ಶನಿವಾರ, ಸೆಪ್ಟೆಂಬರ್ 21, 2024

ಸೆ.25 ರಂದು ಜಿಲ್ಲಾ ಮಟ್ಟದ ಜಾಥಾ ಕಾರ್ಯಕ್ರಮ ಮತ್ತು ಸಮಾವೇಶ

ಬಳ್ಳಾರಿ,ಸೆ.21(ಕರ್ನಾಟಕ ವಾರ್ತೆ): ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾಮಕ್ಕಳ ರಕ್ಷಣಾ ಘಟಕ, ರೀಡ್ಸ್ ಸಂಸ್ಥೆ, ಮಕ್ಕಳ ವಿಶೇಷ ಪೊಲೀಸ್ ಘಟಕ ಇವರ ಸಂಯುಕ್ತಾಶ್ರಯದಲ್ಲಿ ಸೆ.25 ರಂದು ಬಾಲ್ಯವಿವಾಹ ನಿಷೇಧ, ಪೋಕ್ಸೋ ಕಾಯ್ದೆ, ಮಕ್ಕಳ ಮೇಲಿನ ದೌರ್ಜನ್ಯ ಲಿಂಗ ತಾರತಮ್ಯ ಮತ್ತು ಬಾಲಕಾರ್ಮಿಕರ ಪದ್ಧತಿ ವಿರೋಧ ಕುರಿತು ಜಿಲ್ಲಾ ಮಟ್ಟದ ಜಾಥಾ ಮತ್ತು ಸಮಾವೇಶ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಸೆ.25 ರಂದು ಬೆಳಿಗ್ಗೆ 10 ಗಂಟೆಗೆ ನಗರದ ಎಸ್‌ಪಿ ಕಚೇರಿ ಬಳಿಯಿಂದ ಜಾಥಾ ನಡೆಯಲಿದ್ದು, ಜಾಥಾಗೆ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರೂ ಆದ ಕೆ.ಜಿ.ಶಾಂತಿ ಅವರು ಚಾಲನೆ ನೀಡುವರು. ಬಳಿಕ ನಗರದ ಡಾ.ರಾಜ್‌ಕುಮಾರ್ ರಸ್ತೆಯ ಬಿಡಿಎಎ ಸಭಾಂಗಣದಲ್ಲಿ ಸಮಾವೇಶ ಕಾರ್ಯಕ್ರಮ ನಡೆಯಲಿದ್ದು, ಕಾರ್ಯಕ್ರಮವನ್ನು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಶೋಭರಾಣಿ.ವಿ.ಜೆ ಅವರು ಉದ್ಘಾಟಿಸಿವರು. ರೀಡ್ಸ್ ಸಂಸ್ಥೆ ಕಾರ್ಯನಿರ್ವಾಹಕ ನಿರ್ದೇಶಕ ಸಿ.ತಿಪ್ಪೇಶಪ್ಪ ಅವರು ಅಧ್ಯಕ್ಷತೆ ವಹಿಸಿವರು. ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯರು ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶರಾದ ರಾಜೇಶ್ ಎನ್.ಹೊಸಮನಿ, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಹಾಗೂ ಮಕ್ಕಳ ವಿಶೇಷ ಪೊಲೀಸ್ ಘಟಕದ ನೋಡಲ್ ಅಧಿಕಾರಿ ಕೆ.ಪಿ.ರವಿಕುಮಾರ್, ಹೆಚ್ಚುವರಿ ಪೊಲೀಸ್ ಅಧೀಕ್ಷಕ ನವೀನ ಕುಮಾರ್, ಡಿವೈಎಸ್‌ಪಿ ಹಾಗೂ ಎಸ್‌ಜೆಪಿಯು ಹಿರಿಯ ಮಕ್ಕಳ ಕಲ್ಯಾಣಾಧಿಕಾರಿ ಚಂದ್ರಕಾAತ ನಂದಾ ರೆಡ್ಡಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕ ವಿಜಯಕುಮಾರ್.ಕೆ.ಎಚ್., ಜಿಲ್ಲಾಮಕ್ಕಳ ರಕ್ಷಣಾ ಘಟಕದ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಎಳೆ ನಾಗಪ್ಪ, ಪದವಿಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಟಿ.ಪಾಲಾಕ್ಷ ಅವರು ಮುಖ್ಯ ಅತಿಥಿಗಳಾಗಿ ಭಾಗವಹಿಸುವರು. ಸಂಪನ್ಮೂಲ ವ್ಯಕ್ತಿಗಳಾಗಿ ವಕೀಲರಾದ ಶಿವಲೀಲಾ, ನಿವೃತ್ತ ತಾಲ್ಲೂಕು ವೈದ್ಯಾಧಿಕಾರಿ ಡಾ.ಮೋಹನ ಕುಮಾರಿ, ಕೌಲ್‌ಬಜಾರ್ ಪೊಲೀಸ್ ಠಾಣೆಯ ಪೊಲೀಸ್ ಇನ್ಸ್ಪೆಕ್ಟರ್ ಸುಭಾಷ್ ಚಂದ್ರ, ಗಾಂಧಿನಗರ ಪೊಲೀಸ್ ಠಾಣೆಯ ಪೊಲೀಸ್ ಇನ್ಸ್ಪೆಕ್ಟರ್ ಸಿದ್ದರಾಮೇಶ್ವರ ಕಡೇದ, ಬಳ್ಳಾರಿ ಸಂಚಾರಿ ಪೊಲೀಸ್ ಠಾಣೆಯ ಪೊಲೀಸ್ ಇನ್ಸ್ಪೆಕ್ಟರ್ ಅಯ್ಯನಗೌಡ ಪಾಟೀಲ್ ಸೇರಿದಂತೆ ಮಕ್ಕಳು, ಯುವಕ-ಯುವತಿಯರು ಮತ್ತು ಸ್ವ-ಸಹಾಯ ಸಂಘದ ಮಹಿಳೆಯರು ಭಾಗವಹಿಸುವರು ಎಂದು ಪ್ರಕಟಣೆ ತಿಳಿಸಿದೆ. ----------

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ