ಸೋಮವಾರ, ಸೆಪ್ಟೆಂಬರ್ 2, 2024
ಅಂಗನವಾಡಿ ಕಾರ್ಯಕರ್ತೆ, ಸಹಾಯಕಿಯರ ಹುದ್ದೆಗಳಿಗೆ ಅರ್ಜಿ ಆಹ್ವಾನ
ಬಳ್ಳಾರಿ,ಸೆ.02(ಕರ್ನಾಟಕ ವಾರ್ತೆ):
ಸಿರುಗುಪ್ಪ ಮತ್ತು ಕಂಪ್ಲಿ ತಾಲ್ಲೂಕಿನ ಶಿಶು ಅಭಿವೃದ್ಧಿ ಯೋಜನೆಯ ಪುರಸಭೆ ಮತ್ತು ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಖಾಲಿಯಿರುವ ಅಂಗನವಾಡಿ ಕಾರ್ಯಕರ್ತೆ, ಸಹಾಯಕಿಯರ ಗೌರವ ಸೇವೆ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಉಪನಿರ್ದೇಶಕರು ತಿಳಿಸಿದ್ದಾರೆ.
43 ಅಂಗನವಾಡಿ ಕಾರ್ಯಕರ್ತೆಯರು ಮತ್ತು 94 ಸಹಾಯಕಿಯರ ಹುದ್ದೆಗಳಿಗೆ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಅರ್ಹ ಮಹಿಳಾ ಅಭ್ಯರ್ಥಿಗಳು ಅರ್ಜಿಯನ್ನು hಣಣಠಿ://ಞಚಿಡಿಟಿemಚಿಞಚಿoಟಿe.ಞಚಿಡಿ.ಟಿiಛಿ.iಟಿ/ಚಿbಛಿಜ/ ವೆಬ್‌ಸೈಟ್ ಗೆ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ಅಕ್ಟೋಬರ್ 04 ಕೊನೆಯ ದಿನವಾಗಿದೆ.
ಹೆಚ್ಚಿನ ಮಾಹಿತಿಗಾಗಿ ಸಿರುಗುಪ್ಪ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಾರ್ಯಾಲಯ ಅಥವಾ ದೂ.08396-220203 ಗೆ ಸಂಪರ್ಕಿಸಬಹುದು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
----------
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)
ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ