ಬುಧವಾರ, ಸೆಪ್ಟೆಂಬರ್ 11, 2024
ಕೃಷಿ ಪಂಡಿತ ಪ್ರಶಸ್ತಿಗೆ ಅರ್ಜಿ ಆಹ್ವಾನ
ಬಳ್ಳಾರಿ,ಸೆ.11(ಕರ್ನಾಟಕ ವಾರ್ತೆ):
ಕೃಷಿ ಇಲಾಖೆ ವತಿಯಿಂದ ಪ್ರಸ್ತಕ ಸಾಲಿಗೆ ಕೃಷಿ ಪಂಡಿತ ಪ್ರಶಸ್ತಿಗಾಗಿ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಕೃಷಿ ಇಲಾಖೆಯ ಕೆ-ಕಿಸಾನ್ ಪೋರ್ಟಲ್‌ನಲ್ಲಿ ನೂತನವಾಗಿ ಕೃಷಿ ಪಂಡಿತ ಪ್ರಶಸ್ತಿಗೆ ಅರ್ಜಿ ನಮೂನೆಯನ್ನು ಅಳವಡಿಸಲಾಗಿದ್ದು, ಸಿಟಿಜನ್ ಲಾಗಿನ್ ಅಥವಾ ಆರ್‌ಎಸ್‌ಕೆ ಲಾಗಿನ್ ಮೂಲಕ ಹತ್ತಿರದ ರೈತ ಸಂಪರ್ಕ ಕೇಂದ್ರದಲ್ಲಿ ಸ್ವತ ಆಸಕ್ತ ರೈತ ಮತ್ತು ರೈತ ಮಹಿಳೆಯರು ಅರ್ಜಿ ಸಲ್ಲಿಸಬಹುದು.
ಅಗತ್ಯ ದಾಖಲೆಗಳೊಂದಿಗೆ ತಮ್ಮ ಎಫ್‌ಐಡಿಯನ್ನು ನಮೂದಿಸಬೇಕು. ಅರ್ಜಿ ಸಲ್ಲಿಸಲು ಸೆ.30 ಕೊನೆಯ ದಿನವಾಗಿದೆ ಎಂದು ಜಂಟಿ ಕೃಷಿ ನಿರ್ದೇಶಕ ಸೋಮಸುಂದರ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
--------
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)

ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ