ಬುಧವಾರ, ಸೆಪ್ಟೆಂಬರ್ 11, 2024

ಸೆ.13 ರಂದು ಬಳ್ಳಾರಿ ನಗರ ವ್ಯಾಪ್ತಿಯಲ್ಲಿ ವಿದ್ಯುತ್ ವ್ಯತ್ಯಯ

ಬಳ್ಳಾರಿ,ಸೆ.11(ಕರ್ನಾಟಕ ವಾರ್ತೆ): ಬಳ್ಳಾರಿ ನಗರ ವ್ಯಾಪ್ತಿಯ 110/11ಕೆ.ವಿ ಸೋಮಸಮುದ್ರ ವಿದ್ಯುತ್ ಉಪ-ಕೇಂದ್ರದ ನಿರ್ವಹಣೆ ಕಾರ್ಯವನ್ನು ತುರ್ತಾಗಿ ಕೈಗೊಳ್ಳುತ್ತಿರುವುರಿಂದÀ 11 ಕೆ.ವಿ. ಫೀಡರ್‌ನಿಂದ ಸರಬರಾಜಾಗುವ ನಗರ ಪ್ರದೇಶಗಳಲ್ಲಿ ಸೆ.13 ರಂದು ಬೆಳಿಗ್ಗೆ 9 ಗಂಟೆಯಿAದ ಸಂಜೆ 6 ಗಂಟೆಯವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಜೆಸ್ಕಾಂನ ನಗರ ಉಪವಿಭಾಗ-2ರ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರು ತಿಳಿಸಿದ್ದಾರೆ. *ವಿದ್ಯುತ್ ವ್ಯತ್ಯಯವಾಗುವ ಪ್ರದೇಶಗಳು*: ಎಫ್-6 ಫೀಡರ್‌ನ ತಾಳೂರು ರಸ್ತೆ, ಸ್ನೇಹ ಕಾಲೋನಿ, ಶ್ರೀನಗರ, ರೇಣುಕಾ ನಗರ, ಭಗತ್‌ಸಿಂಗ್ ನಗರ, ಕನ್ನಡ ನಗರ, ಮಹಾನಂದಿ ಕೊಟ್ಟಂ, ಪಾರ್ವತಿ ನಗರ, ಎಸ್.ಪಿ.ಸರ್ಕಲ್, ಶಾಸ್ತಿçà ನಗರ, ಬ್ಯಾಂಕ್ ಕಾಲೋನಿ, ಬಸವನಕುಂಟೆ, ಸಿರುಗುಪ್ಪ ರಸ್ತೆ, ರಾಮ ನಗರ, ಹವಂಬಾವಿ. ಎಫ್-10 ಫೀಡರ್‌ನ ಅಶೋಕ ನಗರ, ಹವಂಭಾವಿ, ಟಿ.ಎಂ.ಜಿ ಲೇಔಟ್, ರಾಮ ನಗರ, ಜಯನಗರ, ಗಾಯತ್ರಿ ನಗರ, ಭುವನಗಿರಿ ಕಾಲೋನಿ, ವೀರನಗೌಡ ಕಾಲೋನಿ, ಗಣೇಶ ನಗರ. ಎಫ್-14 ಫೀಡರ್‌ನ ಜಿಲ್ಲಾ ಕೋರ್ಟ್ ಸಂಕೀರ್ಣ ಸೇರಿದಂತೆ ಮುಂತಾದ ಪ್ರದೇಶಗಳಲ್ಲಿ ವಿದ್ಯುತ್ ಕಡಿತಗೊಳಿಸಲಾಗುತ್ತದೆ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. -------

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ