ಮಂಗಳವಾರ, ಸೆಪ್ಟೆಂಬರ್ 24, 2024

ಕಂಪ್ಯೂಟರ್ ಟ್ಯಾಲಿ ಉಚಿತ ತರಬೇತಿಗೆ ಅರ್ಜಿ ಆಹ್ವಾನ

ಬಳ್ಳಾರಿ,ಸೆ.24(ಕರ್ನಾಟಕ ವಾರ್ತೆ): ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಇವರ ಸಹಯೋಗದಲ್ಲಿ ಜಿಲ್ಲಾ ಖನಿಜಾ ಪ್ರತಿಷ್ಠಾನ ಟ್ರಸ್ಟ್ ಅನುದಾನದಡಿ ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ, ಮತ್ತು ಜೀವನೋಪಾಯ ಇಲಾಖೆ ವತಿಯಿಂದ ಬಳ್ಳಾರಿಯ ಗ್ರಾಮೀಣ ಮತ್ತು ನಗರ ಪ್ರದೇಶದ ನಿರುದ್ಯೋಗಿ ಬಿ.ಕಾಂ ಪದವಿ ವಿದ್ಯಾರ್ಹತೆವುಳ್ಳ ಯುವಕ-ಯುವತಿಯರಿಗೆ ಟ್ಯಾಲಿ (ಕಂಪ್ಯೂಟರ್) ಉಚಿತ ತರಬೇತಿ ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾ ಕೌಶಲ್ಯಾಭಿವೃದ್ಧಿ ಅಧಿಕಾರಿ ಪ್ರಾಣೇಶ್ ಅವರು ತಿಳಿಸಿದ್ದಾರೆ. ಆಸಕ್ತ ಅಭ್ಯರ್ಥಿಗಳು ಸೆ.26 ರೊಳಗಾಗಿ ವೆಬ್‌ಸೈಟ್ www.ballari.nic.in ಲಿಂಕ್ ಮುಖಾಂತರ ಅಭ್ಯರ್ಥಿಗಳು ಹೆಸರು ನೋಂದಾಯಿಸಿಕೊಳ್ಳಬಹುದಾಗಿದ್ದು, ನೋಂದಾಯಿಸಿದ ಅಭ್ಯರ್ಥಿಗಳನ್ನು ಮೆರಿಟ್ ಮೂಲಕ ತರಬೇತಿಗೆ ಅಯ್ಕೆ ಮಾಡಲಾಗುವುದು. ಹೆಚ್ಚಿನ ಮಾಹಿತಿಗಾಗಿ ನಗರದ ನೂತನ ಜಿಲ್ಲಾಡಳಿತ ಭವನದ ಜಿಲ್ಲಾ ಕೌಶಲ್ಯಾಭಿವೃದ್ಧಿ ಕಚೇರಿ ಅಥವಾ ದೂ.08392-294230, ಮೊ.9964502514, 9844444958 ಗೆ ಸಂಪರ್ಕಿಸಬಹುದು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ----------

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ