ಸೋಮವಾರ, ಸೆಪ್ಟೆಂಬರ್ 30, 2024

ಮಹಿಳೆ ಕಾಣೆ; ಪತ್ತೆಗೆ ಮನವಿ

ಬಳ್ಳಾರಿ,ಸೆ.30(ಕರ್ನಾಟಕ ವಾರ್ತೆ): ಕುರುಗೋಡು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಎ.ಕೆ.ರೇಣುಕಮ್ಮ ಎನ್ನುವ 38 ವರ್ಷದ ಮಾನಸಿಕ ಅಸ್ವಸ್ಥೆ ಸೆ.19 ರಂದು ಕಾಣೆಯಾಗಿರುವ ಕುರಿತು ಪ್ರಕರಣ ದಾಖಲಾಗಿದ್ದು, ಪತ್ತೆಗೆ ಸಹಕರಿಸಬೇಕು ಎಂದು ಸಹಾಯಕ ಉಪನಿರೀಕ್ಷಕರು ತಿಳಿಸಿದ್ದಾರೆ. ಚಹರೆ ಗುರುತು: ಸುಮಾರು 5 ಅಡಿ ಎತ್ತರ, ಸಾಧಾರಣ ಮೈಕಟ್ಟು, ಗೋಧಿ ಮೈಬಣ್ಣ, ಕೋಲು ಮುಖ ಹೊಂದಿದ್ದು, ಎಡಗೈ ಹೆಬ್ಬಟ್ಟಿನ ಮೇಲೆ ಮೂರು ಹಸಿರು ಬಣ್ಣದ ಅಚ್ಚೆಯ ಗುರುತು ಇರುತ್ತದೆ. ಕಾಣೆಯಾದ ಸಂದರ್ಭದಲ್ಲಿ ಕಾಫಿ ಬಣ್ಣದ ಹೂವಿನ ಡಿಜೈನ್‌ವುಳ್ಳ ಸೀರೆ, ನೀಲಿ ಬಣ್ಣದ ಕುಪ್ಪಸ ಧರಿಸಿರುತ್ತಾಳೆ. ಕನ್ನಡ ಭಾಷೆ ಮಾನಾಡುತ್ತಾಳೆ. ಮೇಲ್ಕಂಡ ಚಹರೆಯುಳ್ಳ ಮಹಿಳೆಯ ಬಗ್ಗೆ ಸುಳಿವು ಸಿಕ್ಕಲ್ಲಿ ಬಳ್ಳಾರಿ ಎಸ್‌ಪಿ ಕಚೇರಿ ದೂ.08392-258400, ತೋರಣಗಲ್ಲು ಉಪವಿಭಾಗ ಡಿಎಸ್‌ಪಿ ಮೊ.9480803010, ಕುರುಗೋಡು ಸಿಪಿಐ ಮೊ.9480803039, ಕುರುಗೋಡು ಪಿಎಸ್‌ಐ ಮೊ.9480803051 ಗೆ ಸಂಪರ್ಕಿಸಬಹುದು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ---------

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ