ಶನಿವಾರ, ಸೆಪ್ಟೆಂಬರ್ 21, 2024
ಸೆ.24 ರಂದು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗಗಳ ಜನಾಂಗದವರ ಕುಂದು-ಕೊರತೆ ಸಭೆ
ಬಳ್ಳಾರಿ,ಸೆ.21(ಕರ್ನಾಟಕ ವಾರ್ತೆ):
ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಅವರ ಅಧ್ಯಕ್ಷತೆಯಲ್ಲಿ ಸೆ.24 ರಂದು ಬೆಳಿಗ್ಗೆ 11 ಗಂಟೆಗೆ ನೂತನ ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗಗಳ ಜನಾಂಗದವರ ಕುಂದುಕೊರತೆಗಳ ಸಭೆಯನ್ನು ಆಯೋಜಿಸಲಾಗಿದೆ ಎಂದು ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕ ಮಲ್ಲಿಕಾರ್ಜುನ ಅವರು ತಿಳಿಸಿದ್ದಾರೆ.
ಜಿಲ್ಲೆಯ ಪರಿಶಿಷ್ಟ ಜಾತಿಯ ಜನರು ತಮ್ಮ ಸಮಸ್ಯೆಗಳ ಕುರಿತು ಅಹವಾಲು ಅಥವಾ ಮನವಿ ಪತ್ರಗಳಿದ್ದಲ್ಲಿ ಬಳ್ಳಾರಿ, ಸಿರುಗುಪ್ಪ, ಸಂಡೂರು ತಾಲ್ಲೂಕುಗಳ ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರ ಕಚೇರಿಗೆ ಮತ್ತು ಪರಿಶಿಷ್ಟ ವರ್ಗಗಳ ಜನರು ತಮ್ಮ ಸಮಸ್ಯೆಗಳÀ ಕುರಿತು ಅಹವಾಲು ಅಥವಾ ಮನವಿ ಪತ್ರಗಳಿದ್ದಲ್ಲಿ ಬಳ್ಳಾರಿ, ಸಿರುಗುಪ್ಪ ಮತ್ತು ಸಂಡೂರು ತಾಲ್ಲೂಕುಗಳ ತಾಲ್ಲೂಕು ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯ ಕಚೇರಿಗಳಿಗೆ ಸೆ.23 ರಂದು ಸಂಜೆ 4.00 ಗಂಟೆಯೊಳಗೆ ಸಲ್ಲಿಸಬೇಕು.
ಸೆ.24 ರಂದು ಬೆಳಿಗ್ಗೆ 11 ಗಂಟೆಗೆ ನಡೆಯುವ ಕುಂದುಕೊರತೆಗಳ ಸಭೆಗೆ ಜಿಲ್ಲೆಯ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗಗಳ ಸಂಘದ ಮುಖ್ಯಸ್ಥರು, ಸದಸ್ಯರು, ದಲಿತ ಮುಖಂಡರು ಹಾಜರಾಗಬೇಕು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
---------
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)
ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ