ಗುರುವಾರ, ಸೆಪ್ಟೆಂಬರ್ 19, 2024
ಸೆ.21 ರಂದು ‘ತಿಂಗಳ ಸೊಬಗು’ ಸಾಂಸ್ಕೃತಿಕ ಕಾರ್ಯಕ್ರಮ
ಬಳ್ಳಾರಿ,ಸೆ.19(ಕರ್ನಾಟಕ ವಾರ್ತೆ):
ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗು ಸಾಂಸ್ಕೃತಿಕ ಸಮುಚ್ಚಯ ನಿರ್ವಹಣಾ ಸಮಿತಿ ವತಿಯಿಂದ “ತಿಂಗಳ ಸೊಬಗು” ಸಾಂಸ್ಕೃತಿಕ ಕಾರ್ಯಕ್ರಮವನ್ನು ಸೆ.21 ರಂದು ಸಂಜೆ 6.30 ಗಂಟೆಗೆ ನಗರದ ಡಾ.ರಾಜ್‌ಕುಮಾರ್ ರಸ್ತೆಯ ಸಾಂಸ್ಕೃತಿಕ ಸಮುಚ್ಚಯ ಆವರಣದ ನಾಡೋಜ ಸುಭದ್ರಮ್ಮ ಬಯಲು ರಂಗಮAದಿರದಲ್ಲಿ ಆಯೋಜಿಸಲಾಗಿದೆ.
ಈ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಸರ್ಕಾರಿ ಬಾಲಕಿಯರ ಬಾಲ ಮಂದಿರ ವತಿಯಿಂದ ಜಾನಪದ ನೃತ್ಯ ಇರಲಿದೆ. ಬಳ್ಳಾರಿ ತಾಲ್ಲೂಕಿನ ಇಬ್ರಾಹಿಂಪುರ ಗ್ರಾಮದ ಎಸ್.ಹೆಚ್ ಹುಲುಗಪ್ಪ ಮತ್ತು ಸಂಗಡಿಗರು ಜಾನಪದ ಗೀತೆಗಳನ್ನು ಪ್ರಸ್ತುತ ಪಡಿಸುವರು.
ಬಳ್ಳಾರಿಯ ಶ್ರೀ ಲಕ್ಷಿö್ಮ ಕಲಾ ಟ್ರಸ್ಟ್ ವತಿಯಿಂದ ಕೂಚುಪುಡಿ ಮತ್ತು ಭರತನಾಟ್ಯ ಸಾಂಸ್ಕೃತಿಕ ಕಾರ್ಯಕ್ರಮಗಳು ಸಾದರಪಡಲಿವೆ.
ಸ್ಥಳೀಯ ಮಟ್ಟದ ಕಲಾ ಪ್ರತಿಭೆಗಳನ್ನು ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಪ್ರತಿ ತಿಂಗಳ ಮೂರನೇ ಶನಿವಾರ “ತಿಂಗಳ ಸೊಬಗು” ಸಾಂಸ್ಕೃತಕ ಕಾರ್ಯಕ್ರಮ ಆಯೋಜಿಸಲಾಗುತ್ತಿದ್ದು, ಕಲಾ ಪ್ರೇಕ್ಷರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಯಶಸ್ವಿಗೊಳಿಸಬೇಕು ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಬಿ.ನಾಗರಾಜ ಅವರು ಕೋರಿದ್ದಾರೆ.
--------
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)

ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ