ಗುರುವಾರ, ಸೆಪ್ಟೆಂಬರ್ 19, 2024

ಸೆ.21 ರಂದು ಜಿಲ್ಲಾ ಸಲಹಾ ಸಮಿತಿ ಸಭೆ

ಬಳ್ಳಾರಿ,ಸೆ.19(ಕರ್ನಾಟಕ ವಾರ್ತೆ): ಗರ್ಭಪೂರ್ವ ಮತ್ತು ಪ್ರಸವಪೂರ್ವ ಭ್ರೂಣ ಲಿಂಗ ಪತ್ತೆ ತಂತ್ರ ವಿಧಾನಗಳ (ಲಿಂಗ ಆಯ್ಕೆ ನಿಷೇಧ) ಪಿಸಿ ಮತ್ತು ಪಿಎನ್‌ಡಿಟಿ ಕಾಯ್ದೆ 1994 ಕುರಿತು ಸೆ.21 ರಂದು ಸಂಜೆ 04 ಗಂಟೆಗೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಜಿಲ್ಲಾ ಸಲಹಾ ಸಮಿತಿ ಸಭೆ ಆಯೋಜಿಸಲಾಗಿದೆ ಎಂದು ಪಿಸಿ ಮತ್ತು ಪಿಎನ್‌ಡಿಟಿ ಕಾಯ್ದೆಯ ಜಿಲ್ಲಾ ನೋಡೆಲ್ ಅಧಿಕಾರಿ ಹಾಗೂ ಜಿಲ್ಲಾ ಕುಟುಂಬ ಕಲ್ಯಾಣಾಧಿಕಾರಿಯವರು ತಿಳಿಸಿದ್ದಾರೆ. --------

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ