ಮಂಗಳವಾರ, ಸೆಪ್ಟೆಂಬರ್ 3, 2024

ನೇತ್ರದಾನ ಮಾಡಿ, ಸಾರ್ಥಕತೆ ಹೊಂದಿ: ಡಾ.ಟಿ.ಗಂಗಾಧರ ಗೌಡ

ಬಳ್ಳಾರಿ,ಸೆ.03(ಕರ್ನಾಟಕ ವಾರ್ತೆ): ದೃಷ್ಠಿದೋಷವುಳ್ಳವರ ಬಾಳಿಗೆ ಬೆಳಕಾಗುವ ನೇತ್ರದಾನ ಮಾಡುವ ಪುಣ್ಯದ ಕಾರ್ಯದಲ್ಲಿ ಭಾಗಿಯಾಗಿ ಸಾರ್ಥಕತೆ ಹೊಂದಬೇಕು ಎಂದು ಬಳ್ಳಾರಿ ವೈದ್ಯಕೀಯ ಮಹಾವಿದ್ಯಾಲಯದ ನಿರ್ದೇಶಕ ಡಾ.ಟಿ.ಗಂಗಾಧರ ಗೌಡ ಅವರು ಹೇಳಿದರು. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಬಳ್ಳಾರಿ ವೈದ್ಯಕೀಯ ಮಹಾವಿದ್ಯಾಲಯ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ವಿಮ್ಸ್ ನೇತ್ರ ಭಂಡಾರ ಇವರ ಸಹಯೋಗದಲ್ಲಿ 39ನೇ ರಾಷ್ಟಿçÃಯ ನೇತ್ರದಾನ ಪಾಕ್ಷಿಕ ಅಂಗವಾಗಿ ವೈದ್ಯ ಭವನದಲ್ಲಿ ಮಂಗಳವಾರ ಏರ್ಪಡಿಸಿದ್ದ ಜಾಗೃತಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಮರಣದ ನಂತರ ಕಣ್ಣುಗಳನ್ನು ಮಣ್ಣಲ್ಲಿ ಮಣ್ಣು ಮಾಡದೇ ದೃಷ್ಠಿದೋಷ ಉಳ್ಳವರಿಗೆ ದಾನ ಮಾಡುವ ಅದ್ಭುತ ಕಾರ್ಯಕ್ಕೆ ಪ್ರತಿಯೊಬ್ಬರೂ ಕೈ ಜೋಡಿಸಬೇಕು ಎಂದರು. ಆಕಸ್ಮಿಕ ಘಟನೆಗಳಲ್ಲಿ ಕಣ್ಣುಗಳನ್ನು ಕಳೆದುಕೊಂಡು ದೃಷ್ಟಿಹೀನರಾದಂತಹ ಜನತೆಗೆ ಇನ್ನೊಬ್ಬರ ಕಣ್ಣುಗಳನ್ನು ಕೊಡುವ ಮೂಲಕ ಅಂಧತ್ವ ನಿವಾರಣೆಗೆ ಅವಕಾಶವಿದ್ದು, ಬಿಮ್ಸ್ ನೇತ್ರ ಭಂಡಾರದಲ್ಲಿ ಕಣ್ಣುಗಳನ್ನು ದಾನವಾಗಿ ಪಡೆಯಲು ಹಾಗೂ ಅಗತ್ಯವುಳ್ಳವರಿಗೆ ಶಸ್ತçಚಿಕಿತ್ಸೆ ಮೂಲಕ ಜೋಡಿಸುವ ಕಾರ್ಯವನ್ನು ಮಾಡಲಾಗುತ್ತಿದೆ ಎಂದು ಅವರು ಹೇಳಿದರು. ವ್ಯಕ್ತಿ ಮೃತಪಟ್ಟ ಸಂದರ್ಭದಲ್ಲಿ ಕುಟುಂಬದ ಸದಸ್ಯರು ಬಿಮ್ಸ್ನ ನೇತ್ರ ಭಂಡಾರದ 9483414824 ಸಂಖ್ಯೆಗೆ ಕರೆ ಮಾಡಿ ತಿಳಿಸಿದಾಗ ವೈದ್ಯಕೀಯ ತಂಡವು ನೇತ್ರಗಳನ್ನು ಸುರಕ್ಷಿತವಾಗಿ ಪಡೆದುಕೊಳ್ಳುತ್ತಾರೆ. ಈ ಎಲ್ಲಾ ಕಾರ್ಯವು ವ್ಯಕ್ತಿ ಮೃತಪಟ್ಟ 6-8 ಗಂಟೆಯೊಳಗೆ ಮಾಡಬೇಕಾಗುತ್ತದೆ ಎಂದರು. ಕಳೆದ ಜನವರಿಯಿಂದ ಇಲ್ಲಿಯವರೆಗೆ 50 ಜನರು ನೇತ್ರದಾನ ಮಾಡಿದ್ದಾರೆ. ಅದರಲ್ಲಿ 45ಕ್ಕೂ ಹೆಚ್ಚು ಜನರಿಗೆ ನೇತ್ರವನ್ನು ಅಳವಡಿಸಿ ಕಣ್ಣನ್ನು ಜೀವಂತವಿರುಸುವ ಮಹತ್ವದ ಕಾರ್ಯ ಮಾಡಲಾಗಿದೆ ಎಂದು ಹೇಳಿದರು. ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಯಲ್ಲಾ ರಮೇಶ್‌ಬಾಬು ಅವರು ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿ, ಒಬ್ಬ ವ್ಯಕ್ತಿ ದಾನ ಮಾಡಿದ ನೇತ್ರಗಳು ಇಬ್ಬರು ಕಾರ್ನಿಯಾ ಅಂಧರಿಗೆ ದೃಷ್ಟಿ ಮರಳಿ ನೀಡುತ್ತವೆ, ನೇತ್ರದಾನ ಪ್ರತಿಯೊಂದು ಕುಟುಂಬದ ಸಂಪ್ರದಾಯವಾಗಬೇಕು. ಪ್ರತಿಯೊಬ್ಬ ಅಂಧ ವ್ಯಕ್ತಿ ಸಹ ಜಗತ್ತನ್ನು ನೋಡುವ ಅಪೂರ್ವ ಕ್ಷಣಗಳಿಗೆ ಕೈ ಜೋಡಿಸೋಣ ಎಂದು ಹೇಳಿದರು. ಈಗಾಗಲೇ ಜಿಲ್ಲೆಯಲ್ಲಿ ಜಿಲ್ಲಾ ಅಂಧತ್ವ ನಿಯಂತ್ರಣ ಕಾರ್ಯಕ್ರಮದ ಮೂಲಕ ಜಿಲ್ಲಾಡಳಿತದ ಸಹಕಾರದೊಂದಿಗೆ ಎನ್‌ಎಮ್‌ಡಿಸಿ, ಸಿಎಸ್‌ಆರ್ ಅನುದಾನದಡಿ ಬಿಮ್ಸ್ ಉಚಿತ ಕಣ್ಣಿನಪೊರೆ ಶಸ್ತçಚಿಕಿತ್ಸೆ ದೃಷ್ಟಿದೋಷ ಉಳ್ಳವರಿಗೆ ಕನ್ನಡಕ ವಿತರಣೆ ಕೈಗೊಳ್ಳಲಾಗುತ್ತಿದ್ದು, ಪ್ರಸ್ತುತ ವರ್ಷ 2741 ಕನ್ನಡಕಗಳನ್ನು ವಿತರಿಸಲಾಗಿದ್ದು, 6011 ಜನರಿಗೆ ಕಣ್ಣಿನ ಪೊರೆ ಶಸ್ತçಚಿಕಿತ್ಸೆ ಮಾಡಲಾಗಿದೆ ಎಂದು ಅವರು ಹೇಳಿದರು. ಈಗಾಗಲೇ ಬಳ್ಳಾರಿ ಜಿಲ್ಲೆಯು ಅಂಗಾAಗ ದಾನದಲ್ಲಿ 4722 ಜನರು ಅಂಗಾAಗ ದಾನ ನೋಂದಣಿ ಮಾಡುವ ಮೂಲಕ ರಾಷ್ಟçಮಟ್ಟದಲ್ಲಿ ಮೊದಲ ಸ್ಥಾನದಲ್ಲಿದ್ದು, ಪ್ರತಿಯೊಬ್ಬರು ಮುಂದೆ ಬಂದು hಣಣಠಿs://ತಿತಿತಿ.ರಿeevಚಿsಚಿಡಿಣhಚಿಞಚಿಣhe.ಞಚಿಡಿ.go.iಟಿ ನಲ್ಲಿ ನೋಂದಣಿ ಮಾಡಿಸಬೇಕು ಎಂದು ಕೋರಿದರು. ಈ ಸಂದರ್ಭದಲ್ಲಿ ಜಿಲ್ಲಾ ಅಂಧತ್ವ ನಿಯಂತ್ರಣ ಅಧಿಕಾರಿ ಡಾ.ವೀರೇಂದ್ರ ಕುಮಾರ್, ನೇತ್ರ ತಜ್ಞ ಡಾ.ಮಧನ್ ಜೋಶಿ, ವೈದ್ಯಕೀಯ ಅಧೀಕ್ಷಕ ಡಾ.ಚಿದಂಬರA, ನೇತ್ರ ವಿಭಾಗದ ಮುಖ್ಯಸ್ಥ ಡಾ.ಯೋಗೇಶ್, ನೇತ್ರ ಭಂಡಾರದ ನಿರ್ದೇಶಕ ಡಾ.ಪರಸಪ್ಪ, ನರ್ಸಿಂಗ್ ಕಾಲೇಜು ಪ್ರಾಂಶುಪಾಲರಾದ ಸುಮ, ನೇತ್ರ ವಿಭಾಗದ ಡಾ.ರಮೇಶ್ ನಡಮನಿ ಸೇರಿದಂತೆ ವೈದ್ಯ ವಿದ್ಯಾರ್ಥಿಗಳು, ನರ್ಸಿಂಗ್ ಪ್ರಶಿಕ್ಷಣಾರ್ಥಿಗಳು ಉಪಸ್ಥಿತರಿದ್ದರು. ---------

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ