ಗುರುವಾರ, ಸೆಪ್ಟೆಂಬರ್ 19, 2024

ಸೆ.20 ರಂದು ವಿವಿಧ ಕಾರ್ಮಿಕ ಕಾಯ್ದೆಗಳ ಕುರಿತು ಜಿಲ್ಲಾ ಮಟ್ಟದ ಕಾರ್ಯಾಗಾರ

ಬಳ್ಳಾರಿ,ಸೆ.19(ಕರ್ನಾಟಕ ವಾರ್ತೆ): ಜಿಲ್ಲಾ ಕಾರ್ಮಿಕ ಇಲಾಖೆ ವತಿಯಿಂದ ಜಿಲ್ಲೆಯ ಉದ್ಯೋಗದಾತರಿಗೆ, ಗುತ್ತಿಗೆದಾರರಿಗೆ, ಸಂಘಟಿತ ಮತ್ತು ಅಸಂಘಟಿತ ಕಾರ್ಮಿಕ ಸಂಘಟನೆಗಳ ಪದಾಧಿಕಾರಿಗಳಿಗೆ ಹಾಗೂ ಕಾರ್ಮಿಕರಿಗೆ ವಿವಿಧ ಕಾರ್ಮಿಕ ಕಾಯ್ದೆಗಳ ಪರಿಣಾಮಕಾರಿ ಅನುಷ್ಠಾನದ ಕುರಿತು ಸೆ.20 ರಂದು ಬೆಳಿಗ್ಗೆ 10.30 ಗಂಟೆಗೆ ನಗರದ ಗಣೇಶ ದೇವಸ್ಥಾನ ಸ್ಟಿçÃಟ್‌ನ ಕೊಟ್ಟೂರು ಸ್ವಾಮಿ ಮಠ ಕಾಂಪ್ಲೆಕ್ಸ್ನಲ್ಲಿ ಜಿಲ್ಲಾ ಮಟ್ಟದ ಕಾರ್ಯಾಗಾರ ಹಮ್ಮಿಕೊಳ್ಳಲಾಗಿದೆ. ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಕಾರ್ಮಿಕ ಇಲಾಖೆ, ಕಾರ್ಖಾನೆಗಳು, ಬಾಯ್ಲರುಗಳು ಕೈಗಾರಿಕಾ ಸುರಕ್ಷತೆ ಮತ್ತು ಸ್ವಾಸ್ಥö್ಯ ಇಲಾಖೆ, ಕಾರ್ಮಿಕರ ರಾಜ್ಯ ವಿಮಾ ಯೋಜನೆ ವೈದ್ಯಕೀಯ ಸೇವೆ, ಜಿಲ್ಲಾ ಕಾರ್ಮಿಕರ ಭವಿಷ್ಯ ನಿಧಿ ಸಂಘಟನೆ ಹಾಗೂ ವಿವಿಧ ಇಲಾಖೆಗಳ ಸಂಯುಕ್ತಾಶ್ರಯದಲ್ಲಿ ಆಯೋಜಿಸಲಾಗಿದೆ. ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶರಾದ ರಾಜೇಶ್ ಎನ್.ಹೊಸಮನೆ ಅವರು ಕಾರ್ಯಾಗಾರ ಉದ್ಘಾಟಿಸುವರು. ಬಳ್ಳಾರಿ ಉಪ ವಿಭಾಗದ ಕಾರ್ಮಿಕ ಅಧಿಕಾರಿ ಸಿದ್ದಪ್ಪ ಜಿ.ಖೈನೂರು ಅವರು ಅಧ್ಯಕ್ಷತೆ ವಹಿಸುವರು. ದಾವಣಗೆರೆಯ ಬಳ್ಳಾರಿ ವಿಭಾಗದ ಸಹಾಯಕ ಕಾರ್ಮಿಕ ಆಯುಕ್ತ ಡಾ.ಅವಿನಾಶ್ ನಾಯ್ಕ, ಕಾರ್ಖಾನೆಗಳು, ಬಾಯ್ಲರುಗಳು ಕೈಗಾರಿಕಾ ಸುರಕ್ಷತೆ ಮತ್ತು ಸ್ವಾಸ್ಥö್ಯ ಇಲಾಖೆಯ ಕಾರ್ಖಾನೆಗಳ ಹಿರಿಯ ಸಹಾಯಕ ನಿರ್ದೇಶಕ ವರುಣ.ಆರ್., ಕಾರ್ಮಿಕರ ರಾಜ್ಯ ವಿಮಾ ಯೋಜನೆ ವೈದ್ಯಕೀಯ ಸೇವೆಯ ಶಾಖಾ ವ್ಯವಸ್ಥಾಪಕ ಶಿವಕುಮಾರ್, ಕಾರ್ಮಿಕ ಭವಿಷ್ಯ ನಿಧಿ ಸಂಘಟನೆಯ ಅನುಷ್ಠಾನಾಧಿಕಾರಿ ಟಿ.ಮಾಲತಿ, ಕಾರ್ಮಿಕ ನಿರೀಕ್ಷಕರಾದ 1ನೇ ವೃತ್ತದ ರಮೇಶ್.ಜಿ., 2ನೇ ವೃತ್ತದ ಪರಶುರಾಮ್.ಎನ್.ಎಸ್., ಸಂಡೂರು ವೃತ್ತದ ಕಾರ್ಮಿಕ ನಿರೀಕ್ಷಕ ಮಂಜುನಾಥ್.ಟಿ., ಸಿರುಗುಪ್ಪ ವೃತ್ತ ಕಾರ್ಮಿಕ ನಿರೀಕ್ಷಕ ತಿರುಮಲೇಶ, ಜಿಲ್ಲಾ ಬಾಲ ಕಾರ್ಮಿಕ ಯೋಜನೆಯ ಯೋಜನಾ ನಿರ್ದೇಶಕ ಎ.ಮೌನೇಶ ಸೇರಿದಂತೆ ಕಾರ್ಮಿಕ ಇಲಾಖೆಯ ಎಲ್ಲಾ ಸಿಬ್ಬಂದಿ ವರ್ಗದವರು ಉಪಸ್ಥಿತರಿರುವರು ಎಂದು ಪ್ರಕಟಣೆ ತಿಳಿಸಿದೆ. ---------

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ