ಶುಕ್ರವಾರ, ಸೆಪ್ಟೆಂಬರ್ 6, 2024

ಅAತರರಾಷ್ಟಿçÃಯ ಪ್ರಜಾಪ್ರಭುತ್ವ ದಿನ ಅಂಗವಾಗಿ | ಸೆ.15 ರಂದು ಬೃಹತ್ ಮಾನವ ಸರಪಳಿ ಆಯೋಜನೆ; ಯಶಸ್ವಿಗೊಳಿಸಲು ಎಡಿಸಿ ಮಹಮ್ಮದ್ ಎನ್.ಝುಬೇರ್ ಕರೆ

ಬಳ್ಳಾರಿ,ಸೆ.06(ಕರ್ನಾಟಕ ವಾರ್ತೆ): ಅಂತರಾಷ್ಟಿçÃಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ರಾಜ್ಯಾದ್ಯಂತ ಬೀದರ್‌ನಿಂದ ಚಾಮರಾಜನಗರ ವರೆಗೆ ಏಕಕಾಲಕ್ಕೆ ಮಾನವ ಸರಪಳಿ ನಿರ್ಮಿಸುವ ಮೂಲಕ ವಿಶಿಷ್ಟವಾಗಿ ಆಚರಿಸಲಾಗುತ್ತಿದ್ದು, ಜಿಲ್ಲೆಯಲ್ಲೂ 45.9ಕಿ.ಮೀ. ನಷ್ಟು ಮಾನವ ಸರಪಳಿ ನಿರ್ಮಿಸಿ, ಕಾರ್ಯಕ್ರಮ ಯಶಸ್ವಿಗೊಳಿಸಬೇಕು ಎಂದು ಅಪರ ಜಿಲ್ಲಾಧಿಕಾರಿ ಮಹಮ್ಮದ್ ಎನ್.ಜುಬೇರ್ ಅವರು ಹೇಳಿದರು. ನಗರದ ನೂತನ ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿ ಶುಕ್ರವಾರ ಆಯೋಜಿಸಿದ್ದ ಅಂತರಾಷ್ಟಿçÃಯ ಪ್ರಜಾಪ್ರಭುತ್ವ ದಿನಾಚರಣೆಯ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಪ್ರಜಾ ಪ್ರಭುತ್ವದ ಮೌಲ್ಯ, ಸಂವಿಧಾನದ ಆಶಗಳನ್ನು ಎತ್ತಿಹಿಡಿಯುವ ನಿಟ್ಟಿನಲ್ಲಿ ಸರ್ಕಾರವು ಬೃಹತ್ ಮಾನವ ಸರಪಳಿ ಆಯೊಜನೆ ಹಮ್ಮಿಕೊಂಡಿದ್ದು, ಸಂವಿಧಾನದ ಗೌರವ, ಘನತೆ ಹೆಚ್ಚಿಸುವ ಮತ್ತು ಸಾಂಸ್ಕೃತಿಕ ಮಹತ್ವವನ್ನು ಸಾರಿ ಹೇಳುವಂತಹ ಮಾನವ ಸರಪಳಿ ರಚಿಸಿ ಯಶಸ್ವಿಯಾಗಿ, ಯಾವುದೇ ಲೋಪ ಆಗದಂತೆ ಅವಶ್ಯಕ ಕ್ರಮವಹಿಸಬೇಕು ಎಂದು ಹೇಳಿದರು. ಕಾರ್ಯಕ್ರಮಕ್ಕೆ ತೆರಳಲು ಸಾರಿಗೆ ವ್ಯವಸ್ಥೆ, ಸಾರ್ವಜನಿಕರ ಮತ್ತು ವಿದ್ಯಾರ್ಥಿಗಳ ಹಿತಾಸಕ್ತಿಗಾಗಿ ಆರೋಗ್ಯ ಸುವ್ಯವಸ್ಥೆ ಮತ್ತು ಉಪಹಾರ ಸೇರಿದಂತೆ ಅಗತ್ಯ ವ್ಯವಸ್ಥೆಗಳನ್ನು ಏರ್ಪಡಿಸಲಾಗಿದ್ದು, ಪ್ರತಿ 1 ಕಿ.ಮೀ. ವ್ಯಾಪ್ತಿಗೆ ನೋಡಲ್ ಅಧಿಕಾರಿಗಳನ್ನು ನೇಮಿಸಲಾಗುತ್ತದೆ ಎಂದರು. ಸAವಿಧಾನ ಸರಪಳಿ ಆಯೋಜನೆಯು ಪ್ರಜಾಪ್ರಭುತ್ವದ ಹಬ್ಬವಾಗಿದ್ದು, ವಿವಿಧ ಸಾಂಸ್ಕೃತಿಕ, ಕಲಾ ತಂಡಗಳ, ಸಂಘ ಸಂಸ್ಥೆಗಳ ಸಹಭಾಗಿತ್ವದೊಂದಿಗೆ ಕಾರ್ಯಕ್ರಮದಲ್ಲಿ ಸಸಿಗಳನ್ನು ನೆಡಲಾಗುವುದು ಎಂದು ಹೇಳಿದರು. ಸ್ಥಳೀಯ ಮಟ್ಟದ ಗ್ರಾ.ಪಂ ಅಧಿಕಾರಿಗಳು ಸೇರಿದಂತೆ ಸ್ಥಳೀಯ ಸಂಘ -ಸಂಘಟನೆಗಳು ಸಕ್ರೀಯವಾಗಿ ಪಾಲ್ಗೊಂಡು, ಸಂತೋಷ ಸಡಗರದಿಂದ ಬೃಹತ್ ಸಂಖ್ಯೆಯಲ್ಲಿ ಸಾರ್ವಜನಿಕರು, ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಭಾಗವಹಿಸುವಂತೆ ನೋಡಿಕೊಳ್ಳಬೇಕು ಎಂದರು. ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕ ಮಲ್ಲಿಕಾರ್ಜುನ ಅವರು ಮಾತನಾಡಿ, ಬೃಹತ್ ಮಾನವ ಸರಪಳಿ ಆಯೋಜನೆಯು ಸಮಾನತೆ, ಸಾಮರಸ್ಯ, ಒಮ್ಮತ ಪ್ರದರ್ಶಿಸುವ ಕಾರ್ಯಕ್ರಮವಾಗಿದ್ದು, ಎಲ್ಲರೂ ಉತ್ಸುಕತೆಯಿಂದ ಭಾಗವಹಿಸಬೇಕು ಎಂದು ಹೇಳಿದರು. *ರೂಟ್ ಮ್ಯಾಪ್ ಗ್ರಾಮಗಳು:* ಬೃಹತ್ ಮಾನವ ಸರಪಳಿಯು ವಿಜಯನಗರ ಜಿಲ್ಲೆಯ ಗಾದಿಗನೂರಿನಿಂದ ಆಗಮಿಸಿ ಸಂಡೂರು ತಾಲ್ಲೂಕಿನ ಕುರೇಕುಪ್ಪ, ಎಸ್.ಬಸಾಪುರ, ವಡ್ಡು, ಬನ್ನಿಹಟ್ಟಿ, ಲಿಂಗದಹಳ್ಳಿ, ಉಬ್ಬಲಗಂಡಿ, ಯು.ರಾಜಾಪುರ. ಯು.ಮಲ್ಲಾಪುರ ಗ್ರಾಮಗಳು ಸೇರಿದಂತೆ ಒಟ್ಟು 45.9 ಕಿ.ಮಿ ಮಾನವ ಸರಪಳಿ ಪ್ರದರ್ಶಿಸಿ ಚಿತ್ರದುರ್ಗ ಜಿಲ್ಲೆಯ ಗಡಿ ಗ್ರಾಮವಾದ ಕೆಳಗಿನ ಕಣಿವೆ ಗ್ರಾಮಕ್ಕೆ ತಲುಪುತ್ತದೆ. ಸೆ.15 ರಂದು ಬೆಳಿಗ್ಗೆ 08 ಗಂಟೆಯಿAದ 09.30 ಗಂಟೆಗೆ ಬೃಹತ್ ಮಾನವ ಸರಪಳಿ ನಿರ್ಮಿಸಲು ಸರ್ಕಾರವು ವಿನೂತನ ಪ್ರಯೋಗ ಹಮ್ಮಿಕೊಂಡಿದೆ ಎಂದು ಅವರು ತಿಳಿಸಿದರು. ಈ ಸಂದರ್ಭದಲ್ಲಿ ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿಗಳು, ಸಿಬ್ಬಂದಿ ಹಾಗೂ ವಿವಿಧ ಸಮಾಜದ ಸಂಘ ಸಂಸ್ಥೆಗಳ ಮುಖಂಡರು ಉಪಸ್ಥಿತರಿದ್ದರು. ---------

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ