ಗುರುವಾರ, ಸೆಪ್ಟೆಂಬರ್ 19, 2024
ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ: ಅರ್ಜಿ ಸಲ್ಲಿಕೆಯ ಅವಧಿ ವಿಸ್ತರಣೆ
ಬಳ್ಳಾರಿ,ಸೆ.19(ಕರ್ನಾಟಕ ವಾರ್ತೆ):
ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ವತಿಯಿಂದ ಪ್ರಸ್ತಕ ಸಾಲಿನಲ್ಲಿ ಜಿಲ್ಲೆಯಲ್ಲಿ ನೋಂದಾಯಿತ ಮದರಸಾಗಳಿಗೆ ಔಪಚಾರಿಕ ಮತ್ತು ಗಣಕೀಕೃತ ಶಿಕ್ಷಣ ನೀಡಲು ಅನುದಾನ ಒದಗಿಸಲಾಗುತ್ತಿದ್ದು, ಅರ್ಹ ಮದರಸಾ ಸಂಸ್ಥೆಗಳಿAದ ಈಗಾಗಲೇ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಕೆಯ ಅವಧಿಯನ್ನು ಅಕ್ಟೋಬರ್ 15 ರ ವರೆಗೆ ವಿಸ್ತರಿಸಲಾಗಿದೆ.
ಹೆಚ್ಚಿನ ಮಾಹಿತಿಗಾಗಿ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿಗಳ ಕಚೇರಿ ಅಥವಾ ದೂ.08392-200125, 224 ಹಾಗು ಜಿಲ್ಲೆಯ ಎಲ್ಲಾ ಅಲ್ಪಸಂಖ್ಯಾತರ ತಾಲೂಕು ಮಾಹಿತಿ ಕೇಂದ್ರಗಳಿಗೆ ಭೇಟಿ ನೀಡಿ ಮಾಹಿತಿ ಪಡೆಯಬಹುದು.
ಹೆಚ್ಚಿನ ವಿವರಗಳಿಗಾಗಿ hಣಣಠಿ://ಜom.ಞಚಿಡಿಟಿಚಿಣಚಿಞಚಿ.gov.iಟಿ ಲಿಂಕ್ ನೋಡಬಹುದು ಮತ್ತು ಸಹಾಯವಾಣಿ ಮೊ.8277799990 ಗೆ ಸಂಪರ್ಕಿಸಬಹುದು ಎಂದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ವಿಟೋಬಾ ಹೊನಕಾಂಡೆ ಅವರು ಪ್ರಕಣೆಯಲ್ಲಿ ತಿಳಿಸಿದ್ದಾರೆ.
--------
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)
ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ