ಶುಕ್ರವಾರ, ಸೆಪ್ಟೆಂಬರ್ 20, 2024

ಸೆ. 27 ರಂದು ಬಳ್ಳಾರಿಗೆ ಕರ್ನಾಟಕ ವಿಧಾನಮಂಡಲದ ಎಸ್‌ಸಿ-ಎಸ್‌ಟಿ ಕಲ್ಯಾಣ ಸಮಿತಿ ಭೇಟಿ

ಬಳ್ಳಾರಿ,ಸೆ.20(ಕರ್ನಾಟಕ ವಾರ್ತೆ): ಕರ್ನಾಟಕ ವಿಧಾನಮಂಡಲದ ಅನುಸೂಚಿತ ಜಾತಿ ಮತ್ತು ಅನುಸೂಚಿತ ಪಂಗಡಗಳ ಕಲ್ಯಾಣ ಸಮಿತಿಯ ಅಧ್ಯಕ್ಷರಾದ ಪಿ.ಎಂ.ನರೇAದ್ರ ಸ್ವಾಮಿ ಇವರ ನೇತೃತ್ವದ 19 ಜನ ಸದಸ್ಯರನ್ನೊಳಗೊಂಡ ಸಮಿತಿಯು ಇದೇ ಸೆಪ್ಟೆಂಬರ್ 27 ರಂದು ಬಳ್ಳಾರಿ ಜಿಲ್ಲೆಗೆ ಭೇಟಿ ನೀಡಲಿದೆ ಎಂದು ಕರ್ನಾಟಕ ವಿಧಾನಸಭೆ ಸಚಿವಾಲಯದ ಕಾರ್ಯದರ್ಶಿ ಎಂ.ಕೆ.ವಿಶಾಲಾಕ್ಷಿ ತಿಳಿಸಿದ್ದಾರೆ. ಈ ಸಮಿತಿಯು ಬಳ್ಳಾರಿ ಜಿಲ್ಲೆಯಲ್ಲಿ ಪರಿಶಿಷÀ್ಟ ಜಾತಿ ಮತ್ತು ಪರಿಶಿಷÀ್ಟ ಪಂಗಡದ ಸಮುದಾಯದವರ ಅಭಿವೃದ್ಧಿ, ಕಲ್ಯಾಣ, ಏಳಿಗೆಗೆ ಹಮ್ಮಿಕೊಂಡಿರುವ ಕಾರ್ಯಕ್ರಮಗಳು ಹಾಗೂ ಯೋಜನೆಗಳ ಕುರಿತು ಪ್ರಗತಿ ಪರಿಶೀಲನಾ ಸಭೆ ನಡೆಸಿ ಚರ್ಚೆ ನಡೆಸಲಿದೆ. ಸಮಿತಿಯು ಸೆಪ್ಟೆಂಬರ್ 27 ರಂದು ಬಳ್ಳಾರಿ ಜಿಲ್ಲೆಗೆ ಆಗಮಿಸಲಿದ್ದು, ಅಂದು ಬೆಳಿಗ್ಗೆ 10.30 ಗಂಟೆಗೆ ಕೋಟೆ ಪ್ರದೇಶದ ಜಿಲ್ಲಾ ಪಂಚಾಯತ್‌ನ ಅಬ್ದುಲ್ ನಜೀರ್ ಸಾಬ್ ಸಭಾಂಗಣದಲ್ಲಿ ಪ್ರಗತಿ ಪರಿಶೀಲನಾ ಸಭೆ ನಡೆಸಲಿದೆ. *ಮನವಿ ಸಲ್ಲಿಕೆ:* ಜಿಲ್ಲೆ ವ್ಯಾಪಿಯ ಅನುಸೂಚಿತ ಜಾತಿ ಮತ್ತು ಅನುಸೂಚಿತ ಪಂಗಡ ಸಮುದಾಯದವರ ಸಮಸ್ಯೆಗಳಿಗೆ ಸಂಬAಧಿಸಿದAತೆ, ಸಂಘ ಸಂಸ್ಥೆ ಮತ್ತು ಸಮುದಾಯದ ಜನಸಾಮಾನ್ಯರಿಂದ ಸಾರ್ವಜನಿಕ ಹಿತಾಸಕ್ತಿಯುಳ್ಳ ಸಮಿತಿಗೆ ಮನವಿಗಳನ್ನು ಸಲ್ಲಿಸಬಹುದು, ಸಲ್ಲಿಸುವ ಮನವಿಗಳನ್ನು ಸಮಿತಿಯ ಪರವಾಗಿ ಜಿಲ್ಲಾಧಿಕಾರಿಗಳು ಸ್ವೀಕರಿಸಲಿದ್ದು, ಪ್ರಗತಿ ಪರಿಶೀಲನಾ ಸಭೆಯಂದು ಸಮಿತಿ ಅಧ್ಯಕ್ಷರಿಗೆ ಪ್ರಸ್ತುತ ಪಡಿಸಲಿದ್ದಾರೆ. ಪಿ.ಎಂ. ನರೇಂದ್ರಸ್ವಾಮಿ ನೇತೃತ್ವದ ಈ ಸಮಿತಿಯಲ್ಲಿ ವಿಧಾನಮಂಡಲದ ಸದಸ್ಯರುಗಳಾದ ಬಿ.ಜಿ. ಗೋವಿಂದಪ್ಪ, ಐಹೊಳೆ ದುರ್ಯೋಧನ ಮಹಾಲಿಂಗಪ್ಪ, ಅಬ್ಬಯ್ಯ ಪ್ರಸಾದ, ಎಸ್.ಎನ್. ನಾರಾಯಣಸ್ವಾಮಿ ಕೆ.ಎಂ., ಮಾನಪ್ಪ ಡಿ. ವಜ್ಜಲ, ಬಸನಗೌಡ ದದ್ದಲ, ಅನಿಲ್ ಚಿಕ್ಕಮಾದು, ಬಸವರಾಜ್ ಮತ್ತಿಮೂಡ್, ಎನ್. ಶ್ರೀನಿವಾಸಯ್ಯ, ಕೆ.ಸಿ. ವೀರೇಂದ್ರ ಪಪ್ಪಿ, ಪ್ರಕಾಶ ಕೋಳಿವಾಡ, ಕೃಷ್ಣ ನಾಯಕ, ಸಿಮೆಂಟ್ ಮಂಜು, ಕರೆಮ್ಮ, ಶಾಂತರಾಮ್ ಬುಡ್ನ ಸಿದ್ದಿ, ರಾಜೇಂದ್ರ ರಾಜಣ್ಣ, ವೈ.ಎಂ. ಸತೀಶ್ ಹಾಗೂ ಜಗದೇವ್ ಗುತ್ತೇದಾರ್ ಅವರು ಉಪಸ್ಥಿತರಿರುವರು. ---------

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ