ಬುಧವಾರ, ಸೆಪ್ಟೆಂಬರ್ 25, 2024

ಗುತ್ತಿಗೆ ಆಧಾರದ ಮೇಲೆ ವಿವಿಧ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ

ಬಳ್ಳಾರಿ,ಸೆ.25(ಕರ್ನಾಟಕ ವಾರ್ತೆ): ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಕಾನೂನು ನೆರವು ಅಭಿರಕ್ಷಕರ ಕಚೇರಿಯಲ್ಲಿ ಗುತ್ತಿಗೆ ಆಧಾರದ ಮೇಲೆ ನೇಮಕಾತಿಗೆ ವಿವಿಧ ಹುದ್ದೆಗಳಿಗೆ ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ. ತಾತ್ಕಾಲಿಕ ಹುದ್ದೆಯಾದ ಉಪ ಮುಖ್ಯ ಕಾನೂನು ಅಭಿರಕ್ಷಕರ ಹುದ್ದೆಗಳು 02, ಸಹಾಯಕ ಕಾನೂನು ನೆರವು ಅಭಿರಕ್ಷಕರ ಹುದ್ದೆಗಳು 05, ಕಚೇರಿ ಸಹಾಯಕ ಹುದ್ದೆಗಳು 02 ಮತ್ತು ಜವಾನ ಹುದ್ದೆಗಳು 02 ಇವುಗಳಿಗೆ ಗುತ್ತಿಗೆ ಆಧಾರದ ಮೇಲೆ ನೇಮಕಾತಿಗಾಗಿ ಅರ್ಜಿ ಆಹ್ವಾನಿಸಲಾಗಿದ್ದು, ಅಕ್ಟೋಬರ್ 03 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಕಚೇರಿಗೆ ಸಂಪರ್ಕಿಸಬಹುದು ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶರಾದ ರಾಜೇಶ್ ಎನ್.ಹೊಸಮನೆ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. --------

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ