ಸೋಮವಾರ, ಸೆಪ್ಟೆಂಬರ್ 30, 2024

ಸ್ವಚ್ಚತೆ ಕಾಪಾಡುವ ಮೂಲಕ ರೋಗ-ರುಜಿನ ನಿಯಂತ್ರಿಸಲು ಕೈಜೋಡಿಸಿ: ಡಿಹೆಚ್‌ಓ ಡಾ.ಯಲ್ಲಾ ರಮೇಶಬಾಬು

ಬಳ್ಳಾರಿ,ಸೆ.30(ಕರ್ನಾಟಕ ವಾರ್ತೆ): ಪ್ರತಿಯೊಬ್ಬರೂ ತಮ್ಮ ಮನೆಯ ಸುತ್ತ-ಮುತ್ತ ಸ್ವಚ್ಛತೆ ಕಾಪಾಡುವ ಮೂಲಕ ಸಾಂಕ್ರಾಮಿಕ ರೋಗಗಳನ್ನು ತಡೆಗಟ್ಟಲು ಕೈಜೋಡಿಸಬೇಕು ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಯಲ್ಲಾ ರಮೇಶಬಾಬು ಅವರು ಹೇಳಿದರು. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಜಿಲ್ಲಾ ಆಸ್ಪತ್ರೆ ಸಂಯುಕ್ತಾಶ್ರಯದಲ್ಲಿ ‘ಸ್ವಚ್ಚತೆಯೇ ಸೇವೆ’ ಅಭಿಯಾನದಡಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ ಕಾರ್ಯಾಲಯದ ಆವರಣದಲ್ಲಿ ಸೋಮವಾರ ಹಮ್ಮಿಕೊಂಡಿದ್ದ ಸ್ವಚ್ಚತಾ ಸೇವೆಯಲ್ಲಿ ಭಾಗವಹಿಸಿ ಅವರು ಮಾತನಾಡಿದರು. ರಾಷ್ಟಿçÃಯ ಸ್ವಚ್ಚತಾ ಅಭಿಯಾನದಡಿ ಕಾಯಕಲ್ಪ ಕಾರ್ಯಕ್ರಮದ ಮೂಲಕ ಎಲ್ಲಾ ಆಸ್ಪತ್ರೆಗಳಲ್ಲಿ ರೋಗಿಗಳ ಆರೋಗ್ಯ ಕಾಪಾಡಲು ವೈದ್ಯಕೀಯ ತ್ಯಾಜ್ಯ ಎಲ್ಲೆಂದರಲ್ಲಿ ಬಿಸಾಡದೆ ನಿಯಮಾನುಸಾರ ಪ್ರತಿದಿನ ವಿಲೇವಾರಿ ಮಾಡಲಾಗುತ್ತಿದೆ, ಸಾರ್ವಜನಿಕರು ಕಸಕಡ್ಡಿಯನ್ನು ಚರಂಡಿಗಳಲ್ಲಿ ಹಾಕದೇ, ಕಸದ ವಾಹನದಲ್ಲಿ ಹಾಕುವ ಮೂಲಕ ಡೆಂಗ್ಯು ನಿಯಂತ್ರಣಕ್ಕೆ ಸಹಕರಿಸಬೇಕು. ನೀರಿನ ಮೂಲಗಳನ್ನು ಸ್ವಚ್ಚವಾಗಿಟ್ಟುಕೊಳ್ಳುವ ಮೂಲಕ ವಾಂತಿ-ಬೇಧಿಗಳAತಹ ಕಾಯಿಲೆಗಳನ್ನು ನಿಯಂತ್ರಿಸಲು ಪ್ರತಿಯೊಬ್ಬರು ಕೈಜೋಡಿಸಬೇಕು ಎಂದರು. ಜಿಲ್ಲಾ ಶಸ್ತçಚಿಕಿತ್ಸಕ ಡಾ.ಎನ್.ಬಸರೆಡ್ಡಿ ಅವರು ಮಾತನಾಡಿ, ಜಿಲ್ಲಾಸ್ಪತ್ರೆಯಲ್ಲಿ ರೋಗಿಗಳಿಗೆ ಗುಣಮಟ್ಟದ ಚಿಕಿತ್ಸೆ ನೀಡುವುದರ ಜೊತೆಗೆ ಸ್ವಚ್ಚತೆಗೆ ಆದ್ಯತೆ ನೀಡಲಾಗುತ್ತಿದೆ. ಆಸ್ಪತ್ರೆಗೆ ಬರುವ ಜನತೆಯು ಆಹಾರ ತ್ಯಾಜ್ಯ, ಟೀ-ಕಾಪಿ ಕಪ್ü, ಗಂಜಿಯ ಪ್ಲಾಸ್ಟಿಕ್ ಕವರ್, ಖಾಲಿಯಾದ ಎಳೆನೀರಿನ ಕಾಯಿಗಳನ್ನು ಎಲ್ಲೆಂದರಲ್ಲಿ ಬಿಸಾಡದೆ ಕಸದ ಬುಟ್ಟಿಗಳಲ್ಲಿಯೇ ಹಾಕಬೇಕು. ಸಾರ್ವಜನಿಕ ಆಸ್ಪತ್ರೆಯನ್ನು ಸ್ವಚ್ಚವಾಗಿಡಲು ಸಹಕರಿಸಬೇಕು ಎಂದು ವಿನಂತಿಸಿದರು. ಜಿಲ್ಲಾ ಕುಟುಂಬ ಕಲ್ಯಾಣ ಕಾರ್ಯಕ್ರಮಾಧಿಕಾರಿ ಡಾ.ಪೂರ್ಣಿಮಾ ಕಟ್ಟಿಮನಿ ಅವರು ಪ್ರಾಸ್ತವಿಕವಾಗಿ ಮಾತನಾಡಿದರು. ಇದೇ ಸಂದರ್ಭದಲ್ಲಿ ಎಲ್ಲಾ ಅಧಿಕಾರಿಗಳು ಹಾಗೂ ನೌಕರರು ಸ್ವಚ್ಛತೆ ಕುರಿತ ಪ್ರತಿಜ್ಞಾ ವಿಧಿ ಸ್ವೀಕರಿಸಿ ಸ್ವಚ್ಛತಾ ಕಾರ್ಯವನ್ನು ಕೈಗೊಂಡರು. ಈ ಸಂದರ್ಭದಲ್ಲಿ ಜಿಲ್ಲಾ ಕುಷ್ಠರೋಗ ನಿರ್ಮೂಲನಾಧಿಕಾರಿ ಡಾ.ವಿರೇಂದ್ರಕುಮಾರ, ಜಿಲ್ಲಾ ಆರ್‌ಸಿಹೆಚ್ ಅಧಿಕಾರಿ ಡಾ.ಹನುಮಂತಪ್ಪ, ಉಪಮುಖ್ಯ ವೈದ್ಯಾಧಿಕಾರಿ ಡಾ.ಗುರುನಾಥ ಬಿ.ಚೌವ್ಹಾಣ್, ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಈಶ್ವರ ದಾಸಪ್ಪನವರ, ಕಾಯಕಲ್ಪ ವಿಭಾಗಾಧಿಕಾರಿ ಡಾ.ಪ್ರಿಯಾಂಕ್, ಶುಶ್ರೂಷಣಾ ಅಧೀಕ್ಷಕಿ ವಿಮಲಾಕ್ಷಿ, ಸಹಾಯಕ ಆಡಳಿತ ಅಧಿಕಾರಿ ಉದಯ ಶ್ರೀಪತಿ ಗುಮಾಸ್ತೆ ದೇಸಾಯಿ, ಸಾರಿಗೆ ಅಭಿಯಂತರ ವಿಜಯಕುಮಾರ್, ಕಚೇರಿ ಅಧೀಕ್ಷಕರಾದ ಬಸವರಾಜ್, ರವಿಚಂದ್ರ, ವೆಂಕಟೇಶ, ಗುಣಮಟ್ಟ ಖಾತರಿ ಮೇಲ್ವಿಚಾರಕ ರಾಘವೇಂದ್ರ ಸೇರಿದಂತೆ ಎಲ್ಲ ವಿಭಾಗಗಳ ಅಧಿಕಾರಿಗಳು, ಜಿಲ್ಲಾ ಆಸ್ಪತ್ರೆಯ ಸಿಬ್ಬಂದಿಯರು ಭಾಗವಹಿಸಿದ್ದರು. ----------

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ