ಸೋಮವಾರ, ಸೆಪ್ಟೆಂಬರ್ 9, 2024

ಆಸ್ತಿ ತೆರಿಗೆ ಪಾವತಿ ರಿಯಾಯಿತಿಯ ಅವಧಿ ವಿಸ್ತರಣೆ

ಬಳ್ಳಾರಿ,ಸೆ.09(ಕರ್ನಾಟಕ ವಾರ್ತೆ): ಪ್ರಸಕ್ತ ಸಾಲಿನ ಆಸ್ತಿ ತೆರಿಗೆ ಪಾವತಿ ಹೆಚ್ಚಿಸಲು ಸಾರ್ವಜನಿಕರಿಗೆ ಸ್ವಯಂ ತೆರಿಗೆ ಕಟ್ಟಲು ಉತ್ತೇಜಿಸುವ ನಿಟ್ಟಿನಲ್ಲಿ ಪ್ರಸ್ತಕ ಆರ್ಥಿಕ ವರ್ಷದ 30 ದಿನಗಳೊಳಗಾಗಿ ಪೂರ್ಣ ಪ್ರಮಾಣ ತೆರಿಗೆ ಪಾವತಿಸಿದ್ದಲ್ಲಿ ಶೇ.05 ರಷ್ಟು ರಿಯಾಯಿತಿ ನೀಡುವ ಅವಧಿಯನ್ನು ಸೆ.14ರ ವರೆಗೆ ವಿಸ್ತರಿಸಲಾಗಿದೆ. ಸೆ.14 ರಂದು ನಡೆಯುವ ರಾಷ್ಟಿçÃಯ ಲೋಕ್ ಅದಾಲತ್ ಹಿನ್ನಲೆಯಲ್ಲಿ ಸ್ಥಳೀಯ ಸಂಸ್ಥೆಗಳಾದ ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ಹಾಗೂ ಮಹಾನಗರ ಪಾಲಿಕೆ ವ್ಯಾಪ್ತಿಗೆ ಒಳಪಡುವ ತೆರಿಗೆದಾರರು ನಿಗದಿತ ಅವಧಿಯಲ್ಲಿ ಪೂರ್ಣ ಪ್ರಮಾಣದ ಆಸ್ತಿ ತೆರಿಗೆ ಪಾವತಿಸುವ ಈ ಅವಕಾಶವನ್ನು ಸದುಪಯೋಗಪಡೆದುಕೊಳ್ಳಬೇಕು ಎಂದು ಜಿಲ್ಲಾ ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಆಧ್ಯಕ್ಷರೂ ಆದ ಕೆ.ಜಿ.ಶಾಂತಿ ಅವರು ತಿಳಿಸಿದ್ದಾರೆ. ------

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ