ಬುಧವಾರ, ಸೆಪ್ಟೆಂಬರ್ 25, 2024

ಸೆ.27 ರಂದು ವಿಶ್ವ ಪ್ರವಾಸೋದ್ಯಮ ದಿನಾಚರಣೆ ಕಾರ್ಯಕ್ರಮ

ಬಳ್ಳಾರಿ,ಸೆ.25(ಕರ್ನಾಟಕ ವಾರ್ತೆ): ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಪ್ರವಾಸೋದ್ಯಮ ಇಲಾಖೆ ಹಾಗೂ ಹೋಟೆಲ್ ಮಾಲೀಕರ ಸಂಘದ ಸಹಯೋಗದೊಂದಿಗೆ ಸೆ.27 ರಂದು ಸಂಜೆ 4 ಗಂಟೆಗೆ ನಗರದ ಐತಿಹಾಸಿಕ ಕೋಟೆ ಮುಂಭಾಗದಲ್ಲಿ ವಿಶ್ವ ಪ್ರವಾಸೋದ್ಯಮ ದಿನಾಚರಣೆ ಕಾರ್ಯಕ್ರಮ ಏರ್ಪಡಿಸಲಾಗಿದೆ. ವಸತಿ ವಕ್ಫ್ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಸಚಿವ ಹಾಗೂ ಬಳ್ಳಾರಿ ಉಸ್ತುವಾರಿ ಸಚಿವರಾದ ಬಿ.ಜೆಡ್.ಜಮೀರ್ ಅಹ್ಮದ್ ಖಾನ್ ಅವರು ಕಾರ್ಯಕ್ರಮ ಉದ್ಘಾಟಿಸುವರು. ಬಳ್ಳಾರಿ ಗ್ರಾಮೀಣ ಕ್ಷೇತ್ರದ ಶಾಸಕ ಬಿ.ನಾಗೇಂದ್ರ ಅವರು ಅಧ್ಯಕ್ಷತೆ ವಹಿಸುವರು. ಕರ್ನಾಟಕ ಕೈಮಗ್ಗ ಅಭಿವೃದ್ಧಿ ನಿಗಮ ನಿಯಮಿತದ ಅಧ್ಯಕ್ಷ ಹಾಗೂ ಶಾಸಕ ಜೆ.ಎನ್ ಗಣೇಶ್, ಸಂಸದರಾದ ಈ.ತುಕಾರಾಂ, ಕೆ.ರಾಜಶೇಖರ ಬಸವರಾಜ ಹಿಟ್ನಾಳ್, ಡಾ.ಸೈಯದ್ ನಾಸೀರ್ ಹುಸೇನ್, ಶಾಸಕರಾದ ನಾರಾ ಭರತ್ ರೆಡ್ಡಿ, ಬಿ.ಎಂ.ನಾಗರಾಜ, ವಿಧಾನಪರಿಷÀತ್ ಶಾಸಕರಾದ ಡಾ.ಚಂದ್ರಶೇಖರ್ ಬಿ.ಪಾಟೀಲ, ಶಶೀಲ್ ನಮೋಶಿ, ವೈ.ಎಂ.ಸತೀಶ್, ಡಾ.ಬಾಬು ಜಗಜೀವನ್‌ರಾಮ್ ಚರ್ಮ ಕೈಗಾರಿಕಾ ಅಭಿವೃದ್ಧಿ ನಿಗಮದ ಅಧ್ಯಕ್ಷ ಮುಂಡರಗಿ ನಾಗರಾಜ, ಮಹಾನಗರ ಪಾಲಿಕೆಯ ಮಹಾಪೌರರಾದ ಮುಲ್ಲಂಗಿ ನಂದೀಶ್, ಬಳ್ಳಾರಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಜೆ.ಎಸ್.ಆಂಜನೇಯಲು ಸೇರಿದಂತೆ ಇತರರು ಮುಖ್ಯ ಅತಿಥಿಗಳಾಗಿ ಭಾಗವಹಿಸುವರು. ಪ್ರವಾಸೋದ್ಯಮ ಇಲಾಖೆಯ ಸರ್ಕಾರದ ಕಾರ್ಯದರ್ಶಿ ಸಲ್ಮಾ.ಕೆ ಫಾಹಿಮ್, ಪ್ರವಾಸೋದ್ಯಮ ಇಲಾಖೆಯ ನಿರ್ದೇಶಕ ಡಾ.ರಾಜೇಂದ್ರ ಕೆ.ವಿ., ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಶೋಭರಾಣಿ ವಿ.ಜೆ., ಜಿಲ್ಲಾ ಪಂಚಾಯತ್‌ನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಾಹುಲ್ ಶರಣಪ್ಪ ಸಂಕನೂರ, ಪ್ರವಾಸೋದ್ಯಮ ಇಲಾಖೆಯ ಉಪ ನಿರ್ದೇಶಕ ಪ್ರಭುಲಿಂಗ.ಎಸ್ ತಳಕೇರಿ ಸೇರಿದಂತೆ ಇತರರು ಉಪಸ್ಥಿತರಿರುವರು ಎಂದು ಪ್ರಕಟಣೆ ತಿಳಿಸಿದೆ. -------------

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ