ಸೋಮವಾರ, ಸೆಪ್ಟೆಂಬರ್ 9, 2024

ಉದ್ಯಮಶೀಲತಾ ಅಭಿವೃದ್ಧಿ ತರಬೇತಿಗಾಗಿ ಅರ್ಜಿ ಆಹ್ವಾನ

ಬಳ್ಳಾರಿ,ಸೆ.09(ಕರ್ನಾಟಕ ವಾರ್ತೆ): ಕೌಶಲ್ಯಾಭಿವೃದ್ಧಿ ಉದ್ಯಮಶೀ¯ತೆ ಮತ್ತು ಜೀವನೋಪಾಯ ಇಲಾಖೆಯ ಪ್ರಾಯೋಜಕತ್ವದಲ್ಲಿ, ಕರ್ನಾಟಕ ಉದ್ಯಮಶೀಲತಾ ಅಭಿವೃದ್ಧಿ ಕೇಂದ್ರ(ಸಿಡಾಕ್) ವತಿಯಿಂದ ಪರಿಶಿಷ್ಟ ಪಂಗಡದ ಮಹಿಳಾ ಅಭ್ಯರ್ಥಿಗಳಿಗೆ ಹತ್ತು ದಿನಗಳ ಉದ್ಯಮಶೀಲತಾ ಅಭಿವೃದ್ಧಿ ತರಬೇತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ ಎಂದು ಸಿಡಾಕ್‌ನ ಜಂಟಿ ನಿರ್ದೇಶಕರು ತಿಳಿಸಿದ್ದಾರೆ. ಅರ್ಹತೆಗಳು: 18 ವರ್ಷ ದಿಂದ 45 ವರ್ಷ ವಯಸ್ಸಿನವರಾಗಿರಬೇಕು. ಹತ್ತು ದಿನಗಳ ಉದ್ಯಮಶೀಲತಾ ಅಭಿವೃದ್ಧಿ ತರಬೇತಿ ಕಾರ್ಯಕ್ರಮಕ್ಕೆ ಪರಿಶಿಷ್ಟ ಪಂಗಡ ಮಹಿಳೆಯರಿಗೆ ಮಾತ್ರ ಅವಕಾಶವಿದ್ದು, ಓದಲು, ಬರೆಯಲು ಬರುತ್ತಿರಬೇಕು. ಆಸಕ್ತ ಪರಿಶಿಷ್ಟ ಪಂಗಡದ ಮಹಿಳಾ ಅಭ್ಯರ್ಥಿಗಳು ಅರ್ಜಿಯನ್ನು ಕಚೇರಿಯಿಂದ ಪಡೆದು ಭರ್ತಿ ಮಾಡಿ ಸಲ್ಲಿಸಬಹುದು ಅಥವಾ ದೂರವಾಣಿ ಮೂಲಕ ನೋಂದಾಯಿಸಿಕೊಳ್ಳಬಹುದು. ಹತ್ತು ದಿನಗಳ ಉದ್ಯಮಶೀಲತಾ ಅಭಿವೃದ್ಧಿ ತರಬೇತಿಯಲ್ಲಿ ಸ್ವಂತ ಉದ್ಯಮವನ್ನು ಸ್ಥಾಪಿಸಲು ಅನುಸರಿಸಬೇಕಾದ ಕ್ರಮಗಳು, ಸರ್ಕಾರದ ಸ್ವಂತ ಉದ್ಯೋಗ ಯೋಜನೆಗಳು, ಬ್ಯಾಂಕಿನ ವ್ಯವಹಾರ, ಮಾರುಕಟ್ಟೆ ಸಮೀಕ್ಷೆ, ಯೋಜನಾ ವರದಿ ತಯಾರಿಕೆ, ಹಾಗೂ ಉದ್ಯಮ ನಿರ್ವಹಣೆ, ಇತ್ಯಾದಿ ವಿಷಯಗಳ ಕುರಿತು ತರಬೇತಿ ನೀಡಲಾಗುತ್ತದೆ. ಹೆಚ್ಚಿನ ಮಾಹಿತಿಗಾಗಿ ನಗರದ ಜಿಲ್ಲಾ ಕೈಗಾರಿಕಾ ಕೇಂದ್ರ ಕಚೇರಿ ಕಟ್ಟಡದ ಸಿಡಾಕ್‌ನ ಜಂಟಿ ನಿರ್ದೇಶಕರ ಕಚೇರಿ ಅಥವಾ ಮೊ:7483538942, 9449226221 ಗೆ ಸಂಪರ್ಕಿಸಬಹುದು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ----------

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ