ಗುರುವಾರ, ಸೆಪ್ಟೆಂಬರ್ 19, 2024
ಮೆಟ್ರಿಕ್ ನಂತರದ ವಿದ್ಯಾರ್ಥಿನಿಲಯಗಳ ಪ್ರವೇಶಾತಿಗೆ ಅರ್ಜಿ ಆಹ್ವಾನ
ಬಳ್ಳಾರಿ,ಸೆ.19(ಕರ್ನಾಟಕ ವಾರ್ತೆ):
ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಡಿ ಬರುವ ಮೆಟ್ರಿಕ್ ನಂತರದ ಬಾಲಕ, ಬಾಲಕಿಯರ ವಿದ್ಯಾರ್ಥಿನಿಲಯಗಳ ಪ್ರಸ್ತಕ ಸಾಲಿನ ಪ್ರವೇಶಾತಿಗೆ ಅರ್ಜಿ ಆಹ್ವಾನಿಸಲಾಗಿದೆ.
ಸಾಮಾನ್ಯ ಪದವಿ ಮಟ್ಟದ ಕೋರ್ಸ್, ವೃತ್ತಿಪರ ಕೋರ್ಸ್ ಮತ್ತು ಸ್ನಾತಕೊತ್ತರ ಕೋರ್ಸ್ನ ವಿದ್ಯಾರ್ಥಿಗಳಿಗೆ ಮಾತ್ರ ಅರ್ಜಿ ಸಲ್ಲಿಸಬಹುದು.
ಅರ್ಜಿ ಸಲ್ಲಿಸಲು ರಾಜ್ಯ ವಿದ್ಯಾರ್ಥಿನಿಲಯ ತಂತ್ರಾAಶದ ಲಿಂಕ್ https://shp.karnataka.gov.in ಗೆ ಭೇಟಿ ನೀಡಬೇಕು.
ಅರ್ಜಿ ಸಲ್ಲಿಸಲು ಅಕ್ಟೋಬರ್ 05 ಕೊನೆಯ ದಿನವಾಗಿದೆ.
ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿಗಳ ಕಚೇರಿ ಹಾಗೂ ಜಿಲ್ಲೆಯ ಎಲ್ಲಾ ಅಲ್ಪಸಂಖ್ಯಾತರ ತಾಲೂಕು ಮಾಹಿತಿ ಕೇಂದ್ರಗಳಲ್ಲಿ ಭೇಟಿ ನೀಡಿ ಮಾಹಿತಿ ಪಡೆಯಬಹುದು ಅಥವಾ ತಾಲ್ಲೂಕು ವಿಸ್ತರಣಾಧಿಕಾರಿ ಬಳ್ಳಾರಿ ವಿಭಾಗದ ಮೊ.8746818180, ದೂ.08392-200125, 224 ಗೆ ಸಂಪರ್ಕಿಸಬಹುದು ಎಂದು ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ವಿಠೋಬಾ ಹೊನಕಾಂಡೆ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
-----------
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)
ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ