ಸೋಮವಾರ, ಸೆಪ್ಟೆಂಬರ್ 2, 2024

ಸಮಾಜ ಕಲ್ಯಾಣ ಇಲಾಖೆ; ವಿದ್ಯಾರ್ಥಿ ವೇತನಕ್ಕಾಗಿ ಅರ್ಜಿ ಆಹ್ವಾನ

ಬಳ್ಳಾರಿ,ಸೆ.02(ಕರ್ನಾಟಕ ವಾರ್ತೆ): ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಮೆಟ್ರಿಕ್ ಪೂರ್ವ, ಮೆಟ್ರಿಕ್ ನಂತರದ ವಿದ್ಯಾರ್ಥಿವೇತನ ಕಾರ್ಯಕ್ರಮ ಮತ್ತು ಪ್ರೋತ್ಸಾಹಧನ ಕಾರ್ಯಕ್ರಮಗಳಡಿ ಪ್ರಸಕ್ತ ಶೈಕ್ಷಣಿಕ ಸಾಲಿಗೆ ಪರಿಶಿಷ್ಟ ಜಾತಿಯ ಮೆಟ್ರಿಕ್ ಪೂರ್ವ, ಮೆಟ್ರಿಕ್ ನಂತರ ವಿದ್ಯಾರ್ಥಿ ವೇತನ ಹಾಗೂ ಪ್ರೋತ್ಸಾಹಧನಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ. ವಿದ್ಯಾರ್ಥಿಗಳು ಸಮಾಜ ಕಲ್ಯಾಣ ಇಲಾಖೆಯ ಅಧಿಕೃತ ವೆಬ್‌ಸೈಟ್ ತಿತಿತಿ.sತಿ.ಞಚಿಡಿ.ಟಿiಛಿ.iಟಿ ಲಿಂಕ್‌ನಲ್ಲಿ ಅರ್ಜಿ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗಾಗಿ ನಗರದ ಕೋಟೆ ಪ್ರದೇಶದ ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕರ ಕಚೇರಿ-ಮೊ.9480843023, ಮೊದಲನೇ ರೈಲ್ವೇ ಗೇಟ್ ಹತ್ತಿರದ ಡಾ.ಬಿ.ಆರ್.ಅಂಬೇಡ್ಕರ್ ಭವನದ ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕರ ಕಚೇರಿ-ಮೊ.9480843073, ಸಂಡೂರಿನ ಸಿಡಿಪಿಒ ಕಚೇರಿ ಹತ್ತಿರದ ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕರ ಕಚೇರಿ-ಮೊ.9480843079 ಮತ್ತು ಸಿರುಗುಪ್ಪದ ವಿನಾಯಕ ನಗರದ ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕರ ಕಚೇರಿ-ಮೊ.9480843078 ಗೆ ಸಂಪರ್ಕಿಸಬಹುದು ಎಂದು ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕ ಮಲ್ಲಿಕಾರ್ಜುನ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. -------

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ