ಬುಧವಾರ, ಸೆಪ್ಟೆಂಬರ್ 11, 2024

ಸೆ.17 ರಂದು ಶ್ರೀ ವಿಶ್ವಕರ್ಮ ಜಯಂತ್ಯೋತ್ಸವ

ಬಳ್ಳಾರಿ,ಸೆ.11(ಕರ್ನಾಟಕ ವಾರ್ತೆ): ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಮಹಾನಗರ ಪಾಲಿಕೆ ಇವರ ಸಂಯುಕ್ತಾಶ್ರಯದಲ್ಲಿ ಶ್ರೀ ವಿಶ್ವಕರ್ಮ ಜಯಂತ್ಯೋತ್ಸವ ಕಾರ್ಯಕ್ರಮವನ್ನು ಸೆ.17 ರಂದು ಮಧ್ಯಾಹ್ನ 12 ಗಂಟೆಗೆ ನಗರದ ಡಾ.ಜೋಳದರಾಶಿ ದೊಡ್ಡನಗೌಡ ರಂಗಮAದಿರಲ್ಲಿ ಏರ್ಪಡಿಸಲಾಗಿದೆ. ವಸತಿ ವಕ್ಫ್ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಸಚಿವ ಹಾಗೂ ಬಳ್ಳಾರಿ ಉಸ್ತುವಾರಿ ಸಚಿವರಾದ ಬಿ.ಜೆಡ್.ಜಮೀರ್ ಅಹ್ಮದ್ ಖಾನ್ ಅವರು ಕಾರ್ಯಕ್ರಮ ಉದ್ಘಾಟಿಸುವರು. ಬಳ್ಳಾರಿ ನಗರ ಶಾಸಕ ನಾರಾ ಭರತ್ ರೆಡ್ಡಿ ಅವರು ಅಧ್ಯಕ್ಷತೆ ವಹಿಸುವರು. ಕರ್ನಾಟಕ ಕೈಮಗ್ಗ ಅಭಿವೃದ್ಧಿ ನಿಗಮ ನಿಯಮಿತದ ಅಧ್ಯಕ್ಷ ಹಾಗೂ ಶಾಸಕ ಜೆ.ಎನ್ ಗಣೇಶ್, ಸಂಸದರಾದ ಈ.ತುಕಾರಾಂ, ಕೆ.ರಾಜಶೇಖರ ಬಸವರಾಜ ಹಿಟ್ನಾಳ್, ಡಾ.ಸೈಯದ್ ನಾಸೀರ್ ಹುಸೇನ್, ಶಾಸಕರಾದ ಬಿ.ನಾಗೇಂದ್ರ, ಬಿ.ಎಂ.ನಾಗರಾಜ, ವಿಧಾನಪರಿಷÀತ್ ಶಾಸಕರಾದ ಡಾ.ಚಂದ್ರಶೇಖರ್ ಬಿ.ಪಾಟೀಲ, ಶಶೀಲ್ ನಮೋಶಿ, ವೈ.ಎಂ.ಸತೀಶ್, ಡಾ.ಬಾಬು ಜಗಜೀವನ್‌ರಾಮ್ ಚರ್ಮ ಕೈಗಾರಿಕಾ ಅಭಿವೃದ್ಧಿ ನಿಗಮದ ಅಧ್ಯಕ್ಷ ಮುಂಡರಗಿ ನಾಗರಾಜ, ಮಹಾನಗರ ಪಾಲಿಕೆಯ ಮಹಾಪೌರರಾದ ಮುಲ್ಲಂಗಿ ನಂದೀಶ್, ಬಳ್ಳಾರಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಜೆ.ಎಸ್.ಆಂಜನೇಯಲು, ಜಿಲ್ಲಾ ವಿಶ್ವಕರ್ಮ ವಿಕಾಸ ವೇದಿಕೆಯ ಅಧ್ಯಕ್ಷ ಚಂದ್ರಕಾAತ ಸ.ಸೋನಾರ ಸೇರಿದಂತೆ ಇತರರು ಮುಖ್ಯ ಅತಿಥಿಗಳಾಗಿ ಭಾಗವಹಿಸುವರು. ವಿಜಯನಗರ ಜಿಲ್ಲೆಯ ಹೊಸಪೇಟೆ ತಾಲ್ಲೂಕಿನ ಮರಿಯಮ್ಮನಹಳ್ಳಿಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಸಹಾಯಕ ಪ್ರಾಧ್ಯಾಪಕ ಬಡಿಗೇರ ಮೌನೇಶ ಅವರು ಜಯಂತಿಯ ಕುರಿತು ವಿಶೇಷÀ ಉಪನ್ಯಾಸ ನೀಡುವರು. ಕಂಪ್ಲಿ ತಾಲ್ಲೂಕಿನ ಚಿಕ್ಕಜಾಯಿಗನೂರ ಗ್ರಾಮದ ಪುರುಷೋತ್ತಮ.ಡಿ ಅವರಿಂದ ಭಕ್ತಿ ಸಂಗೀತ ಇರಲಿದೆ. ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಶೋಭರಾಣಿ ವಿ.ಜೆ., ಜಿಲ್ಲಾ ಪಂಚಾಯತ್‌ನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಾಹುಲ್ ಶರಣಪ್ಪ ಸಂಕನೂರ, ಅಪರ ಜಿಲ್ಲಾಧಿಕಾರಿ ಮಹಮ್ಮದ್ ಎನ್.ಝುಬೇರ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಬಿ.ನಾಗರಾಜ ಸೇರಿದಂತೆ ಇತರರು ಉಪಸ್ಥಿತರಿರುವರು. *ಮೆರವಣಿಗೆ:* ಜಯಂತಿಯ ಅಂಗವಾಗಿ ಮೆರವಣಿಗೆಯು ನಡೆಯಲಿದ್ದು, ಅಂದು ಬೆಳಿಗ್ಗೆ 09.30 ಗಂಟೆಗೆ ಕಾಳಿಕಾ ಕಮಠೇಶ್ವರ ದೇವಸ್ಥಾನದಿಂದ ಆರಂಭವಾಗಿ ಮೆರವಣಿಗೆಯು ಬೆಂಗಳೂರು ರಸ್ತೆ, ಹಳೇ ಬ್ರೂಸ್‌ಪೇಟೆ ಪೊಲೀಸ್ ಠಾಣೆ, ತೇರು ಬೀದಿ, ಹೆಚ್.ಆರ್.ಗವಿಯಪ್ಪ ವೃತ್ತದಿಂದ ಜೋಳದರಾಶಿ ದೊಡ್ಡನಗೌಡ ರಂಗಮAದಿರದ ವೇದಿಕೆ ಕಾರ್ಯಕ್ರಮದವರೆಗೆ ಸಾಗಿ ಬರಲಿದೆ. --------

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ