ಮಂಗಳವಾರ, ಸೆಪ್ಟೆಂಬರ್ 3, 2024

ಅಂಗನವಾಡಿ ಕಾರ್ಯಕರ್ತೆ, ಸಹಾಯಕಿಯರ ಹುದ್ದೆಗೆ ಅರ್ಜಿ ಆಹ್ವಾನ

ಬಳ್ಳಾರಿ,ಸೆ.03(ಕರ್ನಾಟಕ ವಾರ್ತೆ): ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿ ಸಿರುಗುಪ್ಪ ಯೋಜನೆ ವ್ಯಾಪ್ತಿಯಲ್ಲಿ ಖಾಲಿಯಿರುವ 31 ಅಂಗನವಾಡಿ ಕಾರ್ಯಕರ್ತೆಯರು ಹಾಗೂ 71 ಸಹಾಯಕಿಯರು ಮತ್ತು ಕಂಪ್ಲಿ ತಾಲ್ಲೂಕಿನಲ್ಲಿ 12 ಅಂಗನವಾಡಿ ಕಾರ್ಯಕರ್ತೆಯರು ಮತ್ತು 23 ಸಹಾಯಕಿಯರ ಹುದ್ದೆಗಳನ್ನು ಆನ್ ಲೈನ್ ಮೂಲಕ ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಮಹಿಳಾ ಅಭ್ಯರ್ಥಿಗಳು ಅರ್ಜಿಗಳನ್ನು hಣಣಠಿ://ಞಚಿಡಿಟಿemಚಿಞಚಿoಟಿe.ಞಚಿಡಿ.ಟಿiಛಿ.iಟಿ/ಚಿbಛಿಜ/ ವೆಬ್‌ಸೈಟ್‌ಗೆ ಭೇಟಿ ನೀಡಿ ಸಲ್ಲಿಸಬಹುದು. ಅಕ್ಟೋಬರ್ 04 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ಲಕೋಟೆಯಿಂದ ಬಂದ ಅರ್ಜಿಗಳನ್ನು ಆಯ್ಕೆಗೆ ಪರಿಗಣಿಸಲಾಗುವುದಿಲ್ಲ. ಹೆಚ್ಚಿನ ಮಾಹಿತಿಗಾಗಿ ಸಿರುಗುಪ್ಪ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಾರ್ಯಾಲಯ ಅಥವಾ ದೂ.08396-220203, ಮೊ.8050804012 ಗೆ ಸಂಪರ್ಕಿಸಬಹುದು ಎಂದು ಸಿರುಗುಪ್ಪ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. -----------

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ