ಗುರುವಾರ, ಸೆಪ್ಟೆಂಬರ್ 26, 2024

ವಿಶ್ವ ರೇಬಿಸ್ ದಿನಾಚರಣೆ; ಸೆ.27 ರಂದು ಜನಜಾಗೃತಿ ಜಾಥಾ ಕಾರ್ಯಕ್ರಮ

ಬಳ್ಳಾರಿ,ಸೆ.26(ಕಿರ್ನಾಟಕ ವಾತರ್ರ): ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಸರ್ವೇಕ್ಷಣಾ ಘಟಕ ಇವರ ಸಂಯುಕ್ತಾಶ್ರಯದಲ್ಲಿ ವಿಶ್ವ ರೇಬಿಸ್ ದಿನಾಚರಣೆ ಅಂಗವಾಗಿ “ರೇಬಿಸ್ ಗಡಿಗಳನ್ನು ಮೀರಿ ಮುಂದುವರೆಯೋಣ” ಎಂಬ ಘೋಷವಾಕ್ಯದೊಂದಿಗೆ ಸೆ.27 ರಂದು ಬೆಳಿಗ್ಗೆ 08.30 ಗಂಟೆಗೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ ಕಚೇರಿ ಮುಂಭಾಗದಿAದ ಜನಜಾಗೃತಿ ಜಾಥಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಯಲ್ಲಾ ರಮೇಶ್ ಬಾಬು ಅವರು ಚಾಲನೆ ನೀಡುವರು. ಜಿಲ್ಲಾ ಶಸ್ತçಚಿಕಿತ್ಸಕ ಬಸರೆಡ್ಡಿ.ಎನ್ ಅವರು ಅಧ್ಯಕ್ಷತೆ ವಹಿಸುವರು. ಜಿಲ್ಲಾ ಸರ್ವೇಕ್ಷಣಾ ಘಟಕದ ಜಿಲ್ಲಾ ಸರ್ವೇಕ್ಷಣಾಧಿಕಾರಿ ಎನ್.ಆರ್.ಸಿ.ಪಿಯ ಕಾರ್ಯಕ್ರಮಾಧಿಕಾರಿ ಡಾ.ಮರಿಯಂಬಿ ವಿ.ಕೆ ಕಾರ್ಯಕ್ರಮದ ಕುರಿತು ಪ್ರಾಸ್ತಾವಿಕ ನುಡಿ ಹೇಳುವರು. ಪಶುಪಾಲನ ಮತ್ತು ಪಶುವೈದ್ಯಕೀಯ ಇಲಾಖೆಯ ಉಪನಿರ್ದೇಶಕ ವಿನೋದ್ ಕುಮಾರ್, ಜಿಲ್ಲಾ ತರಬೇತಿ ಕೇಂದ್ರದ ಪ್ರಾಂಶುಪಾಲರಾದ ಜಿ.ರಮೇಶ್ ಬಾಬು, ಜಿಲ್ಲಾ ಕುಟುಂಬ ಕಲ್ಯಾಣಾಧಿಕಾರಿ ಡಾ.ಪೂರ್ಣಿಮ ಕಟ್ಟಿಮನಿ, ಜಿಲ್ಲಾ ರೋಗವಾಹಕ ಆಶ್ರೀತ ರೋಗಗಳ ನಿಯಂತ್ರಣಾಧಿಕಾರಿ ಡಾ.ಅಬ್ದುಲ್ಲಾ.ಆರ್., ಕ್ಷಯರೋಗ ನಿಯಂತ್ರಣಾಧಿಕಾರಿ ಡಾ.ಇಂದ್ರಾಣಿ, ಜಿಲ್ಲಾ ಕುಷ್ಠರೋಗ ನಿಯಂತ್ರಣಾಧಿಕಾರಿ ಡಾ.ವಿರೇಂದ್ರ ಕುಮಾರ್, ಜಿಲ್ಲಾ ಆರ್.ಸಿ.ಹೆಚ್ ಅಧಿಕಾರಿ ಡಾ.ಹನುಮಂತಪ್ಪ, ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಈಶ್ವರ್ ದಾಸಪ್ಪನವರು ಸೇರಿದಂತೆ ಇತರರು ಭಾಗವಹಿಸುವರು ಎಂದು ಪ್ರಕಟಣೆ ತಿಳಿಸಿದೆ. ---------

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ