ಶನಿವಾರ, ಸೆಪ್ಟೆಂಬರ್ 21, 2024
ಕಾನೂನು ಆಡಳಿತ ನ್ಯಾಯಾಧೀಕರಣ ತರಬೇತಿ; ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ
ಬಳ್ಳಾರಿ,ಸೆ.21(ಕರ್ನಾಟಕ ವಾರ್ತೆ):
ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಪರಿಶಿಷ್ಟ ಜಾತಿಯ ಕಾನೂನು ಪದವೀಧರರಿಗೆ ಕಾನೂನು ಆಡಳಿತ ನ್ಯಾಯಾಧೀಕರಣದಲ್ಲಿ ತರಬೇತಿ ಪಡೆಯಲು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸುವ ಅವಧಿಯನ್ನು ಸೆ.30ರ ವರೆಗೆ ವಿಸ್ತರಿಸಲಾಗಿದೆ ಎಂದು ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕ ಬಿ.ಮಲ್ಲಿಕಾರ್ಜುನ ಅವರು ತಿಳಿಸಿದ್ದಾರೆ.
ಪರಿಶಿಷ್ಟ ಜಾತಿಯ ಕಾನೂನು ಪದವೀಧರರಿಗೆ ಪ್ರಸಕ್ತ ಸಾಲಿನ ಆಡಳಿತ ನ್ಯಾಯಾಧೀಕರಣದಲ್ಲಿ ಎರಡು ವರ್ಷಗಳ ವೃತ್ತಿ ತರಬೇತಿಯಲ್ಲಿ ಶಿಷ್ಯವೇತನ ನೀಡಲಾಗುತ್ತದೆ.
ಅರ್ಹ ಪದವೀಧರರು ಇಲಾಖೆಯ ವೆಬ್‌ಸೈಟ್ www.sw.kar.nic.in ಗೆ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದು.
ಹೆಚ್ಚಿನ ಮಾಹಿತಿಗಾಗಿ ಕೋಟೆ ಪ್ರದೇಶದ ಸಮಾಜ ಕಲ್ಯಾಣ ಇಲಾಖೆ ಕಚೇರಿಗೆ ಅಥವಾ ದೂ:08392267932 ಗೆ ಸಂಪರ್ಕಿಸಬಹುದು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
--------
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)
ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ