ಪಾಲಿಟೆಕ್ನಿಕ್ ಕಾಲೇಜ್ ಹಾಗೂ ಜಿಲ್ಲಾ ಮಾನಸಿಕ ಆರೋಗ್ಯ ಕಾರ್ಯಕ್ರಮ ವಿಭಾಗ ಇವರ ಸಂಯುಕ್ತಾಶ್ರಯದಲ್ಲಿ ಆಯೋಜಿಸಲಾಗಿದೆ.
ಜಿಲ್ಲಾ ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಆಧ್ಯಕ್ಷರೂ ಆದ ಕೆ.ಜಿ.ಶಾಂತಿ ಅವರು ಕಾರ್ಯಕ್ರಮ ಉದ್ಘಾಟಿಸುವರು.
ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಅವರು ಮಾನಸಿಕ ಆರೋಗ್ಯದ ಕುರಿತ ಜಾಗೃತಿ ಪತ್ರ ಬಿಡುಗಡೆ ಮಾಡುವರು.
ವೀರಶೈವ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಅಲ್ಲಂ ಗುರು ಬಸವರಾಜ ಅವರು ಅಧ್ಯಕ್ಷತೆ ವಹಿಸುವರು.
ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹಾಗು ಹಿರಿಯ ಸಿವಿಲ್ ನ್ಯಾಯಾಧೀಶರಾದ ರಾಜೇಶ್ ಎನ್.ಹೊಸಮನೆ ಘನ ಉಪಸ್ಥಿತಿ ಇರುವರು.
ಜಿಲ್ಲಾ ಮಾನಸಿಕ ಆರೋಗ್ಯ ಕಾರ್ಯಕ್ರಮ ಅನುಷ್ಠಾನಾಧಿಕಾರಿ ಹಾಗೂ ಜಿಲ್ಲಾ ಕುಷ್ಠರೋಗ ನಿರ್ಮೂಲನಾಧಿಕಾರಿ ಡಾ.ವೀರೇಂದ್ರ ಕುಮಾರ್.ಕೆ.ಜಿ ಅವರು ಪ್ರಾಸ್ತಾವಿಕವಾಗಿ ಮಾತನಾಡುವರು.
ಜಿಲ್ಲಾ ಮಾನಸಿಕ ಆರೋಗ್ಯ ಕಾರ್ಯಕ್ರಮ ವಿಭಾಗದ ಮನೋರೋಗ ತಜ್ಞರಾದ ಡಾ.ರೋಹನ್ ವನಗುಂದಿ ಅವರು ವಿಶೇಷ ಉಪನ್ಯಾಸ ನೀಡುವರು.
ಜಿಲ್ಲಾ ಪಂಚಾಯತ್‌ನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಾಹುಲ್ ಶರಣಪ್ಪ ಸಂಕನೂರ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಯಲ್ಲಾ ರಮೇಶ್ ಬಾಬು, ಜಿಲ್ಲಾ ಶಸ್ತçಚಿಕಿತ್ಸಕ ಡಾ.ಎನ್.ಬಸರೆಡ್ಡಿ, ಜಿಲ್ಲಾ ಆರೋಗ್ಯ ತರಬೇತಿ ಕೇಂದ್ರ ಪ್ರಾಂಶುಪಾಲರಾದ ಡಾ.ಜಿ.ರಮೇಶ್ ಬಾಬು, ಕೌಲ್‌ಬಜಾರ್ ಪೊಲೀಸ್ ಇನ್ಸ್ಪೆಕ್ಟರ್ ಟಿ.ಶುಭಾಶ್ ಚಂದ್ರ, ಜಿಲ್ಲಾ ರೋಹವಾಹಕ ಆಶ್ರೀತ ರೋಗಗಳ ನಿಯಂತ್ರಣಾಧಿಕಾರಿ ಡಾ.ಆರ್.ಅಬ್ದುಲ್ಲಾ, ಜಿಲ್ಲಾ ಕುಟುಂಬ ಕಲ್ಯಾಣ ಕಾರ್ಯಕ್ರಮ ಅನುಷ್ಠಾನಾಧಿಕಾರಿ ಡಾ.ಪೂರ್ಣಿಮಾ ಕಟ್ಟಿಮನಿ, ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ.ಮರಿಯಂಬಿ.ವಿ.ಕೆ., ಜಿಲ್ಲಾ ಕ್ಷಯರೋಗ ನಿರ್ಮೂಲನಾಧಿಕಾರಿ ಡಾ.ಇಂದ್ರಾಣಿ, ಜಿಲ್ಲಾ ಆರ್‌ಸಿಹೆಚ್ ಡಾ.ಹನುಮಂತಪ್ಪ, ವೀರಶೈವ ವಿದ್ಯಾವರ್ಧಕ ಸಂಘದ ಕಾರ್ಯದರ್ಶಿ ಡಾ.ಅರವಿಂದ ಪಾಟೀಲ್, ಹಾನಗಲ್ ಶ್ರೀ ಕುಮಾರೇಶ್ವರ ಪಾಲಿಟೆಕ್ನಿಕ್ ಕಾಲೇಜ್ ಅಧ್ಯಕ್ಷ ಪಲ್ಲೇದ ಪ್ರಭುಲಿಂಗ ಹಾಗೂ ಕಾಲೇಜಿನ ಪ್ರಾಂಶುಪಾಲರಾದ ಶ್ರೀಶೈಲ ಗೌಡ ಬಾಣಾಪುರ, ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಈಶ್ವರ ದಾಸಪ್ಪನವರ ಸೇರಿದಂತೆ ಇತರರು ಮುಖ್ಯ ಅತಿಥಿಗಳಾಗಿ ಭಾಗವಹಿಸುವರು ಎಂದು ಪ್ರಕಟಣೆ ತಿಳಿಸಿದೆ.
---------
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)
ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ