ಶನಿವಾರ, ಸೆಪ್ಟೆಂಬರ್ 21, 2024
ಕಾರ್ಮಿಕ ಕಾಯ್ದೆಗಳ ಕುರಿತು ತಾಲ್ಲೂಕು ಮಟ್ಟದಲ್ಲಿ ಕಾರ್ಯಾಗಾರ
ಬಳ್ಳಾರಿ,ಸೆ.21(ಕರ್ನಾಟಕ ವಾರ್ತೆ):
ಜಿಲ್ಲಾ ಕಾರ್ಮಿಕ ಇಲಾಖೆ ವತಿಯಿಂದ ತಾಲ್ಲೂಕು ವ್ಯಾಪ್ತಿಯ ಉದ್ಯೋಗದಾತರಿಗೆ, ಗುತ್ತಿಗೆದಾರರಿಗೆ, ಸಂಘಟಿತ ಮತ್ತು ಅಸಂಘಟಿತ ಕಾರ್ಮಿಕ ಸಂಘಟನೆಗಳ ಪದಾಧಿಕಾರಿಗಳಿಗೆ ಹಾಗೂ ಕಾರ್ಮಿಕರಿಗೆ ವಿವಿಧ ಕಾರ್ಮಿಕ ಕಾಯ್ದೆಗಳ ಪರಿಣಾಮಕಾರಿ ಅನುಷ್ಠಾನದ ಕುರಿತು ಒಂದು ದಿನದ ತಾಲ್ಲೂಕು ಮಟ್ಟದ ಕಾರ್ಯಾಗಾರ
ಸೆ.26 ರಂದು ಸಂಡೂರು ತಾಲ್ಲೂಕಿನ ತೋರಣಗಲ್ಲು ಗ್ರಾಮದಲ್ಲಿ ಹಾಗೂ ಸೆ.30 ರಂದು ಸಿರುಗುಪ್ಪ ತಾಲ್ಲೂಕಿನಲ್ಲಿ ಹಮ್ಮಿಕೊಳ್ಳಲಾಗಿದೆ.
ಅಸಂಘಟಿತ ಕಾರ್ಮಿಕರು, ಉದ್ಯೋಗದಾತರು ಕಾರ್ಯಕ್ರಮದಲ್ಲಿ ಭಾಗವಹಿಸಿ ಯಶಸ್ವಿಗೊಳಿಸಬೇಕು ಎಂದು ಬಳ್ಳಾರಿ ಉಪ ವಿಭಾಗದ ಕಾರ್ಮಿಕ ಅಧಿಕಾರಿ ಸಿದ್ದಪ್ಪ ಜಿ.ಖೈನೂರು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
---------
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)
ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ