ಸೋಮವಾರ, ಸೆಪ್ಟೆಂಬರ್ 23, 2024
“ಮೈಸೂರು ದಸರಾ ಕನ್ನಡ ಪುಸ್ತಕ ಮಾರಾಟ ಮೇಳ”; ಮಳಿಗೆ ಕಾಯ್ದಿರಿಸಲು ಆಹ್ವಾನ
ಬಳ್ಳಾರಿ,ಸೆ.23(ಕರ್ನಾಟಕ ವಾರ್ತೆ):
ಮೈಸೂರು ದಸರಾ ಉತ್ಸವ-2024 ರಲ್ಲಿ ಕನ್ನಡ ಪುಸ್ತಕ ಪ್ರಾಧಿಕಾರ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಮೈಸೂರು ದಸರಾ ಉತ್ಸವ ಸಮಿತಿ ಇವರ ಸಂಯುಕ್ತಾಶ್ರಯದಲ್ಲಿ ಅ.03 ರಿಂದ 11 ರವರೆಗೆ “ಮೈಸೂರು ದಸರಾ ಕನ್ನಡ ಪುಸ್ತಕ ಮಾರಾಟ ಮೇಳ-2024”ನ್ನು ಸ್ಕೌಟ್ ಮತ್ತು ಗೈಡ್ಸ್ ಮೈದಾನ, ಹಳೆಯ ಡಿ.ಸಿ ಕಚೇರಿ ಎದುರು, ಮೈಸೂರು ಇಲ್ಲಿ ಏರ್ಪಡಿಸಲಾಗುವುದು. ಈ ಪುಸ್ತಕ ಮೇಳದಲ್ಲಿ ಕನ್ನಡ ಪ್ರಕಾಶಕರು/ಮಾರಾಟಗಾರರು ಭಾಗವಹಿಸಬಹುದಾಗಿದ್ದು, ಮಳಿಗೆಯೊಂದಕ್ಕೆ ರೂ.1,000ಗಳ ಭದ್ರತಾ ಠೇವಣಿ ಡಿ.ಡಿ.ಯನ್ನು ಆಡಳಿತಾಧಿಕಾರಿಗಳು, ಕನ್ನಡ ಪುಸ್ತಕ ಪ್ರಾಧಿಕಾರ, ಬೆಂಗಳೂರು – ಅವರ ಹೆಸರಿನಲ್ಲಿ ಡಿಡಿಗಳನ್ನು ಸಲ್ಲಿಸಬೇಕು.
ಮೇಳದಲ್ಲಿ ಭಾಗವಹಿಸಲು ಇಚ್ಚಿಸುವ ಪ್ರಕಾಶಕರು/ಮಾರಾಟಗಾರರು ನಿಗದಿತ ಅರ್ಜಿ ನಮೂನೆಯನ್ನು ಕನ್ನಡ ಪುಸ್ತಕ ಪ್ರಾಧಿಕಾರ, ಕನ್ನಡಭವನ, ಜೆ.ಸಿ.ರಸ್ತೆ, ಬೆಂಗಳೂರಿನ ಕಚೇರಿ ಅಥವಾ ಆಯಾ ಜಿಲ್ಲೆಯಲ್ಲಿರುವ ಸಹಾಯಕ ನಿರ್ದೇಶಕರು, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಕಚೇರಿಗಳಲ್ಲಿ ಅಥವಾ ಪ್ರಾಧಿಕಾರದ ವೆಬ್‌ಸೈಟ್‌ನಲ್ಲಿ https://kpp.karnataka.gov.in ನಲ್ಲಿ ಉಚಿತವಾಗಿ ಪಡೆದುಕೊಳ್ಳಬಹುದಾಗಿದೆ.
ಭರ್ತಿ ಮಾಡಿದ ಅರ್ಜಿಯನ್ನು ಡಿ.ಡಿ.ಯೊಂದಿಗೆ ಸೆ.30 ರಂದು ಸಂಜೆ 5ರೊಳಗೆ ಆಡಳಿತಾಧಿಕಾರಿಗಳು, ಕನ್ನಡ ಪುಸ್ತಕ ಪ್ರಾಧಿಕಾರ, ಕನ್ನಡ ಭವನ, ಜೆ.ಸಿ.ರಸ್ತೆ, ಬೆಂಗಳೂರು–560002, ಅವರ ಹೆಸರಿಗೆ ಅಂಚೆಯ ಮೂಲಕ ಹಾಗೂ ಇ-ಮೇಲ್ kannadappradhikara@gmail.com ರ ಮೂಲಕ ಸಲ್ಲಿಸಬೇಕು. ನಿರ್ಮಿಸಲಾಗುವ 60 ಮಳಿಗೆಗಳನ್ನು ಆದ್ಯತೆಯ ಮೇರೆಗೆ ಹಂಚಿಕೆ ಮಾಡಲಾಗುವುದು.
ಹೆಚ್ಚಿನ ಮಾಹಿತಿಗಾಗಿ ಬೆಂಗಳೂರಿನ ಜೆ.ಸಿ.ರಸ್ತೆಯ ಕನ್ನಡ ಭವನದ ಕನ್ನಡ ಪುಸ್ತಕ ಪ್ರಾಧಿಕಾರದ ಆಡಳಿತಾಧಿಕಾರಿಗಳ ಕಚೇರಿ ಹಾಗೂ ದೂ:080-22484516/ 22107704 ಗೆ ಸಂಪರ್ಕಿಸಬಹುದು ಎಂದು ಪ್ರಾಧಿಕಾರದ ಆಡಳಿತಾಧಿಕಾರಿ ಕೆ.ಬಿ.ಕಿರಣ್ ಸಿಂಗ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
-----------
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)
ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ