ಮಂಗಳವಾರ, ಸೆಪ್ಟೆಂಬರ್ 3, 2024
ಶೇ.60 ರಷ್ಟು ಕನ್ನಡ ನಾಮಫಲಕ ಕಡ್ಡಾಯ
ಬಳ್ಳಾರಿ,ಸೆ.03(ಕರ್ನಾಟಕ ವಾರ್ತೆ):
ಕಂಪ್ಲಿ ಪುರಸಭೆ ವ್ಯಾಪ್ತಿಯಲ್ಲಿನ ಎಲ್ಲಾ ಸರ್ಕಾರಿ ಕಚೇರಿ, ಕಟ್ಟಡಗಳು, ಸಾರ್ವಜನಿಕ ಹಾಗೂ ಖಾಸಗಿ ಕಟ್ಟಡಗಳು, ವಾಣಿಜ್ಯ ಕಟ್ಟಡಗಳು ಹಾಗೂ ಅಂಗಡಿ ಮುಂಗಟ್ಟುಗಳ ನಾಮಫಲಕಗಳನ್ನು ಕಡ್ಡಾಯವಾಗಿ ಕನ್ನಡ ಭಾಷೆಯಲ್ಲಿಯೇ ಹಾಕಿಸಬೇಕು ಎಂದು ಕಂಪ್ಲಿ ಪುರಸಭೆ ಮುಖ್ಯಾಧಿಕಾರಿ ದುರುಗಣ್ಣ ಅವರು ತಿಳಿಸಿದ್ದಾರೆ.
ನಾಮಫಲಕಗಳ ಮೇಲ್ಭಾಗದಲ್ಲಿ ಕನ್ನಡ ಭಾಷೆಯು ಶೇ.60ರಷ್ಟು ಮತ್ತು ಶೇ.40 ರಷ್ಟು ಆಂಗ್ಲಭಾಷೆಯಲ್ಲಿ ಪ್ರದರ್ಶಿಸಬೇಕು. ಇದನ್ನು ಪಾಲಿಸದಿದ್ದಲ್ಲಿ ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ ಅಧಿನಿಯಮ 2022 ಹಾಗೂ (ತಿದ್ದುಪಡಿ) ಅಧಿನಿಯಮ 2024 ಪ್ರಕಾರ ನಿಯಮಾನುಸಾರ ಕ್ರಮ ಜರುಗಿಸಲಾಗುವುದು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
---------
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)
ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ