ಮಂಗಳವಾರ, ಸೆಪ್ಟೆಂಬರ್ 3, 2024
ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ; ಮೆಟ್ರಿಕ್ ಪೂರ್ವ ವಿದ್ಯಾರ್ಥಿವೇತನಕ್ಕಾಗಿ ಅರ್ಜಿ ಆಹ್ವಾನ
ಬಳ್ಳಾರಿ,ಸೆ.03(ಕರ್ನಾಟಕ ವಾರ್ತೆ):
ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ವತಿಯಿಂದ ಪ್ರಸ್ತಕ ಸಾಲಿಗೆ 1 ರಿಂದ 8ನೇ ತರಗತಿ ಮೆಟ್ರಿಕ್ ಪೂರ್ವ ವ್ಯಾಸಂಗ ಮಾಡುತ್ತಿರುವ ಅಲ್ಪಸಂಖ್ಯಾತರ ವಿದ್ಯಾರ್ಥಿಗಳಿಂದ ಆನ್‌ಲೈನ್ ರಾಜ್ಯ ವಿದ್ಯಾರ್ಥಿವೇತನ ಪೋರ್ಟಲ್ (ಎಸ್‌ಎಸ್‌ಪಿ ಪೋರ್ಟಲ್) ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿ ಸಲ್ಲಿಸಲು ಅನ್‌ಲೈನ್ hಣಣಠಿs://ssಠಿ,ಞಚಿಡಿಟಿಚಿಣಞಚಿ.go.iಟಿ/ ವೆಬ್‌ಸೈಟ್ ಜಾಲತಾಣಕ್ಕೆ ಭೇಟಿ ನೀಡಬಹುದು. ಅರ್ಜಿ ಸಲ್ಲಿಸಲು ಅಕ್ಟೋಬರ್ 31 ಕೊನೆಯ ದಿನವಾಗಿದೆ.
ಅರ್ಹತೆ:
ಅಲ್ಪಸಂಖ್ಯಾತರ ಸಮುದಾಯಕ್ಕೆ ಸೇರಿದ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಸಿಖ್, ಭೌದ್ದ ಮತ್ತು ಪಾರ್ಸಿ ಜನಾಂಗಕ್ಕೆ ಸೇರಿದವರಾಗಿರಬೇಕು. ಎಲ್ಲಾ ಮೂಲಗಳಿಂದ ವಿದ್ಯಾರ್ಥಿಯ ಪಾಲಕರು, ಪೋಷಕರ ವಾರ್ಷಿಕ ಆದಾಯ ರೂ.1 ಲಕ್ಷ ಮೀರಿರಬಾರದು.
ಸೂಚನೆ:
ಪ್ರಸಕ್ತ ಶೈಕ್ಷಣಿಕ ವರ್ಷದಲ್ಲಿ 1ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳು ಹೊಸದಾಗಿ ಅರ್ಜಿಯನ್ನು ಸಲ್ಲಿಸಬೇಕು. ಕಳೆದ ವರ್ಷದಲ್ಲಿ ವಿದ್ಯಾರ್ಥಿವೇತನ ಮಂಜೂರಾದ ವಿದ್ಯಾರ್ಥಿಗಳ ಅರ್ಜಿಗಳನ್ನು ಸ್ವಯಂ ನವೀಕರಣ ಎಂದು ಪರಿಗಣಿಸಲಾಗುತ್ತಿದ್ದು, ಮತ್ತೋಮ್ಮೆ ಅರ್ಜಿ ಸಲ್ಲಿಸುವ ಅವಶ್ಯಕತೆ ಇರುವುದಿಲ್ಲ.
ಹಿಂದಿನ ವರ್ಷ ವಿದ್ಯಾರ್ಥಿವೇತನಕ್ಕೆ ಅರ್ಜಿ ಸಲ್ಲಿಸಿ, ವಿದ್ಯಾರ್ಥಿವೇತನ ಮಂಜೂರಾಗದೇ ಇದ್ದಲ್ಲಿ ಅಂತಹ ವಿದ್ಯಾರ್ಥಿಗಳು ಹೊಸದಾಗಿ ಅರ್ಜಿ ಸಲ್ಲಿಸಬಹುದು. ವಿದ್ಯಾರ್ಥಿಗಳು ಬ್ಯಾಂಕ್ ಖಾತೆಗೆ ಆಧಾರ್ ಸೀಡಿಂಗ್ ಮತ್ತು ಎನ್‌ಸಿಪಿಐ ಮ್ಯಾಪಿಂಗ್ ಆಕ್ಟಿವ್ ಆಗಿರುವ ಬಗ್ಗೆ ಖಚಿತಪಡಿಸಿಕೊಳ್ಳಬೇಕು.
ವಿವರಗಳಿಗಾಗಿ ಜಿಲ್ಲಾ ಹಾಗೂ ತಾಲ್ಲೂಕು ಮಾಹಿತಿ ಕೇಂದ್ರಗಳ ದೂಸಂ: ಬಳ್ಳಾರಿ-08392-200215/224 ಮತ್ತು 831032111, ಸಿರುಗುಪ್ಪ-9148889975, ಸಂಡೂರು-9036925966 ಸಂಪರ್ಕಿಸಬಹುದು.
ಹೆಚ್ಚಿನ ಮಾಹಿತಿಗಾಗಿ ಜೋಳದರಾಶಿ ದೊಡ್ಡನಗೌಡ ರಂಗಮAದಿರ ಹತ್ತಿರದ ಮೌಲಾನ ಅಜಾದ ಭವನದ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿಗಳ ಕಚೇರಿ ಅಥವಾ ಅಲ್ಪಸಂಖ್ಯಾತರ ಜಿಲ್ಲಾ ಹಾಗೂ ತಾಲ್ಲೂಕು ಮಾಹಿತಿ ಕೇಂದ್ರಗಳಿಗೆ ಸಂಪರ್ಕಿಸಬಹುದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ವಿಠೋಬಾ ಹೊನಕಾಂಡೆ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
---------
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)
ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ